Saturday, November 21, 2026
Saturday, November 21, 2026

ಸರಸ್ವತಿ ವಿದ್ಯಾಲಯ: ಕನ್ನಡ ಸಿರಿ ಕಾರ್ಯಕ್ರಮ

ಸರಸ್ವತಿ ವಿದ್ಯಾಲಯ: ಕನ್ನಡ ಸಿರಿ ಕಾರ್ಯಕ್ರಮ

Date:

ಗಂಗೊಳ್ಳಿ, ನ.20: ಒಂದು ಭಾಷೆ ಬೆಳೆಯಲು ವಿವಿಧ ಭಾಷೆಗಳ ನಡುವೆ ಸಮನ್ವಯ ಅಗತ್ಯವಿದೆ. ಭಾಷೆಯನ್ನು ಬಳಸುವುದು ಭಾಷೆಯ ಉಳಿವು ಮತ್ತು ಬೆಳವಣಿಗೆಗೆ ಮೂಲ ದಾರಿ. ನಮ್ಮ ಮಾತೃಭಾಷೆಯನ್ನು ಪ್ರೀತಿಸುವುದರ ಜೊತೆಯಲ್ಲಿ ವಿವಿಧ ಭಾಷೆಗಳನ್ನು ಗೌರವಿಸೋಣ ಎಂದು ಕನ್ನಡ ಉಪನ್ಯಾಸಕರಾದ ಹೆಚ್. ಸುಜಯೀಂದ್ರ ಹಂದೆ ಅವರು ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಎಸ್ ವಿ ಕಾಮರ್ಸ್ ಕ್ಲಬ್ ವತಿಯಿಂದ ನಡೆದ ಕನ್ನಡ ಸಿರಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.

ಸಮಾಜ ಸೇವಕ ಆನಂದ ಬಿಲ್ಲವ ಬೈಲುಮನೆ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ವಿದ್ಯಾರ್ಥಿ ಪ್ರತಿನಿಧಿಗಳಾದ ಅದಿತಿ ಎಸ್ ಖಾರ್ವಿ, ನಿಸರ್ಗ. ಖಾರ್ವಿ ಮತ್ತು ಸನ್ಮಿತಾ ಖಾರ್ವಿ ಕನ್ನಡದ ಬಗೆಗೆ ಅಭಿಪ್ರಾಯಗಳನ್ನು ಹಂಚಿಕೊಂಡರು. ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ ಸಿ ಅಧ್ಯಕ್ಷತೆ ವಹಿಸಿದ್ದರು. ಎಸ್ ವಿ ಕಾಮರ್ಸ್ ಕ್ಲಬ್ ಸಂಯೋಜಕ ನರೇಂದ್ರ ಎಸ್ ಗಂಗೊಳ್ಳಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವರದ ಹೆಬ್ಬಾರ್ ಸ್ವಾಗತಿಸಿದರು. ಮಾನ್ವಿ ಮತ್ತು ಸಹನಾ ಕನ್ನಡ ಗೀತೆಯನ್ನು ಹಾಡಿದರು. ಸಿಂಚನ ನಿರೂಪಿಸಿದರು ಶ್ರೀನಿವಾಸ ಪೈ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತೀವ್ರತರ ಅತಿಸಾರ ಭೇದಿ ನಿಯಂತ್ರಣ ಅಭಿಯಾನ

ಉಡುಪಿ, ನ.20: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತಾಲೂಕು ಸಾರ್ವಜನಿಕ ಆಸ್ಪತ್ರೆ ಕುಂದಾಪುರ...

‘ಮಕ್ಕಳ ರಕ್ಷಣೆಯಲ್ಲಿ ಪೊಲೀಸ್ ಇಲಾಖೆ ಪಾತ್ರ’ -ಒಂದು ದಿನದ ತರಬೇತಿ ಕಾರ್ಯಾಗಾರ

ಉಡುಪಿ, ನ.20: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ,...

ಶಾಸ್ತ್ರೀಯ ಶಿಸ್ತು ಜಾನಪದ ಸ್ವಾತಂತ್ರ‍್ಯದಿಂದ ಯಕ್ಷಗಾನಕ್ಕೆ ಜನಮನ್ನಣೆ: ಪ್ರೊ. ಎಂ.ಎಲ್. ಸಾಮಗ

ಉಡುಪಿ, ನ.20: ಸಾಂಸ್ಕೃತಿಕ ವಿಶ್ವ ಮನ್ನಣೆ ಪಡೆಯಲು ರಾಜ್ಯದ ಎಲ್ಲಾ ಭಾಗವು...

ಸಿಂಹಾವಲೋಕನ ತಂತ್ರ ಬಳಸಿ ಮಹಾಭಾರತ ಕತೆಯನ್ನು ಪರಿಣಾಮಕಾರಿಯಾಗಿ ಕಟ್ಟಿಕೊಟ್ಟ ಶಕ್ತಿಕವಿ ರನ್ನ: ಡಾ. ಪಾದೇಕಲ್ಲು ವಿಷ್ಣು ಭಟ್

ಉಡುಪಿ, ನ.20: ಪ್ರಾಚೀನ ಕಾವ್ಯಗಳನ್ನು ಓದುಗಬ್ಬ ಪಾಡುಗಬ್ಬಗಳಾಗಿ ನಮ್ಮ ಪರಂಪರೆ ಕಟ್ಟಿಕೊಟ್ಟಿದೆ....
error: Content is protected !!