ಉಡುಪಿ, ನ.26: ಕರ್ನಾಟಕ ಕೌಶಲ್ಯಾಭಿವೃದ್ದಿ ನಿಗಮದ ವತಿಯಿಂದ ಮೈಸೂರು ವಿಭಾಗೀಯ ಮಟ್ಟದ ಬೃಹತ್ ಉದ್ಯೋಗ ಮೇಳವು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಸಂತ ಅಲೋಶಿಯಸ್ (ಡೀಮ್ಡ್ ವಿಶ್ವವಿದ್ಯಾಲಯ) ಇಲ್ಲಿ ನವಂಬರ್ 30 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಡೆಯಲಿದೆ. ಉಡುಪಿ ಜಿಲ್ಲೆಯ ಉದ್ಯೋಗದಾತರು ಹಾಗೂ ಯಾವುದೇ ವಿದ್ಯಾರ್ಹತೆಯುಳ್ಳ ಉದ್ಯೋಗಾಕಾಂಕ್ಷಿಗಳು ವೆಬ್‌ಸೈಟ್
https://yuvaudyogasethu.karnataka.gov.in/services/events ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳುವುದರ ಮೂಲಕ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ.ನಂ: 9606494308 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಮೈಸೂರು ವಿಭಾಗೀಯ ಮಟ್ಟದ ಬೃಹತ್ ಉದ್ಯೋಗ ಮೇಳ
ಮೈಸೂರು ವಿಭಾಗೀಯ ಮಟ್ಟದ ಬೃಹತ್ ಉದ್ಯೋಗ ಮೇಳ
Date:




By
ForthFocus™