ಉಡುಪಿ: ನಗರ ಸಭೆಯ ಘನತ್ಯಾಜ್ಯ ನಿರ್ವಹಣೆಗೆ ಫ್ರಂಟ್ ಎನ್ಡ್ ಬ್ಯಾಕ್ ಲೋಡರ್ ವಾಹನ ಹಾಗೂ ನಾಲ್ಕು ಟಿಪ್ಪರ್ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಮಂಜೂರಾಗಿದ್ದು, ಶಾಸಕ ಕೆ. ರಘುಪತಿ ಭಟ್ ನಗರಸಭೆಯ ಬಳಿ ಚಾಲನೆ ನೀಡಿದರು.
ಉಡುಪಿ ನಗರಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ಉಪಾಧ್ಯಕ್ಷರಾದ ಲಕ್ಷ್ಮೀ ಮಂಜುನಾಥ ಕೊಳ, ನಗರ ಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಬಾಲಕೃಷ್ಣ ಶೆಟ್ಟಿ, ಪೌರಾಯುಕ್ತರಾದ ಉದಯ್ ಶೆಟ್ಟಿ, ನಗರಸಭಾ ಸದಸ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.