ಕೋಟೇಶ್ವರ, ನ.26: ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ ಇಲ್ಲಿ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು. ಎಂ.ಕಾಂ. ವಿದ್ಯಾರ್ಥಿನಿ ಅಮೃತಾ ವಿದ್ಯಾರ್ಥಿಗಳಿಗೆ ಸಂವಿಧಾನದ ಪ್ರತಿಜ್ಞಾ ವಿಧಿ ಬೋಧಿಸಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಯಾದ ನಾಗರಾಜ ವೈದ್ಯ ಎಂ. ಇವರು ವಿದ್ಯಾರ್ಥಿಗಳಿಗೆ ಸಂವಿಧಾನದ ಆಶೋತ್ತರಗಳ ಬಗ್ಗೆ ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ಸುಬ್ರಮಣ್ಯ ಎ. ಇವರು ವಿದ್ಯಾರ್ಥಿಗಳಿಗೆ ಸಂವಿಧಾನದ ಬಗ್ಗೆ ಚೆನ್ನಾಗಿ ಅರಿತುಕೊಂಡು ಜೀವನದಲ್ಲಿ ಉತ್ತಮ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳುವಂತೆ ಕರೆ ನೀಡಿದರು. ಕಾರ್ಯಕ್ರಮದ ಸಂಘಟಕರಾದ ಡಾ. ಭಾಗೀರಥಿ ನಾಯ್ಕ ಇವರು ಪ್ರಾಸ್ತಾವಿಕವಾಗಿ ಮಾತನಾಡಿ ಅತಿಥಿಗಳನ್ನು ಸ್ವಾಗತಿಸಿದರು. ವಾಣಿಜ್ಯಶಾಸ್ತ್ರದ ಪ್ರಾಧ್ಯಾಪಕರಾದ ಡಾ. ಉದಯ ಶೆಟ್ಟಿ ಕೆ ಕಾರ್ಯಕ್ರಮ ನಿರೂಪಣೆ ಮಾಡಿದರು ಮತ್ತು ಎಂ.ಕಾಂ.ನ ಸಂಯೋಜಕರಾದ ಕಾರ್ತಿಕ್ ಪೈ ವಂದಿಸಿದರು.




By
ForthFocus™