Thursday, November 26, 2026
Thursday, November 26, 2026

ಬಾಳೆ ಮುಹೂರ್ತ ಹಾಗೂ ‘ಕದಳೀ ವಿಶ್ವದರ್ಶನ’ ಸೋದೆ ಮಠದಲ್ಲಿ ಅಧಿಕಾರಿಗಳ ಪೂರ್ವಭಾವಿ ಸಮನ್ವಯ ಸಭೆ

ಬಾಳೆ ಮುಹೂರ್ತ ಹಾಗೂ ‘ಕದಳೀ ವಿಶ್ವದರ್ಶನ’ ಸೋದೆ ಮಠದಲ್ಲಿ ಅಧಿಕಾರಿಗಳ ಪೂರ್ವಭಾವಿ ಸಮನ್ವಯ ಸಭೆ

Date:

ಉಡುಪಿ, ನ.26: ಸೋದೆ ಶ್ರೀ ವಾದಿರಾಜ ಮಠದ ಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದರ ದ್ವಿತೀಯ ಶ್ರೀಕೃಷ್ಣ ಪೂಜಾ ಪರ್ಯಾಯದ ಪೂರ್ವಭಾವಿ ಸಿದ್ಧತೆಗಳ ಅಂಗವಾಗಿ, ನವೆಂಬರ್ 29ರಂದು ಪ್ರಥಮ ಮುಹೂರ್ತವಾದ ಬಾಳೆ ಮುಹೂರ್ತ ನೆರವೇರಲಿದೆ. ಇದೇ ಸಂದರ್ಭದಲ್ಲಿ ನವೆಂಬರ್ 29ರಿಂದ ಡಿಸೆಂಬರ್ 1 ರವರೆಗೆ ಉಡುಪಿಯ ಶ್ರೀಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ಮೂರು ದಿನಗಳ ರಾಷ್ಟ್ರಮಟ್ಟದ ‘ಕದಳೀ ವಿಶ್ವದರ್ಶನ’ ಬಾಳೆ ಮೇಳ ಆಯೋಜಿಸಲಾಗಿದೆ.

ಈ ಕಾರ್ಯಕ್ರಮಗಳ ಯಶಸ್ವಿ ಹಾಗೂ ಸುಗಮ ನಿರ್ವಹಣೆಯ ಉದ್ದೇಶದಿಂದ ಸೋದೆ ಶ್ರೀ ವಾದಿರಾಜ ಮಠದಲ್ಲಿ ಶ್ರೀಪಾದರ ಅಧ್ಯಕ್ಷತೆಯಲ್ಲಿ ಹಾಗೂ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಅವರ ಉಪಸ್ಥಿತಿಯಲ್ಲಿ ಜಿಲ್ಲಾಡಳಿತ ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಮನ್ವಯ ಸಭೆ ನಡೆಯಿತು.

ಸಭೆಯಲ್ಲಿ ಕಾರ್ಯಕ್ರಮದ ಸಂದರ್ಭದಲ್ಲಿ ಅಗತ್ಯವಿರುವ ಸ್ವಚ್ಛತಾ ವ್ಯವಸ್ಥೆ, ಸುಗಮ ಸಂಚಾರ ನಿರ್ವಹಣೆ, ವಾಹನಗಳ ಪಾರ್ಕಿಂಗ್ ವ್ಯವಸ್ಥೆ, ಆರೋಗ್ಯ ಸೇವೆ, ಅಗ್ನಿಶಾಮಕ ಸುರಕ್ಷತೆ ಸೇರಿದಂತೆ ವಿವಿಧ ಮೂಲಸೌಕರ್ಯ ಹಾಗೂ ಸಾರ್ವಜನಿಕ ಸೌಲಭ್ಯಗಳ ಕುರಿತು ಸವಿಸ್ತಾರವಾಗಿ ಚರ್ಚಿಸಲಾಯಿತು. ಮೇಳಕ್ಕೆ ಆಗಮಿಸುವ ಸಾರ್ವಜನಿಕರು, ರೈತರು, ಉದ್ಯಮಿಗಳು ಹಾಗೂ ಸಂದರ್ಶಕರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು, ವಿವಿಧ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.

ಸಭೆಯಲ್ಲಿ ಉಡುಪಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ನಗರಸಭೆ ಪೌರಾಯುಕ್ತ ಮಹಾಂತೇಶ್ ಹಂಗರಗಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಬಸವರಾಜ ಜಿ. ಹುಬ್ಬಳ್ಳಿ, ತೋಟಗಾರಿಕಾ ಇಲಾಖೆಯ ಜಂಟಿ ನಿರ್ದೇಶಕಿ ಕ್ಷಮಾ ಪಾಟೀಲ್, ಜಿಲ್ಲಾ ಅಗ್ನಿಶಾಮಕ ಅಧಿಕಾರಿ ವಿನಾಯಕ ಉ. ಕಲ್ಗುಟಕರ್, ಉಡುಪಿ ನಗರ ಠಾಣೆಯ ಉಪನಿರೀಕ್ಷಕ ಭರತೇಶ್ ಕಂಕಣವಾಡಿ ಹಾಗೂ ಸಂಚಾರ ಠಾಣೆಯ ಉಪನಿರೀಕ್ಷಕ ಮಹೇಶ್ ಟಿ. ಉಪಸ್ಥಿತರಿದ್ದರು.

ಮಾಜಿ ಶಾಸಕ ಕೆ. ರಘುಪತಿ ಭಟ್, ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್, ಉಡುಪಿ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಹಾಗೂ ಮಾಜಿ ನಗರಸಭಾ ಸದಸ್ಯ ಗಿರೀಶ್ ಅಂಚನ್ ಉಪಸ್ಥಿತರಿದ್ದರು.

ನವೆಂಬರ್ 29ರಂದು ಬೆಳಿಗ್ಗೆ 7:45ಕ್ಕೆ ಉಡುಪಿಯ ರಥಬೀದಿಯಲ್ಲಿರುವ ಸೋದೆ ಶ್ರೀ ವಾದಿರಾಜ ಮಠದಲ್ಲಿ ಬಾಳೆ ಮುಹೂರ್ತ ನೆರವೇರಲಿದೆ. ಅದೇ ದಿನ ಬೆಳಿಗ್ಗೆ 9:30ಕ್ಕೆ ಶ್ರೀಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ‘ಕದಳೀ ವಿಶ್ವದರ್ಶನ’ ಬಾಳೆ ಮೇಳದ ಉದ್ಘಾಟನೆ ನಡೆಯಲಿದೆ. ಮೂರು ದಿನಗಳ ಕಾಲ ನಡೆಯುವ ಈ ಮೇಳವು ಪ್ರತಿದಿನ ಬೆಳಿಗ್ಗೆ 9:00ರಿಂದ ರಾತ್ರಿ 9:00ರವರೆಗೆ ಸಾರ್ವಜನಿಕರ ವೀಕ್ಷಣೆಗೆ ತೆರೆದಿರಲಿದ್ದು, ಎಲ್ಲರಿಗೂ ಉಚಿತ ಪ್ರವೇಶವಿರುತ್ತದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜನರ ಸಮಸ್ಯೆಗಳಿಗೆ ತ್ವರಿತ ಪರಿಹಾರವೇ ಪ್ರಜಾಸೇವಾ ಆಂದೋಲನದ ಉದ್ದೇಶ: ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್

ಉಡುಪಿ, ನ.26: ಪ್ರಜಾಸೇವಾ ಆಂದೋಲನ ಸಭೆಗಳು ಸರಕಾರದ ವಿನೂತನ ಕಾರ್ಯಕ್ರಮವಾಗಿದೆ. ಜನಪ್ರತಿನಿಧಿಗಳು,...

ಕೋಟೇಶ್ವರ: ಸಂವಿಧಾನ ದಿನಾಚರಣೆ

ಕೋಟೇಶ್ವರ, ನ.26: ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ...

ಭಾರತಕ್ಕೆ ಬಾಬಾ ಸಾಹೇಬರ ಸಂವಿಧಾನವೇ ಕೈದೀವಿಗೆ

ಹಿರಿಯಡಕ, ನ.26: ಜಾತಿ, ಮತ, ಭಾಷೆ, ಬಣ್ಣಗಳಲ್ಲಿ ಬಹುರೂಪಿಯಾದ ಬಹುತ್ವಭಾರತದ ಬದುಕಿನ...
error: Content is protected !!