Monday, November 23, 2026
Monday, November 23, 2026

ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ- ಸರ್ಕಾರ ಆದೇಶಕ್ಕೆ ಶಾಸಕ ಯಶ್ಪಾಲ್ ಸುವರ್ಣ ಆಕ್ರೋಶ

ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ- ಸರ್ಕಾರ ಆದೇಶಕ್ಕೆ ಶಾಸಕ ಯಶ್ಪಾಲ್ ಸುವರ್ಣ ಆಕ್ರೋಶ

Date:

ಉಡುಪಿ, ನ.23: ರಾಜ್ಯ ಕಾಂಗ್ರೆಸ್ ಸರ್ಕಾರ ನಡೆಸುತ್ತಿರುವ ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದ ಕುರಿತು ಹೊರಡಿಸಿದ ಆದೇಶಕ್ಕೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯ ಸರ್ಕಾರ ರಾಜಕೀಯ ಲಾಭದ ದೃಷ್ಟಿಯಲ್ಲಿ ನಡೆಸಲು ಮುಂದಾಗಿರುವ ಸಮಾವೇಶಕ್ಕೆ ಸಾರ್ವಜನಿಕರ ತೆರಿಗೆಯ ಹಣವನ್ನು ನೀಡಲು ಗ್ರಾಮ ಪಂಚಾಯತ್ ಗಳು ಕಡ್ಡಾಯವಾಗಿ ನೀಡುವಂತೆ ಆದೇಶ ಹೊರಡಿಸಿರುವುದು ರಾಜ್ಯ ಸರ್ಕಾರದ ಆರ್ಥಿಕ ದಿವಾಳಿತನಕ್ಕೆ ಕೈಗನ್ನಡಿಯಾಗಿದೆ.

ಗ್ಯಾರಂಟಿ ಯೋಜನೆಗಳನ್ನು ಅವೈಜ್ಞಾನಿಕ ರೀತಿಯಲ್ಲಿ ಅನುಷ್ಠಾನ ಮಾಡಿ ರಾಜ್ಯದ ಆರ್ಥಿಕ ಬೊಕ್ಕಸವನ್ನು ದಿವಾಳಿ ಮಾಡಿ ಇದೀಗ ಗ್ರಾಮ ಪಂಚಾಯತ್ ನಲ್ಲಿ ಗ್ರಾಮದ ಅಭಿವೃದ್ಧಿಗೆ ವಿನಿಯೋಗಿಸಬೇಕಾದ ಮೊತ್ತವನ್ನು ರಾಜಕೀಯ ಪ್ರೇರಿತ ಕಾರ್ಯಕ್ರಮಕ್ಕೆ ಖರ್ಚು ಮಾಡಲು ಮುಂದಾಗುವ ಮೂಲಕ ಗ್ರಾಮ ಪಂಚಾಯತ್ ಗಳನ್ನೂ ದಿವಾಳಿಯಾಗಿಸಲು ಮುಂದಾಗಿದ್ದಾರೆ.

ರಾಜ್ಯ ಸರ್ಕಾರ ತಕ್ಷಣ ಗ್ರಾಮ ಪಂಚಾಯತ್ ಗಳ ತೆರಿಗೆ ಹಣವನ್ನು ಗ್ಯಾರಂಟಿ ಸಮಾವೇಶದ ಊಟೋಪಚಾರಕ್ಕೆ ನೀಡುವ ಆದೇಶವನ್ನು ತಕ್ಷಣ ಹಿಂಪಡೆಯಬೇಕು. ಇಲ್ಲದಿದ್ದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುವ ಅನಿವಾರ್ಯತೆ ಸೃಷ್ಟಿಯಾಗಲಿದೆ ಎಂದು ಯಶ್ಪಾಲ್ ಸುವರ್ಣ ಎಚ್ಚರಿಕೆ ನೀಡಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ನಗರದ ಸಮಗ್ರ ಅಭಿವೃದ್ಧಿಗೆ ಪೂರಕ ಮತ್ತು ಜನಸ್ನೇಹಿ ಮಾಸ್ಟರ್ ಪ್ಲ್ಯಾನ್ ರಚನೆಗೆ ಶಾಸಕ ಯಶ್ಪಾಲ್ ಸುವರ್ಣ ಸೂಚನೆ

ಉಡುಪಿ, ನ.23: ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಮೂಲಕ ಮಹಾಯೋಜನೆ (ಮಾಸ್ಟರ್ ಪ್ಲಾನ್)...

ಜನರ ವಿಶ್ವಾಸಕ್ಕೆ ತಕ್ಕಂತೆ ಜನಪರ ಆಡಳಿತ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಹಿರಿಯೂರು, ನ.23: ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ನೆಹರೂ ಮೈದಾನದಲ್ಲಿ ದೀಪ ಬೆಳಗುವ...

‘ಸಂಗಮʼ ಸಮ್ಮೇಳನ ಸಭಾಂಗಣ ಉದ್ಘಾಟನೆ

ಬೆಂಗಳೂರು, ನ.23: ವಿಧಾನಸೌಧದಲ್ಲಿ ನೂತನವಾಗಿ ನವೀಕರಿಸಲಾದ 'ಸಂಗಮʼ ಸಮ್ಮೇಳನ ಸಭಾಂಗಣವನ್ನು ಮುಖ್ಯಮಂತ್ರಿ...

ಪಡಿತರ ಚೀಟಿಗೆ ಇ-ಕೆವೈಸಿ ಜೋಡಣೆ: ನ. 30 ರವರೆಗೆ ಅವಧಿ ವಿಸ್ತರಣೆ

ಉಡುಪಿ, ನ.22: ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ನ್ಯಾಯಬೆಲೆ ಅಂಗಡಿಗಳಿಂದ ಪಡಿತರ...
error: Content is protected !!