ಉಡುಪಿ: ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗ, ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಹಾಗೂ ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆ ವತಿಯಿಂದ ಆಯೋಜಿಸಿದ್ದ ಪುರುಷ ಮತ್ತು ಮಹಿಳೆಯರ ಟೆನ್ನಿಸ್ ಪಂದ್ಯಾವಳಿ 2021-22 ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷರಾದ ಯಶ್‌ಪಾಲ್ ಸುವರ್ಣ ಭಾಗವಹಿಸಿ, ಯುವಜನಾಂಗ ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವಂತೆ ಕರೆ ನೀಡಿದರು.
ಪಂದ್ಯಾಕೂಟವನ್ನು ಮಂಗಳೂರು ವಿಶ್ವವಿದ್ಯಾಲಯ ರಿಜಿಸ್ಟ್ರಾರ್ ಪ್ರೊ. ಕಿಶೋರ್ ಕುಮಾರ್ ಸಿ.ಕೆ ಉದ್ಘಾಟಿಸಿ, ಕ್ರೀಡೆಯ ಮಹತ್ವದ ಬಗ್ಗೆ ಹಾಗೂ ಅದರಿಂದಾಗುವ ಪ್ರಯೋಜನದ ಬಗ್ಗೆ ಕ್ರೀಡಾಪಟುಗಳಿಗೆ ತಿಳಿಸಿ, ಪಂದ್ಯಾಕೂಟಕ್ಕೆ
ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಭಾಸ್ಕರ ಶೆಟ್ಟಿ ಎಸ್ ಇವರು ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾ ಲಾನ್ ಟೆನ್ನಿಸ್ ಅಸೋಸಿಯೇಶನ್ ಅಧ್ಯಕ್ಷರಾದ ಸಿ.ಎ ದೇವ್‌ಆನಂದ್., ಕ್ರಾಸ್‌ಲ್ಯಾಂಡ್ ಕಾಲೇಜು ಬ್ರಹ್ಮಾವರ ದೈಹಿಕ ಶಿಕ್ಷಣ ನಿರ್ದೇಶಕರಾದ ಬಿಜು ಜಾಕಬ್, ಗೌರಿ ಎಸ್ ಭಟ್, ಸೋಜನ್ ಕೆ.ಜಿ, ಉಪಸ್ಥಿತರಿದ್ದರು.
ದೈಹಿಕ ಶಿಕ್ಷಣ ಬೋಧಕರಾದ ಡಾ. ರಾಮಚಂದ್ರ ಪಾಟ್ಕರ್ ಸ್ವಾಗತಿಸಿ, ಮಂಜುನಾಥ ವಂದಿಸಿದರು. ಡಾ. ರಾಜೇಂದ್ರ ಕೆ ಕಾರ್ಯಕ್ರಮ ನಿರೂಪಿಸಿದರು.