Friday, September 20, 2024
Friday, September 20, 2024

ಕುಟುಂಬ ಯೋಜನಾ ಕ್ರಮಗಳಿಂದ ಜನಸಂಖ್ಯೆ ನಿಯಂತ್ರಣ: ಸುಮಿತ್ರಾ ಆರ್ ನಾಯಕ್

ಕುಟುಂಬ ಯೋಜನಾ ಕ್ರಮಗಳಿಂದ ಜನಸಂಖ್ಯೆ ನಿಯಂತ್ರಣ: ಸುಮಿತ್ರಾ ಆರ್ ನಾಯಕ್

Date:

ಉಡುಪಿ: ಹೆಚ್ಚುತ್ತಿರುವ ಜನಸಂಖ್ಯೆಯಿಂದ ದೇಶದಲ್ಲಿ ಆರ್ಥಿಕ, ಸಾಮಾಜಿಕ ಮತ್ತು ವಸತಿ ಸಮಸ್ಯೆಗಳು ಉಂಟಾಗುತ್ತಿದ್ದು, ಆರೋಗ್ಯ ಇಲಾಖೆಯ ಕುಟುಂಬ ಯೋಜನಾ ಕ್ರಮಗಳನ್ನು ಬಳಸಿಕೊಂಡು ಸಾರ್ವಜನಿಕರು ಜನಸಂಖ್ಯಾ ನಿಯಂತ್ರಣಕ್ಕೆ ಮುಂದಾಗಬೇಕು ಎಂದು ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್ ಹೇಳಿದರು.

ಅವರು ನಗರದ ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯಾಧಿಕಾರಿ ಕಚೇರಿ ಹಾಗೂ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮ್‌ರಾವ್ ಮಾತನಾಡಿ, ಭಾರತವು ಅಭಿವೃದ್ಧಿಶೀಲ ರಾಷ್ಟ್ರವಾಗಿದ್ದು, ಶಿಕ್ಷಣದ ಕೊರತೆ, ಅಜ್ಞಾನ, ಬಾಲ್ಯವಿವಾಹ, ಮೂಢನಂಬಿಕೆ ಮುಂತಾದ ಕಾರಣಗಳಿಂದ ಜನಸಂಖ್ಯೆ ಹೆಚ್ಚುತ್ತಿದೆ. ಸುರಕ್ಷಿತ ಗರ್ಭಪಾತ, ಅರ್ಹ ದಂಪತಿಗಳು ಕುಟುಂಬ ಕಲ್ಯಾಣ ವಿಧಾನಗಳನ್ನು ಅನುಸರಿಸುವ ಮೂಲಕ ಜನಸಂಖ್ಯಾ ಸ್ಪೋಟವನ್ನು ನಿಯಂತ್ರಿಸಬಹುದಾಗಿದೆ ಎಂದರು.

ಶಾಲಾ ಪ್ರಾಂಶುಪಾಲ ರುದ್ರೇಗೌಡ ಭಿತ್ತಿಪತ್ರ ಬಿಡುಗಡೆ ಮಾಡಿ, ಜನಸಂಖ್ಯಾ ದಿನಾಚರಣೆ ಕುರಿತ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಶಿಧರ್ ಹೆಚ್, ನಗರ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಸಾತ್ವಿಕ್, ಹಿರಿಯ ಉಪನ್ಯಾಸಕ ದಯಾನಂದ, ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ತಾಲೂಕು ಆರೋಗ್ಯಾಧಿಕಾರಿ ಡಾ. ವಾಸುದೇವ ಉಪಾಧ್ಯಾಯ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ತಾಲೂಕು ಆರೋಗ್ಯ ನಿರೀಕ್ಷಣಾಧಿಕಾರಿ ದೇವಪಟ್ಟ ಪಟಗಾರ್ ನಿರೂಪಿಸಿ, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!