Thursday, November 26, 2026
Thursday, November 26, 2026

ಜಿಲ್ಲಾ ಉಸ್ತುವಾರಿ ಸಚಿವರಿಂದ ದೃಷ್ಟಿ ಕಮಾಂಡ್ ಸೆಂಟರ್ ವೀಕ್ಷಣೆ

ಜಿಲ್ಲಾ ಉಸ್ತುವಾರಿ ಸಚಿವರಿಂದ ದೃಷ್ಟಿ ಕಮಾಂಡ್ ಸೆಂಟರ್ ವೀಕ್ಷಣೆ

Date:

ಉಡುಪಿ, ನ.25: ಜಿಲ್ಲಾ ಉಸ್ತುವಾರಿ ಸಚಿವರಾದ ರಿಜ್ವಾನ್ ಅರ್ಷದ್ ಅವರು ಉಡುಪಿ ನಗರದ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಉಡುಪಿ ಸ್ಮಾರ್ಟ್ ಟ್ರಾಫಿಕ್ ಮ್ಯಾನೇಜ್ಮೆಂಟ್ ಅಂಡ್ ಇಂಟೆಲಿಜೆಂಟ್ ಟ್ರಾಫಿಕ್ ಮ್ಯಾನೇಜ್ಮೆಂಟ್ ಸಿಸ್ಟಂ – ದೃಷ್ಟಿ ಕಮಾಂಡ್ ಸೆಂಟರ್ ಅನ್ನು ವೀಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಇಡೀ ಜಿಲ್ಲೆಯ ಕಾನೂನು ಸುವ್ಯವಸ್ಥೆ ನಿರ್ವಹಣೆ ಮತ್ತು ಅಪರಾಧ ಪತ್ತೆ ಮಾಡುವ ಸಲುವಾಗಿ ಕಂಟ್ರೋಲ್ ಸೆಂಟರ್ ಅನ್ನು ಅಭಿವೃದ್ಧಿ ಪಡಿಸಿದ್ದಾರೆ. ಅದನ್ನು ವೀಕ್ಷಣೆ ಮಾಡಿದ್ದೇನೆ. ಬಹಳ ಒಳ್ಳೆಯ ರೀತಿಯಲ್ಲಿ ಹೈ ಎಂಡ್ ತಂತ್ರಜ್ಞಾನವನ್ನು ಬಳಕೆ ಮಾಡಿದ್ದಾರೆ. ಎಲ್ಲ ಪ್ರಮುಖ ಜಂಕ್ಷನ್‌ಗಳಲ್ಲಿ ಸಿಸಿಟಿವಿ ಕ್ಯಾಮರಾ ಹೈ ರೆಸ್ಯೂಲೇಷನ್ ಕ್ಯಾಮೆರಾಗಳನ್ನು ಬಳಸಲಾಗಿದೆ. ವಾಹನಗಳ ನಂಬರ್ ಪ್ಲೇಟ್ ಪತ್ತೆ ಮಾಡುವುದು, ವಾಹನದ ಇತಿಹಾಸ ನೋಡಲು ಸಾಧ್ಯವಿದೆ. ನಂಬರ್ ಪ್ಲೇಟ್ ನೈಜವೋ ಅಥವಾ ನಕಲಿಯೋ ಎಂಬುದನ್ನೂ ಪತ್ತೆ ಹಚ್ಚಲು ಸಾಧ್ಯ. ವಾಹನ ಎಷ್ಟು ಬಾರಿ, ಯಾವ ರೀತಿಯ ನಿಯಮ ಉಲ್ಲಂಘಿಸಿದೆ ಎಂಬುದನ್ನು ನೋಡಬಹುದಾಗಿದೆ. ಬೇರೆ ಜಿಲ್ಲೆಯಲ್ಲಿ ಅಪರಾಧ ನಡೆಸಿ ಇಲ್ಲಿ ಬಂದಿದ್ದರೂ ಅದನ್ನು ಪತ್ತೆ ಹಚ್ಚಲು ಸಾಧ್ಯ ಎಂದರು. ಇದನ್ನು ಇಡೀ ಜಿಲ್ಲಾ ವ್ಯಾಪ್ತಿಗೆ ವಿಸ್ತರಿಸಬೇಕೆಂದು ಸೂಚನೆ ಕೊಟಿದ್ದೇನೆ. ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಪ್ರತೀ ಪಂಚಾಯತ್‌ಗಳ ಪ್ರಮುಖ ಜಂಕ್ಷನ್‌ಗಳು, ಸರ್ಕಲ್‌ಗಳು ಸೇರಿದಂತೆ ಮತ್ತಿತರ ಸೂಕ್ಷ್ಮ ಪ್ರದೇಶಗಳಲ್ಲಿ ಹೈ ರೆಸ್ಯೂಲೇಷನ್ ಮತ್ತು ಹೈ ಎಂಡ್ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿ ಈ ಕಂಟ್ರೋಲ್ ಸೆಂಟರ್‌ಗೆ ಸಂಪರ್ಕಿಸಬೇಕೆಂದು ಸೂಚನೆ ನೀಡಿದ್ದೇನೆ. ಇದಕ್ಕೆ ಸಂಬಂಧಿಸಿ ಜಿಲ್ಲಾಧಿಕಾರಿ ಮತ್ತು ಜಿ.ಪಂ. ಸಿಇಒ ಸೇರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯವರೊಂದಿಗೆ ಸಮನ್ವಯ ಸಾಧಿಸುವಂತೆ ತಿಳಿಸಲಾಗಿದೆ ಎಂದರು. ನಮ್ಮ ಉಡುಪಿ ಜಿಲ್ಲೆ ಇಡೀ ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಇಂತಹದ್ದೊಂದು ಕಮಾಂಡ್ ಸೆಂಟರ್ ಸ್ಥಾಪನೆ ಮಾಡಿದೆ ಎಂಬ ಹೆಮ್ಮೆಯಿದೆ. ಅದನ್ನು ಇಡೀ ಜಿಲ್ಲೆಯ ವ್ಯಾಪ್ತಿಗೆ ಅದನ್ನು ಶೀಘ್ರದಲ್ಲೇ ಅನುಷ್ಠಾನಿಸಿ, ಇಡೀ ಜಿಲ್ಲೆ ಇಲ್ಲಿಂದಲೇ ಮೇಲ್ವಿಚಾರಣೆ ಮಾಡಬೇಕು. ಜಿಲ್ಲೆಯ ಕಾನೂನು ಸುವ್ಯವಸ್ಥೆ ನಿರ್ವಹಣೆ ಮತ್ತು ಅಪರಾಧ ಪತ್ತೆಗೆ ಎಲ್ಲವೂ ಇಲ್ಲಿಂದಲೇ ಮೇಲ್ವಿಚಾರಣೆಯಾಗಬೇಕು ಎಂದರು.

ಕರಾವಳಿ ಅಭಿವೃದ್ಧಿಯ ಮಂಡಳಿಯ ಅಧ್ಯಕ್ಷ ಎಂ.ಎ ಗಫೂರ್, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, ಮುಖಂಡರಾದ ವಿನಯ್ ಕುಮಾರ್ ಸೊರಕೆ, ಮುನಿಯಾಲು ಉದಯ್ ಕುಮಾರ್ ಶೆಟ್ಟಿ, ದಿನೇಶ್ ಹೆಗ್ಡೆ ಮೊಳಹಳ್ಳಿ, ಪ್ರಸಾದ್ ರಾಜ್ ಕಾಂಚನ್, ಕಿಶನ್ ಹೆಗ್ಡೆ ಕೊಳ್ಕೆಬೈಲು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅರಿವಿನ ಬೆಳಕು ಉಪನ್ಯಾಸ ಮಾಲೆ- 21

ಉಡುಪಿ, ನ.25: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಡಾ. ಶಿವರಾಮ ಕಾರಂತ...

ಜ್ಞಾನಸುಧಾ: ಮೌಲ್ಯಸುಧಾ-54

ಗಣಿತನಗರ, ನ.25: ಮನುಷ್ಯನ ಹೊಸವಿಚಾರ, ಯೋಚನೆ, ಪ್ರಶ್ನೆ, ತಿಳುವಳಿಕೆಗಳ ಹುಡುಕಾಟವೇ ಅವನ...

ತೆಂಕನಿಡಿಯೂರು ಕಾಲೇಜು: ಗ್ರೇಡ್-‌1 ಪ್ರಾಂಶುಪಾಲರಾಗಿ ಡಾ. ಗೋಪಾಲಕೃಷ್ಣ ಎಂ ಗಾಂವಕರ್‌ ಅಧಿಕಾರ ಸ್ವೀಕಾರ

ಉಡುಪಿ, ನ.25: ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ...
error: Content is protected !!