ಉಡುಪಿ, ನ.22: ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್‌ನಲ್ಲಿ ಖೇಲೋ ಕ್ರಿಯೇಟಿವ್ ಜೂನಿಯರ್ಸ್ ವಾರ್ಷಿಕ ಕ್ರೀಡಾಕೂಟದ ಉದ್ಘಾಟನೆಯು 21 ನವೆಂಬರ್ 2026, ಶನಿವಾರ ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್, ಸಪ್ತಗಿರಿ ಕ್ಯಾಂಪಸ್‌ನಲ್ಲಿ ನಡೆಯಿತು. ಮುಖ್ಯ ಅತಿಥಿಗಳಾದ ಅಂತರರಾಷ್ಟ್ರೀಯ ಮಟ್ಟದಲ್ಲಿ ಯೋಗದಲ್ಲಿ ಚಿನ್ನದ ಪದಕ ಗೆದ್ದಿರುವ ನಿಧಿ ಯು. ಆಚಾರ್ ಹಾಗೂ ಕ್ರಿಯೇಟಿವ್ ಕಾಲೇಜಿನ ಸಂಸ್ಥಾಪಕರಾದ ಡಾ. ಗಣನಾಥ್ ಶೆಟ್ಟಿ, ಆದರ್ಶ್ ಎಂ. ಕೆ., ಶುಭಲಕ್ಷ್ಮಿ ಅಶ್ವಥ್ ಹಾಗೂ ಆಂಗ್ಲ ಉಪನ್ಯಾಸಕರಾದ ರಾಜೇಶ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು.
ಕ್ರೀಡೆಯಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿಯಾಗುತ್ತದೆ ಎಂದು ತಿಳಿಸಿದರು. ಸೋಲು-ಗೆಲುವಿಗಿಂತ ಭಾಗವಹಿಸುವಿಕೆ ಮತ್ತು ಶಿಸ್ತು ಮುಖ್ಯ ಎಂದು ಹೇಳಿದರು. ಶಾಲೆಯ ಪ್ರಾಂಶುಪಾಲರಾದ ಅಕ್ಷತಾ ಆರ್. ಶೆಣೈ, ಶಿಕ್ಷಕ ವೃಂದ, ಪೋಷಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ವಿಜೇತ ಮಕ್ಕಳಿಗೆ ಮುಖ್ಯ ಅತಿಥಿಗಳು ಬಹುಮಾನ ವಿತರಿಸಿದರು. ಕಾರ್ಯಕ್ರಮದ ಮುಖ್ಯ ಸಂಯೋಜಕರಾದ ದೈಹಿಕ ಶಿಕ್ಷಣ ನಿರ್ದೇಶಕರು ಶಿವಾನಂದ ಎಂ. ಬಿಳಗಿ ಕ್ರೀಡಾಕೂಟ ಆಯೋಜಿಸಿದ್ದರು.




By
ForthFocus™