Tuesday, September 8, 2026
Tuesday, September 8, 2026

ತನ್ನನ್ನು ತಾನು ಅರಿಯಲು ಎನ್.ಎಸ್.ಎಸ್ ಸಹಕಾರಿ: ಡಾ. ಪ್ರಸಾದ್ ರಾವ್

ತನ್ನನ್ನು ತಾನು ಅರಿಯಲು ಎನ್.ಎಸ್.ಎಸ್ ಸಹಕಾರಿ: ಡಾ. ಪ್ರಸಾದ್ ರಾವ್

Date:

ಕಾರ್ಕಳ: ವಿದ್ಯಾರ್ಥಿಗಳು ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವ ಮತ್ತು ಮೌಲ್ಯಗಳನ್ನು ಅಳವಡಿಸಿಕೊಳ್ಳುವ ಅರಿವು ಮೂಡಲು ಎನ್ನೆಸ್ಸೆಸ್ ತನ್ನದೇ ಆದ ರೀತಿಯಲ್ಲಿ ಸಹಕಾರಿಯಾಗಿದೆ ಎಂದು ಸರಕಾರಿ ಪ್ರಥಮ ದರ್ಜೆ ಕಾಲೇಜು ಹೆಬ್ರಿಯ ಪ್ರಾಂಶುಪಾಲರಾದ ಡಾ. ಪ್ರಸಾದ್ ರಾವ್ ಹೇಳಿದರು.

ಅವರು ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ರಾಷ್ಟ್ರ‍ೀಯ ಸೇವಾ ಯೋಜನೆಯ ಕಾರ್ಯಚಟುವಟಿಕೆಗಳ ಉದ್ಘಾಟಕರಾಗಿ ಭಾಗವಹಿಸಿ ಮಾತನಾಡುತ್ತಾ, ನಾನು ನನ್ನದು ಎಂಬ ಸ್ವಾರ್ಥ ಮನೋಭಾವ ಎಲ್ಲೆಡೆ ಮನೆಮಾಡಿರುವಾಗ ಶೈಕ್ಷಣಿಕ ಜೀವನದ ಎನ್ನೆಸ್ಸೆಸ್ ಸಹಬಾಳ್ವೆ, ‘ನನಗಲ್ಲ ನಿನಗೆ’ ಎಂಬ ಕಲ್ಪನೆ ಕೊಟ್ಟು ಶ್ರಮದ ಮಹತ್ವ ತಿಳಿಸಿಕೊಡುತ್ತದೆ.

ಸೇವಾ ಮನೋಭಾವನೆಯಿರುವವರಿಗೆ ಬೆಲೆಯೂ, ಬಲವೂ ಬರುತ್ತದೆ ಎಂದು ಎನ್ನೆಸ್ಸೆಸ್ ಕಾರ್ಯಕ್ರಮಗಳಿಗೆ ಶುಭ ಹಾರೈಸಿದರು. ಕಾಲೇಜಿನ ಪ್ರಾಂಶುಪಾಲರಾದ ದಿನೇಶ್ ಎಂ. ಕೊಡವೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಅಜೆಕಾರ್ ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿ, ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಉಪಪ್ರಾಂಶುಪಾಲರಾದ ಸಾಹಿತ್ಯ, ಸಾರ್ವಜನಿಕ ಸಂಪರ್ಕಾಧಿಕಾರಿ ಜ್ಯೋತಿ ಪದ್ಮನಾಭ ಬಂಡಿ, ಕಾರ್ಕಳ ಜ್ಞಾನಸುಧಾ ಆಂಗ್ಲಮಾಧ್ಯಮ ಪ್ರೌಢಶಲೆಯ ಉಪ ಪ್ರಾಂಶುಪಾಲರಾದ ವಾಣಿ ಕೆ. ಉಪಸ್ಥಿತರಿದ್ದರು.

ಎನ್ನೆಸ್ಸೆಸ್ ಕಾರ್ಯಕ್ರಮಾಧಿಕಾರಿ ರವಿ ಜಿ. ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಎನ್ನೆಸ್ಸೆಸ್ ವಿದ್ಯಾರ್ಥಿ ನಾಯಕ ಪ್ರಸನ್ನ ಪ್ರತಿಜ್ಞಾ ವಿಧಿ ಬೋಧಿಸಿದರು. ಉಪನ್ಯಾಸಕ ಸಂತೋಷ್ ನೆಲ್ಲಿಕಾರು ಕಾರ್ಯಕ್ರಮ ನಿರೂಪಿಸಿ, ಎನ್ನೆಸ್ಸೆಸ್ ವಿದ್ಯಾರ್ಥಿ ನಾಯಕಿ ಸ್ವಾತಿ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿಯಲ್ಲಿ ಕೇರಳದ ಸಾಂಸ್ಕೃತಿಕ ವೈಭವ: ಓಣಂ ಸಂಭ್ರಮಕ್ಕೆ ಮನಸೋತ ಕರಾವಳಿಗರು

ಉಡುಪಿ, ಸೆ.7: ಕೃಷ್ಣ ಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿ ಮಹೋತ್ಸವದ ಸಂಭ್ರಮದ ನಡುವೆಯೇ...

ಕ್ರಿಯೇಟಿವ್ ಗುರುದೇವೋಭವ: ಅಕ್ಷರ ಸಂತ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಭಾಗಿ

ಕಾರ್ಕಳ, ಸೆ.7: ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಕ್ರಿಯೇಟಿವ್...

ಸರಸ್ವತಿ ವಿದ್ಯಾಲಯದಲ್ಲಿ ಇ ವೇಸ್ಟ್ ಮ್ಯಾನೇಜ್ಮೆಂಟ್ ಕಾರ್ಯಕ್ರಮ

ಗಂಗೊಳ್ಳಿ, ಸೆ.7: ಇ ತ್ಯಾಜ್ಯಗಳನ್ನು ಸರಿಯಾದ ರೀತಿಯಲ್ಲಿ ವಿಲೇವಾರಿ ಮಾಡುವುದು ಹೇಗೆ...

ತ್ರಿಶಾ ವಿದ್ಯಾ ಪಿಯು ಕಾಲೇಜು ಕಟಪಾಡಿ: ಕಾಪು ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಕಟಪಾಡಿ, ಸೆ.7: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮತ್ತು ತ್ರಿಶಾ...
error: Content is protected !!