Home ಸುದ್ಧಿಗಳು ಪ್ರಾದೇಶಿಕ ಟೇಬಲ್ ಟೆನ್ನಿಸ್- ಎಚ್.ಎಂ.ಎಂ ಮತ್ತು ವಿ.ಕೆ.ಆರ್ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ

ಟೇಬಲ್ ಟೆನ್ನಿಸ್- ಎಚ್.ಎಂ.ಎಂ ಮತ್ತು ವಿ.ಕೆ.ಆರ್ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ

2006
0

ಕುಂದಾಪುರ: ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಂ.ಎಂ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿಕೆಆರ್ ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢಶಾಲೆಗಳ ವಿದ್ಯಾರ್ಥಿಗಳು, ಉಡುಪಿ ಜಿಲ್ಲಾ ಪಂಚಾಯತ್ ಶಾಲಾ
ಶಿಕ್ಷಣ ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ ಮತ್ತು ಹೊಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆ ಕುಂದಾಪುರ ಇವರ ಸಂಯುಕ್ತಾಶ್ರಯದಲ್ಲಿ ನಡೆದ ತಾಲೂಕು ಮಟ್ಟದ ಟೇಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ವಿಕೆಆರ್ ಆಚಾರ್ಯ ಸ್ಮಾರಕ ಪ್ರೌಢಶಾಲೆಯ 10ನೇ ತರಗತಿಯ ವಿದ್ಯಾರ್ಥಿಗಳಾದ ಶ್ರೀಶಾಂತ್ ಎಸ್ ನಾಯಕ್, ಆಯುಷ್ ವಿ ಕುಮಾರ್, ವಿಶ್ವಾಸ್ ಆಚಾರ್ಯ ಪ್ರೌಢಶಾಲಾ ಬಾಲಕರ ವಿಭಾಗದಲ್ಲಿ ಮತ್ತು ಕ್ಷಮಾ, ಭಾರ್ಗವಿ, ಸನಿಹ ಎಂ ಪಿ ಮತ್ತು ಅಂಕಿತ ಪ್ರೌಢಶಾಲಾ ಬಾಲಕಿಯರ ತಾಲೂಕು ಮಟ್ಟದ ಟೇಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ ವಿಜೇತರಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಹಾಗೆಯೇ ಎಚ್.ಎಂ.ಎಂ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿಯರಾದ ಶ್ರಾವ್ಯ, ಪ್ರಾಪ್ತಿ ಮಡಪ್ಪಾಡಿ., ಸಾನ್ವಿ ಸಿ., ಮತ್ತು ಶ್ರೇಯಾ ಬಾಲಕಿಯರ ವಿಭಾಗದಲ್ಲಿ ವಿಜೇತರಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ಮತ್ತು ಬಾಲಕರ ವಿಭಾಗದಲ್ಲಿ ಸಾತ್ವಿಕ್ ಎಸ್ ಎಮ್., ಎಚ್ ಅಬ್ದುಲ್ ಅಶ್ಬಿಲ್, ಮತ್ತು ಮೊಹಮದ್ ಪೈಝಾನ್ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.

ಸಂಸ್ಥೆಯ ಪ್ರಾಂಶುಪಾಲೆ ಚಿಂತನಾ ರಾಜೇಶ್ ರ ಮಾರ್ಗದರ್ಶನ ಮತ್ತು ದೈಹಿಕ ಶಿಕ್ಷಣ ಶಿಕ್ಷಕರಾದ ರಾಜೇಂದ್ರ ಶೆಟ್ಟಿ, ನಾಗೇಶ್ ಪ್ರಭು ಮತ್ತು ವೀರೇಂದ್ರ ನಾಯಕ್ ರಿಂದ ತರಬೇತಿ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳನ್ನು ಸಂಸ್ಥೆಯ ಉಪಪ್ರಾಂಶುಪಾಲೆ ಮತ್ತು ಪ್ರೌಢಶಾಲಾ ಮುಖ್ಯ ಶಿಕ್ಷಕಿ ಶುಭ ಕೆ ಎನ್, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಜಗದೀಶ್ ಆಚಾರ್ ಸಾಸ್ತಾನ, ಸಹಾಯಕ ಮುಖ್ಯ ಶಿಕ್ಷಕಿ ಕವಿತಾ ಭಟ್, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಲತಾ ಜಿ ಭಟ್, ಪ್ರೌಢಶಾಲಾ ಸಹಾಯಕ ಮುಖ್ಯ ಶಿಕ್ಷಕ ಚಂದ್ರಶೇಖರ್ ಶೆಟ್ಟಿ ಅಭಿನಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.