ಉಡುಪಿ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ಲೋಕಾಯುಕ್ತ ಉಡುಪಿ ಮತ್ತು ಗ್ರಾಮ ಪಂಚಾಯತ್ ಅಲೆವೂರು ಇವರ ಜಂಟಿ ಆಶ್ರಯದಲ್ಲಿ ಸಾರ್ವಜನಿಕ ಕುಂದು ಕೊರತೆಗಳ ಪರಿಹರಿಸುವಲ್ಲಿ ಕರ್ನಾಟಕ ಲೋಕಾಯುಕ್ತ ಸಂಸ್ಥೆಯ ಪಾತ್ರದ ಕುರಿತು ಕಾನೂನು ಅರಿವು ಮೂಡಿಸುವ ಕಾರ್ಯಕ್ರಮವು ಗುರುವಾರ ಉಡುಪಿ ತಾಲೂಕು ಅಲೆವೂರು ಗುಡ್ಡೆಯಂಗಡಿಯ ಸಂಕಲ್ಪ ಸಭಾಭವನದಲ್ಲಿ ನಡೆಯಿತು.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಶಾಂತವೀರ ಶಿವಪ್ಪ, ಸಾರ್ವಜನಿಕರಿಗೆ ಲೋಕಾಯುಕ್ತ ಕಾಯಿದೆ, ಕಾನೂನೂ ಹಾಗೂ ಲೋಕಾಯುಕ್ತ ಸಂಸ್ಥೆಯ ಪಾತ್ರದ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್, ಕರ್ನಾಟಕ ಲೋಕಾಯುಕ್ತ ಉಡುಪಿಯ ಪೊಲೀಸ್ ಉಪಾಧೀಕ್ಷಕ ಜಗದೀಶ್ ಎಂ., ಪೊಲೀಸ್ ನಿರೀಕ್ಷಕ ಜಯರಾಮ ಡಿ ಗೌಡ, ವಿಶೇಷ ಸರಕಾರಿ ಅಭಿಯೋಜಕ ವಿಜಯಕುಮಾರ್ ಶೆಟ್ಟಿ, ಅಲೆವೂರು ಗ್ರಾಮ ಪಂಚಾಯತ್‌ನ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಪಿ.ಡಿ.ಓ ದಯಾನಂದ ಬೆನ್ನೂರು ಸ್ವಾಗತಿಸಿದರು, ಮಂಜೇಶ್ ನಿರೂಪಿಸಿದರು, ನಾಗೇಶ ಉಡುಪ ವಂದಿಸಿದರು.