Saturday, November 21, 2026
Saturday, November 21, 2026

ಉಚಿತ ಆರೋಗ್ಯ ಶಿಬಿರಗಳು ಅತ್ಯಂತ ಅವಶ್ಯಕ: ಪ್ರಸಾದ್ ಮಲ್ಯ

ಉಚಿತ ಆರೋಗ್ಯ ಶಿಬಿರಗಳು ಅತ್ಯಂತ ಅವಶ್ಯಕ: ಪ್ರಸಾದ್ ಮಲ್ಯ

Date:

ಉಡುಪಿ, ನ.21: ಹರಿಖಂಡಿಗೆಯ ಮುನಿಯಾಲು ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಸಂಸ್ಥೆಯ ವತಿಯಿಂದ 9ನೇ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನಾಚರಣೆ ಆಚರಿಸಲಾಯಿತು. ಈ ಪ್ರಯುಕ್ತ ಹರಿಖಂಡಿಗೆ ಗ್ರಾಮದ ಗ್ರಾಮೀಣ ಜನರ ಆರೋಗ್ಯ ರಕ್ಷಣೆಯ ಉದ್ದೇಶದಿಂದ ಉಚಿತ ವೈದ್ಯಕೀಯ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು. ಶಿಬಿರದ ಅಂಗವಾಗಿ ನಡೆದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಮುನಿಯಾಲು ಆಯುರ್ವೇದ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಪ್ರಾಂಶುಪಾಲರಾದ ಡಾ. ಸತ್ಯನಾರಾಯಣ ಬಿ. ಅವರು ವಹಿಸಿದ್ದರು. ಮುನಿಯಾಲು ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಸಂಸ್ಥೆಯ ಪ್ರಾಂಶುಪಾಲರಾದ ಡಾ. ಅಪರ್ಣಾ ಸುರೇಂದ್ರ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಬೈರಂಪಳ್ಳಿ ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷರಾದ ಪ್ರಸಾದ್ ಮಲ್ಯ ಮುಖ್ಯ ಅತಿಥಿಗಳಾಗಿ ಹಾಗೂ ಹರಿಖಂಡಿಗೆಯ ಶ್ರೀ ಮಹಾಲಸಾ ನಾರಾಯಣಿ ದೇವಸ್ಥಾನದ ಧರ್ಮದರ್ಶಿಗಳಾದ ಸುರೇಶ್ ಗುರೂಜಿ ಅವರು ಗೌರವ ಅತಿಥಿಗಳಾಗಿ ಭಾಗವಹಿಸಿದ್ದರು. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಮುಖ್ಯ ಅತಿಥಿ ಪ್ರಸಾದ್ ಮಲ್ಯ ಅವರು, ಗ್ರಾಮೀಣ ಪ್ರದೇಶದ ಜನರಿಗೆ ಇಂತಹ ಉಚಿತ ಆರೋಗ್ಯ ಶಿಬಿರಗಳು ಅತ್ಯಂತ ಅವಶ್ಯಕವಾಗಿದ್ದು, ಮುಂಬರುವ ವರ್ಷಗಳಲ್ಲಿ ಹರಿಖಂಡಿಗೆ ಗ್ರಾಮದ ಇನ್ನೂ ಹೆಚ್ಚಿನ ಜನರಿಗೆ ಇದರ ಪ್ರಯೋಜನ ತಲುಪುವಂತಾಗಲಿ ಎಂದು ಆಶಿಸಿದರು. ಅಧ್ಯಕ್ಷೀಯ ನುಡಿಗಳನ್ನಾಡಿದ ಡಾ. ಸತ್ಯನಾರಾಯಣ ಭಟ್ ಅವರು, ಪ್ರಕೃತಿ ಚಿಕಿತ್ಸೆಯು ಭಾರತದ ಅತ್ಯಂತ ಪ್ರಾಚೀನ ವೈದ್ಯಕೀಯ ಪದ್ಧತಿಯಾಗಿದ್ದು, ಇಂದು ದಿನದಿಂದ ದಿನಕ್ಕೆ ಹೆಚ್ಚು ಜನಪ್ರಿಯಗೊಳ್ಳುತ್ತಿದೆ. ಮುಂದಿನ ದಿನಗಳಲ್ಲಿ ಅಂತರರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನವನ್ನು ಆಚರಿಸುವಂತಾಗಲಿ ಎಂದು ಹಾರೈಸಿದರು. ​ಗೌರವ ಅತಿಥಿ ಸುರೇಶ್ ಗುರೂಜಿ ಅವರು ಮಾತನಾಡಿ, ರೋಗ ತಡೆಗಟ್ಟುವಿಕೆಯಲ್ಲಿ ಪ್ರಕೃತಿ ಚಿಕಿತ್ಸಾ ವಿಧಾನಗಳ ಮಹತ್ವವನ್ನು ವಿವರಿಸಿದರು. ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ತಮ್ಮ ದೈನಂದಿನ ಚಟುವಟಿಕೆಗಳಲ್ಲಿ ಪ್ರಕೃತಿಯೊಂದಿಗೆ ಬೆರೆಯುವುದರಿಂದ ಸರ್ವತೋಮುಖ ಬೆಳವಣಿಗೆ ಸಾಧ್ಯ ಎಂದರು.

ಕಾಲೇಜಿನ ​ಪ್ರಾಂಶುಪಾಲರಾದ ಡಾ. ಅಪರ್ಣಾ ಸುರೇಂದ್ರ ಅವರು ಪ್ರಕೃತಿ ಚಿಕಿತ್ಸೆಯ ಪ್ರಾಚೀನ ಪರಂಪರೆ ಹಾಗೂ ಅದನ್ನು ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳುವ ಮಹತ್ವವನ್ನು ಒತ್ತಿ ಹೇಳಿದರು. ಪ್ರಕೃತಿ ಚಿಕಿತ್ಸೆ ಮತ್ತು ಆಯುಷ್ ವೈದ್ಯಕೀಯ ಪದ್ಧತಿಗಳು ಮನುಕುಲಕ್ಕೆ ದೊರೆತ ವರದಾನವಾಗಿದ್ದು, ರೋಗ ನಿರೋಧಕ ಆರೋಗ್ಯ ವ್ಯವಸ್ಥೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿವೆ ಎಂದು ತಿಳಿಸಿದರು. ಡಾ. ಅನುಪ್ರೀತ ಸ್ವಾಗತಿಸಿ, ಡಾ. ಸಂಗೀತಾ ವಂದಿಸಿದರು, ಇಂಟರ್ನ್ ವೈದ್ಯೆ ಡಾ. ವಾಸವಿ ಕಾರ್ಯಕ್ರಮ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವ್ಯವಹಾರಸ್ಥರ ಉತ್ತಮ ನಡವಳಿಕೆಯಿಂದ ಸಂಸ್ಥೆಯ ಮೌಲ್ಯ ವೃದ್ಧಿ: ನರೇಂದ್ರ ಎಸ್ ಗಂಗೊಳ್ಳಿ

ಕುಂದಾಪುರ, ನ.21: ಗಂಗೊಳ್ಳಿಯ ಶ್ರೀ ವೆಂಕಟೇಶ ಕೃಪಾ ಟ್ರೇಡರ್ಸ್ ಇವರು ಹಮ್ಮಿಕೊಂಡಿದ್ದ...

ವೈಯಕ್ತಿಕ ಬಿಸಿನೆಸ್ ಕರೆಸ್ಪಾಂಡೆಂಟ್‌ಗಳ ನೇಮಕಾತಿ : ಅರ್ಜಿ ಆಹ್ವಾನ

ಉಡುಪಿ, ನ.21: ಅಂಚೆ ಕಚೇರಿಯ ಬ್ಯಾಂಕ್ ಆದ ಇಂಡಿಯಾ ಪೋಸ್ಟ್ ಪೇಮೆಂಟ್ಸ್...

ಬಡ್ಡಿ ಸಹಾಯಧನ ಸಾಲದ ಖಾತೆಗೆ ಜಮಾ: ಪ್ರಸ್ತಾವನೆ ಆಹ್ವಾನ

ಉಡುಪಿ, ನ.21: ಕೇಂದ್ರ ಸರ್ಕಾರದ ಎಂ.ಎಸ್.ಎA.ಇ ಮಂತ್ರಾಲಯ ಹಾಗೂ ರಾಜ್ಯ ಸರ್ಕಾರದ...

ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ: ಬಿ. ಬಿ. ಹೆಗ್ಡೆ ಕಾಲೇಜಿನ ಶ್ರಾವ್ಯಾ ವಿಜಯ್ ಪ್ರಥಮ

ಕುಂದಾಪುರ, ನ.21: ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ....
error: Content is protected !!