Tuesday, November 24, 2026
Tuesday, November 24, 2026

ಗ್ಯಾರಂಟಿ ಯೋಜನೆಗಳ ಕುರಿತು ಟೀಕೆ ಹಾಗೂ ವಿರೋಧ ಮಾಡುತ್ತಿರುವ ಬಿಜೆಪಿ ಪಕ್ಷ ಹಾಗೂ ಬಿಜೆಪಿ ಶಾಸಕರ ಮುಖವಾಡ ಬಯಲಾಗಿದೆ: ರಮೇಶ್ ಕಾಂಚನ್

ಗ್ಯಾರಂಟಿ ಯೋಜನೆಗಳ ಕುರಿತು ಟೀಕೆ ಹಾಗೂ ವಿರೋಧ ಮಾಡುತ್ತಿರುವ ಬಿಜೆಪಿ ಪಕ್ಷ ಹಾಗೂ ಬಿಜೆಪಿ ಶಾಸಕರ ಮುಖವಾಡ ಬಯಲಾಗಿದೆ: ರಮೇಶ್ ಕಾಂಚನ್

Date:

ಉಡುಪಿ, ನ.23: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವು ಚುನಾವಣಾಪೂರ್ವದಲ್ಲಿ ಜನರಿಗೆ ನೀಡಿದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿ ಜನಾಭಿಪ್ರಾಯವನ್ನು ಪಡೆದಿದ್ದು ಕರ್ನಾಟಕದ ರಾಜ್ಯದ ಜನಸಾಮಾನ್ಯರು ಈ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಾಗಿ ತಮ್ಮ ಜೀವನವನ್ನು ನಡೆಸುತ್ತಿದ್ದಾರೆ ಎಂದು ಎಂದು ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ಹೇಳಿದ್ದಾರೆ.

ಕರ್ನಾಟಕ ರಾಜ್ಯದ ಗ್ಯಾರಂಟಿ ಯೋಜನೆಗಳನ್ನು ದೇಶದ ಇತರ ರಾಜ್ಯಗಳು ಕೂಡ ಮಾದರಿಯಾಗಿ ಪಡೆದು, ಅದನ್ನು ಅನುಕರಣೆ ಮಾಡುತ್ತಿರುವುದು ಬಿಜೆಪಿ ಪಕ್ಷಕ್ಕೆ ಮುಜುಗರವನ್ನುಂಟು ಮಾಡಿದೆ. ಇತರ ರಾಜ್ಯಗಳಲ್ಲಿ ಗ್ಯಾರಂಟಿ ಹೆಸರಿನಲ್ಲಿ ಯೋಜನೆಗಳನ್ನು ನೀಡುತ್ತಿರುವ ಬಿಜೆಪಿ ಪಕ್ಷಕ್ಕೆ ಕರ್ನಾಟಕದ ಕಾಂಗ್ರೆಸ್‌ ಪಕ್ಷ ನೀಡುತ್ತಿರುವ ಜನಪರ ಯೋಜನೆಗಳ ಬಗ್ಗೆ ಹೊಟ್ಟೆ ಉರಿ ತಡೆಯಲಾಗದೆ ಟೀಕೆ ಹಾಗೂ ವಿರೋಧ ಮಾಡುತ್ತಾ ಬಂದಿದ್ದು ಇದಕ್ಕೆ ಬಿಜೆಪಿ ಪಕ್ಷ ಹಾಗೂ ಬಿಜೆಪಿ ಶಾಸಕರ ಗ್ಯಾರಂಟಿ ಸಮಾವೇಶದ ಕುರಿತು ಜನವಿರೋಧಿ ಹೇಳಿಕೆಯೇ ಸಾಕ್ಷಿ ಎಂದು ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉಡುಪಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ನೇತೃತ್ವದಲ್ಲಿ ಉಡುಪಿ ಜಿಲ್ಲೆಯ ಗ್ಯಾರಂಟಿ ಯೋಜನೆಯ ಫಲಾನುಭವಿಗಳ ಸಮಾವೇಶವನ್ನು ಹಮ್ಮಿಕೊಂಡಿದ್ದು ಇದಕ್ಕೆ ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರ ಅಪಸ್ವರ ಪ್ರಾಂಭವಾಗಿರುವುದು ಖಂಡನೀಯ. ರಾಜ್ಯ ಸರ್ಕಾರದ ನೇತೃತ್ವದಲ್ಲಿ ಆಯೋಜಿಸಿರುವ ಗ್ಯಾರಂಟಿ ಯೋಜನೆಗಳ ಸಮಾವೇಶ ಕಾರ್ಯಕ್ರಮವು ಕೇವಲ ಸರಕಾರಿ ಕಾರ್ಯಕ್ರಮವಾಗಿರುತ್ತದೆ ಎಂದು ಬಿಜೆಪಿ ಶಾಸಕರಿಗೆ ತಿಳಿಸಲು ಬಯಸುತ್ತೇನೆ. ಸರಕಾರಿ ಹಣದಲ್ಲಿ ತಮ್ಮ ರಾಜಕೀಯ ಪ್ರೇರಿತ ಕಾರ್ಯಕ್ರಮ ಮಾಡುತ್ತಾ ಬಂದ ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರಿಗೆ ತಮ್ಮ ರಾಜಕೀಯ ಪ್ರಚಾರಕ್ಕೆ ನಡೆಸಿದ ಕಾರ್ಕಳ ಉತ್ಸವ, ಬೈಂದೂರು ಉತ್ಸವ, ಕಾಪು ಬೀಚ್ ಉತ್ಸವ, ಪರಶುರಾಮನ ಥೀಮ್ ಪಾರ್ಕ್ ಉದ್ಘಾಟನಾ ಸಮಾರಂಭಕ್ಕೆ ‌ಎಲ್ಲಿಂದ ಹಣ ಸಂಗ್ರಹವಾಗಿತ್ತು ಎಂದು ಆತ್ಮಾವಲೋಕನ ಮಾಡಿಕೊಳ್ಳಲಿ. ಶಾಸಕರಾಗಿ, ಸಚಿವರಾಗಿ ಅನೇಕ ಸರಕಾರಿ ಕಾರ್ಯಕ್ರಮಗಳನ್ನು ತಮ್ಮ ರಾಜಕೀಯ ಲಾಭಕ್ಕೆ ಬಳಸಿಕೊಂಡು ಅನೇಕ ರಾಜಕೀಯ ಪ್ರೇರಿತ ಕಾರ್ಯಕ್ರಮವನ್ನು ನಡೆಸಿದ್ದ ತಮಗೆ ರಾಜ್ಯ ಸರ್ಕಾರದಿಂದ ನಡೆಯಲಿರುವ ಗ್ಯಾರಂಟಿ ಸಮಾವೇಶವು ರಾಜಕೀಯ ಕಾರ್ಯಕ್ರಮದಂತೆ ಕಾಣುವುದರಲ್ಲಿ ಯಾವುದೇ ಸಂಶಯವಿಲ್ಲ. ಜನಸಾಮಾನ್ಯರ ಬದುಕಿಗೆ ದಾರಿದೀಪದಂತಿರುವ ಪಂಚ ಗ್ಯಾರಂಟಿ ಯೋಜನೆಗಳು ಅವರ ಬದುಕಿಗೆ ಆಧಾರವಾಗಿದೆ. ಇಂತಹ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ನಿರ್ವಹಿಸಲು ಈಗಾಗಲೇ ರಾಜ್ಯ ಮಟ್ಟದ, ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಗ್ಯಾರಂಟಿ ಸಮಿತಿಯು ರಚನೆಗೊಂಡಿದ್ದು ಈ ಯೋಜನೆಗಳು ಇನ್ನಷ್ಟು ಆಳವಾಗಿ ಅನುಷ್ಠಾನಗೊಳಿಸಲು ಗ್ರಾಮ ಹಾಗೂ ವಾರ್ಡ್ ಮಟ್ಟದಲ್ಲಿ ವಾರ್ಡ್ ಸಮಿತಿ ಹಾಗೂ ಗ್ರಾಮ ಪಂಚಾಯತ್ ಗ್ಯಾರಂಟಿ ಸಮಿತಿಗಳು ರಚನೆಗೊಂಡಿದ್ದು ಕಾಂಗ್ರೆಸ್ ಪಕ್ಷವು ಸದಾ ದೀನ ದಲಿತರ, ನಿರ್ಗತಿಕರ ಹಾಗೂ ಬಡ ಜನರ ಪರವಾಗಿ ಕೆಲಸ ಮಾಡಲು ಸದಾ ಬದ್ಧವಾಗಿದೆ.

ಜನಸಾಮಾನ್ಯರ ಪರವಾಗಿರುವ ಗ್ಯಾರಂಟಿ ಯೋಜನೆಗಳ ಬಗ್ಗೆ ಬಿಜೆಪಿ ಪಕ್ಷ ಹಾಗೂ ಬಿಜೆಪಿ ಶಾಸಕರು ಇನ್ನಾದರೂ ತಮ್ಮ ಸಹಮತ ತೋರಲು ಭಗವಂತನು ಬುದ್ಧಿ ಶಕ್ತಿಯನ್ನು ಕರುಣಿಸಲಿ ಹಾಗೂ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುತ್ತಿರುವ ಬಿಜೆಪಿ ಶಾಸಕರಿಗೆ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಮುಂದಿನ ಎಲ್ಲಾ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ರಮೇಶ್ ಕಾಂಚನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಕ್ಕಳಲ್ಲಿ ಕ್ರೀಡಾ ಆಸಕ್ತಿ ಬೆಳೆಸುವುದು ಇಂದಿನ ತುರ್ತು ಅಗತ್ಯ: ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ

ಕುಂದಾಪುರ, ನ.24: ಇಲ್ಲಿನ ತಾಲೂಕು ಯುವ ಬಂಟರ ಸಂಘದ ಆಶ್ರಯದಲ್ಲಿ ನಗರದ...

ಕಾರ್ತಿಕದ ಹುಣ್ಣಿಮೆ ಚಂದಿರ ಸೂಪರ್ ಮೂನ್

ಅದೇನು ಕಾಕತಾಳೀಯವೋ.. ಕಾರ್ತಿಕದ ದೀಪೋತ್ಸವಕ್ಕೆ ಹುಣ್ಣಿಮೆ ಚಂದಿರ ತನ್ನದೂ ಒಂದು ದೀಪವಿರಲಿ...

ಯಕ್ಷಗಾನ ಕಲಾರಂಗದ 110ನೇ ಮನೆ ಹಸ್ತಾಂತರ

ಉಡುಪಿ, ನ.23: ಯಕ್ಷಗಾನ ಕಲಾರಂಗ ವಿದ್ಯಾಪೋಷಕ್‍ನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ರಶ್ಮಿತಾ...
error: Content is protected !!