ಮಲ್ಪೆ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಸರ್ಕಾರಿ ಪದವಿಪೂರ್ವ ಕಾಲೇಜು ಮಲ್ಪೆ ಇವರ ಸಹಯೋಗದೊಂದಿಗೆ ಕಾಲೇಜಿನಲ್ಲಿ “ಡಾ. ಬಿ.ಆರ್.ಅಂಬೇಡ್ಕರ್ ಓದು” ಎಂಬ ಶೀರ್ಷಿಕೆಯಡಿ ಭಾರತ ರತ್ನ ಡಾ. ಬಿ.ಆರ್.ಅಂಬೇಡ್ಕರ್ ಅವರ ಕುರಿತು ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲರಾದ ವರ್ಗೀಸ್ ಪಿ. ಅವರು ಉದ್ಘಾಟಿಸಿದರು.
ಕಾಲೇಜಿನ ರಸಾಯನಶಾಸ್ತ್ರ ಉಪನ್ಯಾಸಕರಾದ ವಿಶ್ವನಾಥ್ ಭಟ್, ಡಾ.ಬಿ.ಆರ್. ಅಂಬೇಡ್ಕರ್ ಕುರಿತು ಉಪನ್ಯಾಸ ನೀಡಿದರು. ಕಲಾವಿದರಾದ ಶಂಕರ ಚಂಡ್ಕಳ ಇವರಿಂದ ಡಾ.ಬಿ.ಆರ್. ಅಂಬೇಡ್ಕರ್ ಕುರಿತು ಗೀತಗಾಯನ ಕಾರ್ಯಕ್ರಮ ನಡೆಯಿತು.
ಮಲ್ಪೆ ಸರ್ಕಾರಿ ಪ್ರೌಢಶಾಲೆ ಶಿಕ್ಷಕಿ ಸಂಧ್ಯಾ, ಉಡುಪಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಕುಮಾರ ಬೆಕ್ಕೇರಿ ಮತ್ತು ಇಲಾಖೆಯ ಸಿಬ್ಬಂದಿಗಳು ಹಾಗೂ ಕಾಲೇಜಿನ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕಾಲೇಜಿನ ಉಪನ್ಯಾಸಕರಾದ ಎಸ್. ಜಿ. ಭಾಗವತ್ ಕಾರ್ಯಕ್ರಮ ನಿರೂಪಿಸಿದರು.