Sunday, August 30, 2026
Sunday, August 30, 2026

ಮಲ್ಪೆ- ಅಂಬೇಡ್ಕರ್ ಓದು ಕಾರ್ಯಕ್ರಮ

ಮಲ್ಪೆ- ಅಂಬೇಡ್ಕರ್ ಓದು ಕಾರ್ಯಕ್ರಮ

Date:

ಮಲ್ಪೆ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಸರ್ಕಾರಿ ಪದವಿಪೂರ್ವ ಕಾಲೇಜು ಮಲ್ಪೆ ಇವರ ಸಹಯೋಗದೊಂದಿಗೆ ಕಾಲೇಜಿನಲ್ಲಿ “ಡಾ. ಬಿ.ಆರ್.‍ಅಂಬೇಡ್ಕರ್ ಓದು” ಎಂಬ ಶೀರ್ಷಿಕೆಯಡಿ ಭಾರತ ರತ್ನ ಡಾ. ಬಿ.ಆರ್.‍ಅಂಬೇಡ್ಕರ್ ಅವರ ಕುರಿತು ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲರಾದ ವರ್ಗೀಸ್ ಪಿ. ಅವರು ಉದ್ಘಾಟಿಸಿದರು.

ಕಾಲೇಜಿನ ರಸಾಯನಶಾಸ್ತ್ರ ಉಪನ್ಯಾಸಕರಾದ ವಿಶ್ವನಾಥ್ ಭಟ್, ಡಾ.ಬಿ.ಆರ್. ಅಂಬೇಡ್ಕರ್ ಕುರಿತು ಉಪನ್ಯಾಸ ನೀಡಿದರು. ಕಲಾವಿದರಾದ ಶಂಕರ ಚಂಡ್ಕಳ ಇವರಿಂದ ಡಾ.ಬಿ.ಆರ್. ಅಂಬೇಡ್ಕರ್ ಕುರಿತು ಗೀತಗಾಯನ ಕಾರ್ಯಕ್ರಮ ನಡೆಯಿತು.

ಮಲ್ಪೆ ಸರ್ಕಾರಿ ಪ್ರೌಢಶಾಲೆ ಶಿಕ್ಷಕಿ ಸಂಧ್ಯಾ, ಉಡುಪಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಕುಮಾರ ಬೆಕ್ಕೇರಿ ಮತ್ತು ಇಲಾಖೆಯ ಸಿಬ್ಬಂದಿಗಳು ಹಾಗೂ ಕಾಲೇಜಿನ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕಾಲೇಜಿನ ಉಪನ್ಯಾಸಕರಾದ ಎಸ್. ಜಿ. ಭಾಗವತ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವರ್ತಮಾನದ ಸಂಕಟಗಳನ್ನು ಮೀರುವ ಶಕ್ತಿ ಸಾಹಿತ್ಯಕ್ಕಿದೆ: ಡಾ. ಸಂತೋಷ್ ಆಳ್ವ

ವಾಮದಪದವು. ಆ.28: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ...

ಗಂಗೊಳ್ಳಿ: ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಗಂಗೊಳ್ಳಿ, ಆ.28: ಶ್ರೀ ನಾರಾಯಣ ಗುರು ಜನ ಸೇವಾ ಬಳಗ ಗಂಗೊಳ್ಳಿ...

ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ

ಉಡುಪಿ, ಆ.28: ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ ಶುಕ್ರವಾರ ಟ್ರಸ್ಟಿನ ಗೌರವಾಧ್ಯಕ್ಷರು,...

ಕಾರ್ಕಳ: ಮಾಳ ಕೋಟೆ ಬಸದಿಯಲ್ಲಿ 5 ಅಪರೂಪದ ಜಿನ ಶಾಸನಗಳ ಪತ್ತೆ; ಸಂಶೋಧಕ ಶ್ರುತೇಶ್ ಆಚಾರ್ಯರಿಂದ ಅಧ್ಯಯನ

ಕಾರ್ಕಳ, ಆ.27: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಸ್ವಸ್ತಿ ಶ್ರೀ ಲಲಿತಕೀರ್ತಿ...
error: Content is protected !!