Sunday, November 22, 2026
Sunday, November 22, 2026

ಬಡ್ಡಿ ಸಹಾಯಧನ ಸಾಲದ ಖಾತೆಗೆ ಜಮಾ: ಪ್ರಸ್ತಾವನೆ ಆಹ್ವಾನ

ಬಡ್ಡಿ ಸಹಾಯಧನ ಸಾಲದ ಖಾತೆಗೆ ಜಮಾ: ಪ್ರಸ್ತಾವನೆ ಆಹ್ವಾನ

Date:

ಉಡುಪಿ, ನ.21: ಕೇಂದ್ರ ಸರ್ಕಾರದ ಎಂ.ಎಸ್.ಎA.ಇ ಮಂತ್ರಾಲಯ ಹಾಗೂ ರಾಜ್ಯ ಸರ್ಕಾರದ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಸಹಯೋಗದೊಂದಿಗೆ ಅನುಷ್ಟಾನಗೊಳಿಸಲಾಗುತ್ತಿರುವ ವಿಶ್ವಬ್ಯಾಂಕ್ ನೆರವಿನ Raising and Accelerating MSME Performance (RAMP) ಯೋಜನೆಯಡಿ 2024 ರ ಸೆಪ್ಟಂಬರ್ 04 ರಂದು ಅಥವಾ ನಂತರ ವಾಣಿಜ್ಯ ಉತ್ಪಾದನೆಯನ್ನು ಆರಂಭಿಸಿರುವ ಜಿಲ್ಲೆಯ ಹೊಸ ಉತ್ಪಾದನಾ ಆಧಾರಿತ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕಾ ಘಟಕಗಳಿಗೆ (ವ್ಯಾಪಾರ ಹಾಗೂ ಸೇವಾ ವಲಯಕ್ಕೆ ಅವಕಾಶವಿಲ್ಲ) ಗರಿಷ್ಟ ರೂ. 1.00 ಕೋಟಿ ವರೆಗಿನ ಅವಧಿ ಸಾಲಕ್ಕೆ ಮೊದಲ 12 ತಿಂಗಳ ಬಡ್ಡಿಯಲ್ಲಿ ಶೇ. 6 ರಂತೆ ಅಥವಾ ಗರಿಷ್ಟ ರೂ. 6 ಲಕ್ಷಗಳವರೆಗೆ (ಯಾವುದು ಕಡಿಮೆಯೋ, ಅದು) ಒಂದು ಬಾರಿಯ ಬಡ್ಡಿ ಸಹಾಯಧನವನ್ನು ನೇರವಾಗಿ ಸಾಲದ ಖಾತೆಗೆ ಜಮೆ ಮಾಡಲು ಅರ್ಹ ಘಟಕಗಳಿಂದ ಪ್ರಸ್ತಾವನೆ ಆಹ್ವಾನಿಸಲಾಗಿದೆ.

ಆಸಕ್ತ ಹೊಸ ಉದ್ಯಮಿಗಳು ಸಂಬಂಧಪಟ್ಟ ಬ್ಯಾಂಕ್ ಶಾಖೆಯ ಮೂಲಕ ಜಿಲ್ಲಾ ಕೈಗಾರಿಕಾ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಜಂಟಿ ನಿರ್ದೇಶಕರ ಕಚೇರಿ, ಜಿಲ್ಲಾ ಕೈಗಾರಿಕಾ ಕೇಂದ್ರ, ಪ್ಲಾಟ್ ನಂ: 36ಸಿ, ಶಿವಳ್ಳಿ ಕೈಗಾರಿಕಾ ಪ್ರದೇಶ, ಮಣಿಪಾಲ, ಉಡುಪಿ ಇಲ್ಲಿಗೆ ಖುದ್ದಾಗಿ ಅಥವಾ ದೂರವಾಣಿ ದೂರವಾಣಿ ಸಂಖ್ಯೆ 0820-2575650, 0820-2575655 ಮೂಲಕ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವ್ಯವಹಾರಸ್ಥರ ಉತ್ತಮ ನಡವಳಿಕೆಯಿಂದ ಸಂಸ್ಥೆಯ ಮೌಲ್ಯ ವೃದ್ಧಿ: ನರೇಂದ್ರ ಎಸ್ ಗಂಗೊಳ್ಳಿ

ಕುಂದಾಪುರ, ನ.21: ಗಂಗೊಳ್ಳಿಯ ಶ್ರೀ ವೆಂಕಟೇಶ ಕೃಪಾ ಟ್ರೇಡರ್ಸ್ ಇವರು ಹಮ್ಮಿಕೊಂಡಿದ್ದ...

ವೈಯಕ್ತಿಕ ಬಿಸಿನೆಸ್ ಕರೆಸ್ಪಾಂಡೆಂಟ್‌ಗಳ ನೇಮಕಾತಿ : ಅರ್ಜಿ ಆಹ್ವಾನ

ಉಡುಪಿ, ನ.21: ಅಂಚೆ ಕಚೇರಿಯ ಬ್ಯಾಂಕ್ ಆದ ಇಂಡಿಯಾ ಪೋಸ್ಟ್ ಪೇಮೆಂಟ್ಸ್...

ಉಚಿತ ಆರೋಗ್ಯ ಶಿಬಿರಗಳು ಅತ್ಯಂತ ಅವಶ್ಯಕ: ಪ್ರಸಾದ್ ಮಲ್ಯ

ಉಡುಪಿ, ನ.21: ಹರಿಖಂಡಿಗೆಯ ಮುನಿಯಾಲು ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಸಂಸ್ಥೆಯ...

ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ: ಬಿ. ಬಿ. ಹೆಗ್ಡೆ ಕಾಲೇಜಿನ ಶ್ರಾವ್ಯಾ ವಿಜಯ್ ಪ್ರಥಮ

ಕುಂದಾಪುರ, ನ.21: ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ....
error: Content is protected !!