Saturday, July 25, 2026
Saturday, July 25, 2026

ಉಡುಪಿ: ಐಕ್ಯತಾ ಪ್ರಮಾಣವಚನ ಬೋಧನೆ

ಉಡುಪಿ: ಐಕ್ಯತಾ ಪ್ರಮಾಣವಚನ ಬೋಧನೆ

Date:

ಉಡುಪಿ: ರಾಷ್ಟ್ರ‍ೀಯ ಐಕ್ಯತಾ ಸಪ್ತಾಹದ ಅಂಗವಾಗಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಅವರ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ಹಾಲ್‌ನಲ್ಲಿ ಎಲ್ಲಾ ಅಧಿಕಾರಿ ಸಿಬ್ಬಂದಿಗಳಿಗೆ ರಾಷ್ಟ್ರ‍ೀಯ ಐಕ್ಯತಾ ಪ್ರಮಾಣವಚನ ಬೋಧಿಸಿದರು.

ದೇಶದ ಸ್ವಾತಂತ್ರ್ಯ ಮತ್ತು ಐಕ್ಯತೆಯನ್ನು ಬಲಪಡಿಸಲು ದೇಶದಲ್ಲಿ ಹಿಂಸಾಚಾರ ಮತ್ತು ಕೋಮು ದ್ವೇಷವನ್ನು ತಡೆಗಟ್ಟಲು ರಾಷ್ಟ್ರ‍ೀಯ ಐಕ್ಯತಾ ಸಪ್ತಾಹವನ್ನು ಆಚರಿಸಲಾಗುತ್ತಿದೆ ಎಂದ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಸಪ್ತಾಹದ ಅಂಗವಾಗಿ ನವೆಂಬರ್ 19 ರಿಂದ 25 ರ ವರೆಗೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಎಲ್ಲಾ ಇಲಾಖೆಯ ಅಧಿಕಾರಿ ಸಿಬ್ಬಂದಿಗಳು ತಮ್ಮ ಇಲಾಖೆಗಳಲ್ಲಿ ಐಕ್ಯತಾ ಪ್ರಮಾಣ ವಚನ ಸ್ವೀಕರಿಸುವಂತೆ ಮತ್ತು ದೇಶಕ್ಕಾಗಿ ಅರ್ಪಣಾ ಮನೋಭಾವದಿಂದ ಕರ್ತವ್ಯ ನಿರ್ವಹಿಸಬೇಕು ಹಾಗೂ ಸಾರ್ವಜನಿಕರು ಯಾವುದೇ ರೀತಿಯ ಭಿನ್ನಾಭಿಪ್ರಾಯ ಮತ್ತು ವಿವಾದಗಳನ್ನು ಶಾಂತ ರೀತಿಯಲ್ಲಿ ಸಂವಿಧಾನಾತ್ಮಕ ರೀತಿಯಲ್ಲಿ ಬಗೆಹರಿಸಿಕೊಳ್ಳಬೇಕು ಎಂದು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಜಿಲ್ಲಾಧಿಕಾರಿ ಕಚೇರಿಯ ವಿವಿಧ ವಿಭಾಗಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!