Saturday, November 28, 2026
Saturday, November 28, 2026

ಹೆಚ್.ಐ.ವಿ/ ಏಡ್ಸ್ ನಿಯಂತ್ರಣದಲ್ಲಿ ಉಡುಪಿ ಜಿಲ್ಲೆಗೆ ರಾಷ್ಟ್ರಮಟ್ಟದ ಮಾನ್ಯತೆ

ಹೆಚ್.ಐ.ವಿ/ ಏಡ್ಸ್ ನಿಯಂತ್ರಣದಲ್ಲಿ ಉಡುಪಿ ಜಿಲ್ಲೆಗೆ ರಾಷ್ಟ್ರಮಟ್ಟದ ಮಾನ್ಯತೆ

Date:

ಉಡುಪಿ, ನ.26: ಹೆಚ್.ಐ.ವಿ / ಏಡ್ಸ್ ನಿಯಂತ್ರಣ ಮತ್ತು ಜಾಗೃತಿ ಕಾರ್ಯದಲ್ಲಿ ಮಹತ್ವದ ಸಾಧನೆ ಮಾಡಿರುವ ಉಡುಪಿ ಜಿಲ್ಲೆಗೆ ರಾಷ್ಟ್ರಮಟ್ಟದ ಮನ್ನಣೆ ದೊರೆತಿದೆ. ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆ (ಎನ್.ಎ.ಸಿ.ಓ) ವತಿಯಿಂದ ದೇಶದಾದ್ಯಂತ ಹಮ್ಮಿಕೊಳ್ಳಲಾಗಿರುವ ಮೊಬಿಲೈಸೇಷನ್ ಫಾರ್ ಏಡ್ಸ್ ಸುರಕ್ಷಾ ಉಪಕ್ರಮದಡಿ ನಿಗಧಿಪಡಿಸಿರುವ 95-95-95 ಗುರಿಗಳನ್ನು ಸಾಧಿಸಿರುವ ಹಿನ್ನೆಲೆಯಲ್ಲಿ ಜಿಲ್ಲೆಗೆ ಸುರಕ್ಷಿತ್ ಸ್ಥಾನಮಾನ ಲಭಿಸಿದೆ. ಈ ಸಾಧನೆಗಾಗಿ ಉಡುಪಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ಪ್ರಯತ್ನಗಳನ್ನು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಜಂಟಿ ಕಾರ್ಯದರ್ಶಿ ರಿತು ಶರ್ಮಾ ರವರು ಶ್ಲಾಘಿಸಿದ್ದಾರೆ. 2026 ರ ನವೆಂಬರ್ 18 ರಂದು ಹೊರಡಿಸಿರುವ ಅಧಿಕೃತ ಪತ್ರದಲ್ಲಿ ಜಿಲ್ಲೆ ಸಾಧಿಸಿರುವ ಈ ಮಹತ್ವದ ಸಾಧನೆಯನ್ನು ಅಭಿನಂದಿಸಿ, ಅಧಿಕಾರಿಗಳ ತಂಡದ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಡಿಸೆಂಬರ್ 1 ರಂದು ನವದೆಹಲಿಯಲ್ಲಿ ನಡೆಯಲಿರುವ ವಿಶ್ವ ಏಡ್ಸ್ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಜಿಲ್ಲಾಧಿಕಾರಿಯವರಿಗೆ ಆಹ್ವಾನ ನೀಡಲಾಗಿದೆ. ನವದೆಹಲಿಯ ಡಾ. ಅಂಬೇಡ್ಕರ್ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ನಡೆಯಲಿರುವ ಏಡ್ಸ್ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲೆಯ ಸಾಧನೆಯನ್ನು ಗೌರವಿಸಲಾಗುವುದು.

ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಜಿಲ್ಲಾಧಿಕಾರಿಯವರಿಗೆ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ತಂಡಕ್ಕೆ ಆಹ್ವಾನ ನೀಡಲಾಗಿದೆ. ಜಿಲ್ಲೆಯಲ್ಲಿ ಹೆಚ್.ಐ.ವಿ ಸೋಂಕಿನ ನಿಯಂತ್ರಣ, ಸೋಂಕಿತರ ಆರೈಕೆ ಮತ್ತು ಚಿಕಿತ್ಸಾ ಸೇವೆಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಕೈಗೊಂಡಿರುವ ಸಂಘಟಿತ ಪ್ರಯತ್ನಗಳಿಗೆ ರಾಷ್ಟçಮಟ್ಟದಲ್ಲಿ ಗುರುತು ದೊರೆತಿರುವುದು ಜಿಲ್ಲೆಯ ಆರೋಗ್ಯ ಇಲಾಖೆಯ ಪಾಲಿಗೆ ಹೆಮ್ಮೆಯ ಸಂಗತಿಯಾಗಿದೆ. ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‌ಶನ್ ಸೊಸೈಟಿ ಮತ್ತು ಜಿಲ್ಲಾಡಳಿತದ ಮಾರ್ಗದರ್ಶನದಲ್ಲಿ ಪ್ರಗತಿಯನ್ನು ಸಾಧಿಸಲಾಗಿದೆ ಎಂದು ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಟಪಾಡಿ ತ್ರಿಶಾ ವಿದ್ಯಾ ಪದವಿಪೂರ್ವ ಕಾಲೇಜು: ವಾರ್ಷಿಕ ಕ್ರೀಡಾಕೂಟ

ಕಟಪಾಡಿ, ನ.27: ತ್ರಿಶಾ ವಿದ್ಯಾ ಪದವಿಪೂರ್ವ ಕಾಲೇಜು, ಕಟಪಾಡಿ ವತಿಯಿಂದ 2006-27...

ಬಾಲ್ಯ ವಿವಾಹ ಮುಕ್ತ ಭಾರತ ಅಭಿಯಾನದ ಯಶಸ್ಸಿಗೆ ಪ್ರತಿಯೊಬ್ಬರೂ ಸಹಕರಿಸಿ: ಉಪ ಕಾರ್ಯದರ್ಶಿ ಎಸ್.ಎಸ್ ಕಾದ್ರೋಳ್ಳಿ

ಉಡುಪಿ, ನ.27: ಜಿಲ್ಲೆಯಲ್ಲಿ ಬಾಲ್ಯವಿವಾಹ ಮುಕ್ತ ಭಾರತ ಅಭಿಯಾನದ 100 ದಿನಗಳ...

ಭಾರತ್ ನೆಟ್‌ಹಂತ-3 ಯೋಜನೆಯ ಸಮರ್ಪಕ ಅನುಷ್ಠಾನಕ್ಕೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ಉಡುಪಿ, ನ.27: ಗ್ರಾಮೀಣ ಪ್ರದೇಶದಲ್ಲಿ ವೇಗದ ಇಂಟರ್‌ನೆಟ್ ವ್ಯವಸ್ಥೆ ಕಲ್ಪಿಸುವ ಭಾರತ್...
error: Content is protected !!