Friday, October 16, 2026
Friday, October 16, 2026

ನೆಟ್‌ವರ್ಕ್ ಸಮಸ್ಯೆ ಶೀಘ್ರದಲ್ಲಿ ಬಗೆಹರಿಸಿ: ಜಿಲ್ಲಾಧಿಕಾರಿ

ನೆಟ್‌ವರ್ಕ್ ಸಮಸ್ಯೆ ಶೀಘ್ರದಲ್ಲಿ ಬಗೆಹರಿಸಿ: ಜಿಲ್ಲಾಧಿಕಾರಿ

Date:

ಉಡುಪಿ: ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿನ ಮೊಬೈಲ್ ನೆಟ್‌ವರ್ಕ್ ಸಮಸ್ಯೆಯನ್ನು ಶೀಘ್ರದಲ್ಲಿ ಪರಿಹರಿಸುವಂತೆ ಜಿಲ್ಲೆಯಲ್ಲಿನ ವಿವಿಧ ಮೊಬೈಲ್ ಸಂಸ್ಥೆಗಳ ಪ್ರತಿನಿಧಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸೂಚನೆ ನೀಡಿದರು.
ಅವರು ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ಹಾಲ್‌ನಲ್ಲಿ ನಡೆದ, ಜಿಲ್ಲಾಮಟ್ಟದ ದೂರ ಸಂಪರ್ಕ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಗ್ರಾಮೀಣ ಪ್ರದೇಶದಲ್ಲಿ ಮೊಬೈಲ್ ನೆಟ್‌ವರ್ಕ್ ಸರಿಯಾಗಿ ದೊರೆಯದ ಕಾರಣ ಗ್ರಾಮೀಣ ಜನತೆ ತುರ್ತು ಸಂದರ್ಭದಲ್ಲಿ ಅಗತ್ಯ ನೆರವು ಪಡೆಯಲು, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ತಮ್ಮ ಸಂಬಂಧಿಕರನ್ನು ಸಂಪರ್ಕಿಸಲು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಅಲ್ಲದೇ ವಿದ್ಯಾರ್ಥಿಗಳು ಸಹ ಆನ್‌ಲೈನ್ ಪಾಠಗಳನ್ನು ಕೇಳಲು ಸಾಕಷ್ಟು ಶ್ರಮ ಪಡುತ್ತಿದ್ದು, ನೆಟ್‌ವರ್ಕ್ ಸಂಪರ್ಕಕ್ಕಾಗಿ ಎತ್ತರದ ಮತ್ತು ಅಪಾಯಕಾರಿ ಸ್ಥಳಗಳನ್ನು ಆಶ್ರಯಿಸುತ್ತಿದ್ದಾರೆ.

ಇಂತಹ ಪ್ರದೇಶಗಳಲ್ಲಿ ತ್ವರಿತಗತಿಯಲ್ಲಿ ಟವರ್‌ಗಳನ್ನು ಅಳವಡಿಸಿ, ನಿರಂತರವಾಗಿ ಮೊಬೈಲ್ ಸಂಪರ್ಕ ಹಾಗೂ ನಿಗದಿತ ವೇಗವನ್ನು ದೊರಕಿಸುವಂತೆ ವಿವಿಧ ಮೊಬೈಲ್ ಸಂಸ್ಥೆಗಳಿಗೆ ಕೂರ್ಮಾರಾವ್ ಎಂ.ಸೂಚಿಸಿದರು.

ನೆಟ್‌ವರ್ಕ್ ಒದಗಿಸುವ ಸಂಸ್ಥೆಗಳು ಸಂಬಂಧಪಟ್ಟ ಗ್ರಾಮ ಪಂಚಾಯತ್‌ಗಳಿಗೆ ಬಾಕಿ ಇರುವ ಶುಲ್ಕವನ್ನು ಶೀಘ್ರವಾಗಿ ಪಾವತಿಸಿ, ನಿರಪೇಕ್ಷಣಾ ಪತ್ರವನ್ನು ಪಡೆಯಬೇಕು. ಟವರ್ ಅಳವಡಿಕೆ ಸಂದರ್ಭದಲ್ಲಿ ವಿದ್ಯುತ್ ಸಂಪರ್ಕ ಪಡೆಯಲು ಭೂ ದಾಖಲೆಗಳ ವಿವರ ಹಾಗೂ ನಿರಪೇಕ್ಷಣ ಪತ್ರವನ್ನು ಮೆಸ್ಕಾಂ ಇಲಾಖೆಗೆ ನೀಡಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಕಂಡುಬರುವ ನೆಟ್‌ವರ್ಕ್ ಸಮಸ್ಯೆ, ಗ್ರಾಮೀಣ ವೈಫೈ ಯೋಜನೆ (ಭಾರತ್ -ನೆಟ್) ಪ್ರಗತಿ ಕುರಿತು ಸಭೆಯಲ್ಲಿ ವಿಸ್ತೃತ ಚರ್ಚೆ ನಡೆಯಿತು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್, ಅಪರ ಜಿಲ್ಲಾಧಿಕಾರಿ ಬಾಲಕೃಷ್ಣಪ್ಪ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಪ್ರತಿಭಾ, ಪೌರಾಯುಕ್ತ ಉದಯ ಶೆಟ್ಟಿ, ಜಿಲ್ಲೆಯಲ್ಲಿನ ವಿವಿಧ ಮೊಬೈಲ್ ಸಂಸ್ಥೆಗಳ ಪ್ರತಿನಿಧಿಗಳು ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಗೃಹಜ್ಯೋತಿ ಯೋಜನೆಯ ದಾಖಲೆ ಮರುಪರಿಶೀಲನಾ ಪ್ರಕ್ರಿಯೆ ಅ. 31 ರ ವಿಸ್ತರಣೆ: ರಮೇಶ್ ಕಾಂಚನ್

ಉಡುಪಿ, ಅ.16: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ...

ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ

ಉಡುಪಿ, ಅ.16: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ ಬೆಂಗಳೂರು ಇವರ...

ಅ. 17: ನೇರ ಸಂದರ್ಶನ

ಉಡುಪಿ, ಅ.16: ನಗರದ ಗ್ರೋಸ್ಪೆರ್ ಗ್ರೂಪ್, ಎರಡನೇ ಮಹಡಿ, ಕೈಗಾರಿಕಾ ಸಹಕಾರ...

ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಬಿ.ಎಸ್.ಎನ್.ಎಲ್ ಅಧಿಕಾರಿಗಳಿಗೆ ಕೋಟ ಶ್ರೀನಿವಾಸ ಪೂಜಾರಿ ಕರೆ

ಉಡುಪಿ, ಅ.16: ಜಿಲ್ಲೆಯ ಬಿ.ಎಸ್.ಎನ್.ಎಲ್ ಸಂಸ್ಥೆಯು ತನ್ನ ಗ್ರಾಹಕರಿಗೆ ನೆಟ್‌ವರ್ಕ್ ಸಂಬಂಧಿತ...
error: Content is protected !!