Monday, November 23, 2026
Monday, November 23, 2026

ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ ಕಾರ್ಯಕ್ರಮ

ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ ಕಾರ್ಯಕ್ರಮ

Date:

ಉಡುಪಿ, ನ.23: ಕರ್ನಾಟಕ ಸರಕಾರದ ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ರಿಜ್ವಾನ್ ಅರ್ಷದ್ ಅವರು ನವೆಂಬರ್ 23 ರಿಂದ 25 ರ ವರೆಗೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ನ. 23 ರಂದು ರಾತ್ರಿ ಉಡುಪಿಗೆ ಆಗಮಿಸಿ, ವಾಸ್ತವ್ಯ ಮಾಡಲಿದ್ದಾರೆ. ನ. 24 ರಂದು ಬೆಳಗ್ಗೆ 9.30 ಕ್ಕೆ ಕಾಪು ವಿಧಾನಸಭಾ ಕ್ಷೇತ್ರದ ಬೈರಂಪಳ್ಳಿ ಸೇತುವೆ ಕಾಮಗಾರಿ ಶಂಕುಸ್ಥಾಪನಾ ಕಾರ್ಯಕ್ರಮ, ನಂತರ ಬಲೈಪಾದೆ ಜಂಕ್ಷನ್, ಕಲ್ಸಂಕ ಜಂಕ್ಷನ್ ಹಾಗೂ ಕರಾವಳಿ ಜಂಕ್ಷನ್‌ನಲ್ಲಿ ಅಪಘಾತವಲಯ ಸ್ಥಳ ಹಾಗೂ ನಗರ ಟ್ರಾಫಿಕ್ ವ್ಯವಸ್ಥೆ ಸುಗಮಗೊಳಿಸುವ ಬಗ್ಗೆ ಸ್ಥಳ ಪರಿಶೀಲನೆ, 10.30 ಕ್ಕೆ ಉಡುಪಿ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ದೃಷ್ಠಿ ಕಮಾಂಡ್ ಸೆಂಟರ್‌ಗೆ ಭೇಟಿ, 10.45 ಕ್ಕೆ ಅಜ್ಜರಕಾಡು ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕಾರ್ಯಾಗಾರ ಮತ್ತು ಸಮಾವೇಶ ಕಾರ್ಯಕ್ರಮಮದಲ್ಲಿ ಭಾಗಿ, ಮ. 3 ಗಂಟೆಗೆ ಕಾರ್ಕಳದ ಮಂಜುನಾಥ ಪೈ ಸಭಾಭವನದಲ್ಲಿ ತಾಲೂಕು ಮಟ್ಟದ ಪ್ರಜಾಸೇವೆ ಕಾರ್ಯಕ್ರಮ, ಸಂ. 4.15 ಕ್ಕೆ ಫೆಬ್ರವರಿ -2027 ರಲ್ಲಿ ನಡೆಯಲಿರುವ ಭಗವಾನ್ ಶ್ರೀ ಬಾಹುಬಲಿಸ್ವಾಮಿ ಮಹಾಮಸ್ತಕಾಭಿಷೇಕ ಕಾರ್ಯಕ್ರಮದ ಕಚೇರಿಗೆ ಭೇಟಿ ನೀಡಿ, 4.30 ಕ್ಕೆ ಕಾರ್ಕಳದ ಬಂಗ್ಲೆಗುಡ್ಡ ಇಲ್ಲಿ ನಗರೋತ್ಥಾನ ಯೋಜನೆಯಡಿ ನಿರ್ಮಿಸಲಾಗಿರುವ ಸಭಾಭವನದ ಉದ್ಘಾಟನಾ ಕಾರ್ಯಕ್ರಮ, ಸಂಜೆ 6 ಗಂಟೆಗೆ ಉಡುಪಿಯಲ್ಲಿ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ನಂತರ ವಾಸ್ತವ್ಯ ಮಾಡಲಿದ್ದಾರೆ. ನ. 25 ರಂದು ಬೆಳಗ್ಗೆ 9.30 ಕ್ಕೆ ಉಡುಪಿ ಜಿಲ್ಲಾ ಪ್ರವಾಸೋದ್ಯಮ ಮಾಹಿತಿ ಕೇಂದ್ರ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನ.24: ಕಾರ್ಕಳ ಜ್ಞಾನಸುಧಾದಲ್ಲಿ ಮೌಲ್ಯಸುಧಾ

ಗಣಿತನಗರ, ನ.23: ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶ್ರೀ ಮಹಾಗಣಪತಿ...

ಉಡುಪಿ ನಗರದ ಸಮಗ್ರ ಅಭಿವೃದ್ಧಿಗೆ ಪೂರಕ ಮತ್ತು ಜನಸ್ನೇಹಿ ಮಾಸ್ಟರ್ ಪ್ಲ್ಯಾನ್ ರಚನೆಗೆ ಶಾಸಕ ಯಶ್ಪಾಲ್ ಸುವರ್ಣ ಸೂಚನೆ

ಉಡುಪಿ, ನ.23: ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಮೂಲಕ ಮಹಾಯೋಜನೆ (ಮಾಸ್ಟರ್ ಪ್ಲಾನ್)...

ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ- ಸರ್ಕಾರ ಆದೇಶಕ್ಕೆ ಶಾಸಕ ಯಶ್ಪಾಲ್ ಸುವರ್ಣ ಆಕ್ರೋಶ

ಉಡುಪಿ, ನ.23: ರಾಜ್ಯ ಕಾಂಗ್ರೆಸ್ ಸರ್ಕಾರ ನಡೆಸುತ್ತಿರುವ ಉಡುಪಿ ಜಿಲ್ಲಾ ಗ್ಯಾರಂಟಿ...
error: Content is protected !!