Tuesday, January 21, 2025
Tuesday, January 21, 2025

ಡೀಸೆಲ್ ಸಹಾಯಧನ: ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿಗೆ ಆ.20 ಕೊನೆಯ ದಿನ

ಡೀಸೆಲ್ ಸಹಾಯಧನ: ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿಗೆ ಆ.20 ಕೊನೆಯ ದಿನ

Date:

ಉಡುಪಿ: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿಯಲ್ಲಿ ಯಂತ್ರೋಪಕರಣಗಳ ಬಳಕೆಯನ್ನು ಪ್ರೋತ್ಸಾಹಿಸಿ, ಕೃಷಿ ಉತ್ಪಾದಕತೆಯನ್ನು ಹೆಚ್ಚಿಸಲು ಹಾಗೂ ರೈತರಿಗೆ ಇಂಧನದ ವೆಚ್ಚ ಕಡಿಮೆ ಮಾಡುವ ಸಲುವಾಗಿ ಪ್ರತಿ ಎಕರೆಗೆ 250 ರೂ. ನಂತೆ ಗರಿಷ್ಟ 5 ಎಕರೆಯವರೆಗೆ 1250 ರೂ. ಗಳನ್ನು ಡಿ.ಬಿ.ಟಿ ಮೂಲಕ ಡೀಸೆಲ್ ಸಬ್ಸಿಡಿ ನೀಡುವ ರೈತ ಶಕ್ತಿ ಯೋಜನೆಯನ್ನು ಜಾರಿಗೊಳಿಸಿದ್ದು, ಈ ಯೋಜನೆಯಡಿ ರೈತರು ಪ್ರತ್ಯೇಕವಾಗಿ ಅರ್ಜಿ ಸಲ್ಲಿಸುವ ಅವಶ್ಯಕತೆಯಿರುವುದಿಲ್ಲ. ಗರಿಷ್ಟ 5 ಎಕರೆಯವರೆಗೆ ಫ್ರೂಟ್ಸ್ ಪೋರ್ಟಲ್‌ನಲ್ಲಿ ನಮೂದಿಸಿರುವ ಹಿಡುವಳಿಯ ಆಧಾರದ ಮೇಲೆ ರೈತರಿಗೆ ಡೀಸೆಲ್ ಸಹಾಯಧನ ವರ್ಗಾವಣೆಯಾಗಲಿದೆ.

ಜಿಲ್ಲೆಯ ರೈತರು ಈ ಯೋಜನೆಯ ಪ್ರಯೋಜನ ಪಡೆಯಲು ಹತ್ತಿರದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ತಮ್ಮ ಜಮೀನಿನ ಎಲ್ಲಾ ಸರ್ವೆ ನಂಬರ್‌ಗಳ ವಿಸ್ತೀರ್ಣವನ್ನು ಫ್ರೂಟ್ಸ್ ಪೋರ್ಟಲ್‌ನಲ್ಲಿ ಆಗಸ್ಟ್ 20 ರ ಒಳಗೆ ನೋಂದಣಿ ಮಾಡಿಸಬೇಕು. ಸದ್ರಿ ದಿನಾಂಕದವರೆಗೆ ಫ್ರೂಟ್ಸ್ ಪೋರ್ಟಲ್‌ನಲ್ಲಿ ನೋಂದಾವಣಿಯಾದ ವಿಸ್ತೀರ್ಣಕ್ಕನುಗುಣವಾಗಿ ಡೀಸೆಲ್ ಸಬ್ಸಿಡಿ ಡಿ.ಬಿಟಿ ಮುಖಾಂತರ ಆಧಾರ್ ಜೋಡಣೆಯಾದ ಬ್ಯಾಂಕ್ ಖಾತೆಗೆ ದೊರೆಯಲಿದೆ.

ಈವರೆಗೆ ಫ್ರೂಟ್ಸ್ ತಂತ್ರಾಂಶದಲ್ಲಿ ನೊಂದಣಿ ಮಾಡಿಕೊಳ್ಳದ ರೈತರು ಕೂಡಲೇ ನೋಂದಣಿ ಮಾಡಿಸಿಕೊಂಡು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!