Monday, January 20, 2025
Monday, January 20, 2025

ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ) ಕಾರ್ಯಾಗಾರ

ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ) ಕಾರ್ಯಾಗಾರ

Date:

ಕುಂದಾಪುರ: ಬಿ ಎಂ ಸುಕುಮಾರ ಶೆಟ್ಟಿ ಅಧ್ಯಕ್ಷತೆಯ ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್ ಎಮ್ ಎಮ್ ಮತ್ತು ವಿ ಕೆ ಆರ್ ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಕುರಿತು ಕಾರ್ಯಾಗಾರ ನಡೆಯಿತು.

ಸಂಪನ್ಮೂಲ ವ್ಯಕ್ತಿ ಉಡುಪಿ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್)ಯ ಪ್ರಾಂಶುಪಾಲರಾದ ಡಾ. ಅಶೋಕ್ ಕಾಮತ್, ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಉದ್ದೇಶಗಳು, ಜಾರಿಗೊಳಿಸುವ ವಿಧಾನಗಳು, ಅದನ್ನು ಯಶಸ್ವಿಗೊಳಿಸುವಲ್ಲಿ ಶಿಕ್ಷಕರ ಜವಾಬ್ದಾರಿಗಳ ಬಗ್ಗೆ ಬಹಳ ವಿಸ್ತ್ರತ ಮಾಹಿತಿ ನೀಡಿದರು. ಶಿಕ್ಷಣ ಕ್ಷೇತ್ರದಲ್ಲಿ ಕಾಮತ್ ಅವರ ಸಾಧನೆಗಾಗಿ ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು.

ಸಂಸ್ಥೆಯ ಪ್ರಾಂಶುಪಾಲೆ ಚಿಂತನಾ ರಾಜೇಶ್, ಉಪ ಪ್ರಾಂಶುಪಾಲೆ ಮತ್ತು ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಶುಭಾ ಕೆ ಎನ್, ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕ ಜಗದೀಶ್ ಆಚಾರ್ ಸಾಸ್ತಾನ, ಸಹಾಯಕ ಮುಖ್ಯ ಶಿಕ್ಷಕಿ ಕವಿತಾ ಭಟ್, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಲತಾ ಜಿ ಭಟ್, ಸಂಯೋಜಕ ಶಿಕ್ಷಕಿ ಆರತಿ ಶೆಟ್ಟಿ, ಪ್ರೌಢಶಾಲಾ ಸಹಾಯಕ ಮುಖ್ಯ ಶಿಕ್ಷಕ ಚಂದ್ರಶೇಖರ್ ಶೆಟ್ಟಿ, ಹಾಗೂ ಎಲ್ಲಾ ಶಿಕ್ಷಕರು ಉಪಸ್ಥಿತರಿದ್ದರು. ಪ್ರೌಢಶಾಲಾ ಶಿಕ್ಷಕ ಪರಮೇಶ್ವರ್ ಉಡುಪ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!