Tuesday, September 8, 2026
Tuesday, September 8, 2026

ಮಲಬಾರ್ ಗೋಲ್ಡ್ & ಡೈಮಂಡ್ಸ್‌ನಿಂದ ಬೆಳ್ಳಿ ಪ್ರದರ್ಶನ ಮತ್ತು ಮಾರಾಟ

ಮಲಬಾರ್ ಗೋಲ್ಡ್ & ಡೈಮಂಡ್ಸ್‌ನಿಂದ ಬೆಳ್ಳಿ ಪ್ರದರ್ಶನ ಮತ್ತು ಮಾರಾಟ

Date:

ಉಡುಪಿ: ವಿಶ್ವದ ಅತಿದೊಡ್ಡ ಚಿನ್ನ ಮತ್ತು ವಜ್ರದ ರೀಟೇಲ್ ಸಂಸ್ಥೆಗಳಲ್ಲಿ ಒಂದಾಗಿರುವ ಮಲಬಾರ್ ಗೋಲ್ಡ್ & ಡೈಮಂಡ್ಸ್ ಹೆಸರಾಂತ ಶೋರೂಂನಲ್ಲಿ ಹೊಚ್ಚ ಹೊಸದಾದ ಬೆಳ್ಳಿಯ ಆಭರಣದ ಪ್ರದರ್ಶನವನ್ನು ಉದ್ಘಾಟಿಸಲಾಯಿತು. ಜುಲೈ 22 ರಿಂದ 31 ರವರೆಗೆ ನಡೆಯಲಿರುವ ಈ ಪ್ರದರ್ಶನದಲ್ಲಿ ಬೆಳ್ಳಿಯ ಆಭರಣಗಳು ಮತ್ತು ಇತರೆ ಉತ್ಪನ್ನಗಳನ್ನು ಪ್ರದರ್ಶಿಸುತ್ತಿದೆ.

ಇದರ ಅನಾವರಣ ಕಾರ್ಯಕ್ರಮವನ್ನು ಮುಖ್ಯ ಅತಿಥಿಗಳಾದ ನಮಿತಾ ಸತೀಶ್ಚಂದ್ರ, ವರ್ಷ ಶೆಟ್ಟಿ ಹಾಗೂ ಮೇಘ ಕಿಣಿ ನೆರವೇರಿಸಿದರು. ಶಾಖಾ ವ್ಯವಸ್ಥಾಪಕರಾದ ಪುರಂದರ ತಿಂಗಳಾಯ, ರಾಘವೇಂದ್ರ ನಾಯಕ್, ಮುಸ್ತಫಾ ಎ.ಕೆ, ವಿದ್ಯಾ ಸರಸ್ವತಿ ಸಿಬ್ಬಂದಿ ವರ್ಗದವರು ಗ್ರಾಹಕರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ವಿಘ್ನೇಶ್ ನಿರೂಪಿಸಿ ವಂದಿಸಿದರು.

ಮಲಬಾರ್ ಗೋಲ್ಡ್ & ಡೈಮಂಡ್ಸ್ 10 ದೇಶಗಳಲ್ಲಿ 290ಕ್ಕೂ ಹೆಚ್ಚಿನ ಮಳಿಗೆಗಳನ್ನು ಹೊಂದಿದೆ ಮಲಬಾರ್ ಗೋಲ್ಡ್ & ಡೈಮಂಡ್ಸ್ ಉಪ ಬ್ರಾಂಡ್‌ಗಳಾದ ಮೈನ್ ವಜ್ರಾಭರಣಗಳು ಎರಾ – ಅನ್‌ಕಟ್ ವಜ್ರಾಭರಣಗಳು ಡಿವೈನ್ – ಭಾರತೀಯ ಪಾರಂಪರಿಕ ಆಭರಣಗಳು , ಎತಿನಿಕ್ಸ್ – ಕರಕುಶಲ ವಿನ್ಯಾಸಿತ ಆಭರಣಗಳು, ಪ್ರಶಿಯಾ – ಅಮೂಲ್ಯ ರತ್ನಾಭರಣಗಳು , ಸ್ಟಾರ್‌ಲೆಟ್ – ಮಕ್ಕಳ ಆಭರಣಗಳು ಇವೆಲ್ಲದರ ಆಯ್ದ ಸಂಗ್ರಹಗಳನ್ನು ಶೋರೂಂಗಳಲ್ಲಿ ಪ್ರದರ್ಶಿಸಲಾಗುತ್ತದೆ . ಮಲಬಾರ್ ಗೋಲ್ಡ್ & ಡೈಮಂಡ್ಸ್ ತನ್ನ ಎಲ್ಲಾ ಆಭರಣಗಳಿಗೆ ಜೀವನಪರ್ಯಂತ ಉಚಿತ ನಿರ್ವಹಣೆ , ಒಂದು ವರ್ಷ ಉಚಿತ ವಿಮೆ ಸಂರಕ್ಷಣೆ , ಪಾರದರ್ಶಕ ಮತ್ತು ವಿವರವಾದ ದರದ ಪಟ್ಟಿ ಹಾಗು ಬೈಬ್ಯಾಕ್ ಗ್ಯಾರೆಂಟಿಯನ್ನು ಸಾದರಪಡಿಸುತ್ತಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿಯಲ್ಲಿ ಕೇರಳದ ಸಾಂಸ್ಕೃತಿಕ ವೈಭವ: ಓಣಂ ಸಂಭ್ರಮಕ್ಕೆ ಮನಸೋತ ಕರಾವಳಿಗರು

ಉಡುಪಿ, ಸೆ.7: ಕೃಷ್ಣ ಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿ ಮಹೋತ್ಸವದ ಸಂಭ್ರಮದ ನಡುವೆಯೇ...

ಕ್ರಿಯೇಟಿವ್ ಗುರುದೇವೋಭವ: ಅಕ್ಷರ ಸಂತ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಭಾಗಿ

ಕಾರ್ಕಳ, ಸೆ.7: ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಕ್ರಿಯೇಟಿವ್...

ಸರಸ್ವತಿ ವಿದ್ಯಾಲಯದಲ್ಲಿ ಇ ವೇಸ್ಟ್ ಮ್ಯಾನೇಜ್ಮೆಂಟ್ ಕಾರ್ಯಕ್ರಮ

ಗಂಗೊಳ್ಳಿ, ಸೆ.7: ಇ ತ್ಯಾಜ್ಯಗಳನ್ನು ಸರಿಯಾದ ರೀತಿಯಲ್ಲಿ ವಿಲೇವಾರಿ ಮಾಡುವುದು ಹೇಗೆ...

ತ್ರಿಶಾ ವಿದ್ಯಾ ಪಿಯು ಕಾಲೇಜು ಕಟಪಾಡಿ: ಕಾಪು ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಕಟಪಾಡಿ, ಸೆ.7: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮತ್ತು ತ್ರಿಶಾ...
error: Content is protected !!