Thursday, October 15, 2026
Thursday, October 15, 2026

ಶೀಘ್ರದಲ್ಲಿ ಕಡತ ವಿಲೇವಾರಿ: ಜಿಲ್ಲಾಧಿಕಾರಿ

ಶೀಘ್ರದಲ್ಲಿ ಕಡತ ವಿಲೇವಾರಿ: ಜಿಲ್ಲಾಧಿಕಾರಿ

Date:

ಉಡುಪಿ: ಜಿಲ್ಲಾಧಿಕಾರಿ ಕಚೇರಿ ಸೇರಿದಂತೆ ಜಿಲ್ಲೆಯ ಎಲ್ಲಾ ಕಚೇರಿಗಳ ಕಡತಗಳನ್ನು ಕಾಲಮಿತಿಯಲ್ಲಿ ಶೀಘ್ರದಲ್ಲಿ ವಿಲೇವಾರಿ ಮಾಡುವಂತೆ ಎಲ್ಲಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು.

ಅವರು ಇಂದು ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ಹಾಲ್‌ನಲ್ಲಿ, ಎಲ್ಲಾ ಅಧಿಕಾರಿ ಸಿಬ್ಬಂದಿಗಳಿಗೆ ಸಂವಿಧಾನ ದಿನದ ಅಂಗವಾಗಿ ಸಂವಿಧಾನ ಪೀಠಿಕೆ ಬೋಧಿಸಿ, ನಂತರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲಾಧಿಕಾರಿ ಕಚೇರಿ, ಎಲ್ಲಾ ತಾಲೂಕು ಕಚೇರಿಗಳು ಹಾಗೂ ಕುಂದಾಪುರ ಉಪ ವಿಭಾಗಾಧಿಕಾರಿ ಕಚೇರಿಗೆ ಸಂಬಂಧಿಸಿದ ಕಡತಗಳನ್ನು ಇ-ಕಚೇರಿ ಮೂಲಕವೇ ತ್ವರಿತವಾಗಿ ವಿಲೇವಾರಿ ಮಾಡುವಂತೆ ಹಾಗೂ ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು 2 ತಿಂಗಳ ಒಳಗೆ ಸಂಪೂರ್ಣ ಇ-ಕಚೇರಿ ಮೂಲಕ ಕಡತಗಳನ್ನು ನಿರ್ವಹಣೆ ಮಾಡಬೇಕು.

ಈ ಕುರಿತಂತೆ ಸಿಬ್ಬಂದಿಗಳಿಗೆ ಅಗತ್ಯ ತರಬೇತಿ ಮತ್ತಿತರ ಮೂಲ ಸೌಕರ್ಯಗಳನ್ನು ಸಿದ್ಧಪಡಿಸಿಕೊಳ್ಳುವಂತೆ ಸೂಚನೆ ನೀಡಿದರು.

ಜಿಲ್ಲೆಯ ಆಡಳಿತ ವ್ಯವಸ್ಥೆಯಲ್ಲಿ ಸಂಪೂರ್ಣ ಪಾರದರ್ಶಕತೆ ಇರಬೇಕು. ಈ ನಿಟ್ಟಿನಲ್ಲಿ ಎಲ್ಲಾ ಕಡತಗಳನ್ನು ಸೂಕ್ತ ರೀತಿಯಲ್ಲಿ ಸಮರ್ಪಕವಾಗಿ ನಿರ್ವಹಣೆ ಮಾಡಬೇಕು ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಾಲಕೃಷ್ಣಪ್ಪ, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕಿ ಪ್ರತಿಭಾ, ಪೌರಾಯುಕ್ತ ಉದಯ ಶೆಟ್ಟಿ ಹಾಗೂ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಎನ್.ಡಿ.ಎ ಪ್ರವೇಶ ಪರೀಕ್ಷೆ: ಜ್ಞಾನಸುಧಾದ 10 ವಿದ್ಯಾರ್ಥಿಗಳು ತೇರ್ಗಡೆ

ಕಾರ್ಕಳ, ಅ.14: ಭಾರತೀಯ ಸೇನೆಯಲ್ಲ ಸೇವೆ ಸಲ್ಲಿಸಲು ಇಚ್ಚಿಸುವವರಿಗೆ ರಾಷ್ಟ್ರಮಟ್ಟದಲ್ಲಿ ನ್ಯಾಷನಲ್...

ಶ್ರೀ ವಿನಾಯಕ ಯುವಕ ಮಂಡಲ (ರಿ.) ಸಾೖಬ್ರಕಟ್ಟೆ ಯಡ್ತಾಡಿ 15 ನೇ ವರ್ಷದ ಶಾರದೋತ್ಸವ

ಉಡುಪಿ, ಅ.13: ಶ್ರೀ ವಿನಾಯಕ ಯುವಕ ಮಂಡಲ (ರಿ) ಸಾೖಬ್ರಕಟ್ಟೆ ಯಡ್ತಾಡಿ...

ಗಂಗೊಳ್ಳಿ ಸರಸ್ವತಿ ವಿದ್ಯಾಲಯ: ಎನ್ ಎಸ್ ಎಸ್ ವಾರ್ಷಿಕ ಶಿಬಿರದ ಸಮಾರೋಪ ಸಮಾರಂಭ

ಉಡುಪಿ, ಅ.13: ಒಬ್ಬ ವಿದ್ಯಾರ್ಥಿ ದೈಹಿಕ ಮಾನಸಿಕ ಕಲಾತ್ಮಕ ಸದೃಢತೆ ಸಾಧಿಸುವಲ್ಲಿ...

ಸಾಹಿತ್ಯದಿಂದ ಮಾನವೀಯ ಮೌಲ್ಯಗಳ ಪುನರುತ್ಥಾನ

ಕೋಟೇಶ್ವರ, ಅ.13: ಸಮಾಜದ ಏಳುಬೀಳಿನ ಕಥನವನ್ನು ಹೇಳಿ ಆರೋಗ್ಯಪೂರ್ಣ ಸಮಾಜ ಕಟ್ಟುವ...
error: Content is protected !!