Sunday, January 19, 2025
Sunday, January 19, 2025

ತ್ಯಾಜ್ಯಗಳ ಮರುಬಳಕೆಯಿಂದ ಆರೋಗ್ಯಕರ ವಾತಾವರಣ ನಿರ್ಮಾಣ: ಶ್ರೀನಿವಾಸ ರಾವ್

ತ್ಯಾಜ್ಯಗಳ ಮರುಬಳಕೆಯಿಂದ ಆರೋಗ್ಯಕರ ವಾತಾವರಣ ನಿರ್ಮಾಣ: ಶ್ರೀನಿವಾಸ ರಾವ್

Date:

ಉಡುಪಿ: ಘನ ಮತ್ತು ದ್ರವ ತ್ಯಾಜ್ಯಗಳ ಸಮರ್ಪಕ ನಿರ್ವಹಣೆಯಿಂದ ಉತ್ತಮ ಸಂಪನ್ಮೂಲವನ್ನಾಗಿಸಬಹುದಾಗಿದ್ದು, ತ್ಯಾಜ್ಯದ ಮರುಬಳಕೆಯಿಂದ ಸಂಪನ್ಮೂಲದ ಅಭಾವ ತಪ್ಪಿಸುವುದರೊಂದಿಗೆ ಆರೋಗ್ಯಕರ ವಾತಾವರಣ ನಿರ್ಮಿಸಬಹುದು. ಶಾಲೆಗಳಲ್ಲಿ ಇಕೋ ಕ್ಲಬ್ ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದಲ್ಲಿ ಮುಂದಿನ ಪೀಳಿಗೆಯು ಮಾಲಿನ್ಯ ರಹಿತ ಆರೋಗ್ಯಯುತ ಜೀವನ ನಡೆಸಬಹುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್ ತಿಳಿಸಿದರು.

ಅವರು ಒಳಕಾಡು ಸರಕಾರಿ ಪ್ರೌಢಶಾಲೆಯಲ್ಲಿ, ಸ್ವಚ್ಛ ಭಾರತ್ ಮಿಷನ್ ಜಿಲ್ಲಾ ಪಂಚಾಯತ್ ಉಡುಪಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಉಡುಪಿ ಇವರುಗಳ ಸಂಯುಕ್ತ ಆಶ್ರಯದಲ್ಲಿ ನಡೆದ, ಋತುಚಕ್ರ ನೈರ್ಮಲ್ಯ ಹಾಗೂ ತ್ಯಾಜ್ಯದ ವೈಜ್ಞಾನಿಕ ನಿರ್ವಹಣೆ ಎಂಬ ವಿಷಯದ ಕುರಿತು ವಲಯ ಮಟ್ಟದ, ಪ್ರೌಢಶಾಲಾ ಮಹಿಳಾ ಶಿಕ್ಷಕರಿಗೆ ಜಾಗೃತಿ ಮೂಡಿಸುವ ಒಂದು ದಿನದ ಕಾರ್ಯಾಗಾರದಲ್ಲಿ ಮಾತನಾಡಿದರು.

ವೈಜ್ಞಾನಿಕವಾಗಿ ಶೌಚಾಲಯಗಳ ನಿರ್ಮಾಣ, ದ್ರವ ತ್ಯಾಜ್ಯ ವಿಲೇವಾರಿಗೆ ಸಾಂಪ್ರದಾಯಿಕ ವಿಧಾನದಲ್ಲಿ ಸಸ್ಯಗಳನ್ನು ಬೆಳೆಸಿ ಕೈ ತೋಟ ಮಾಡುವ ಕುರಿತು ಶಿಕ್ಷಕರಿಗೆ ಮಾಹಿತಿ ನೀಡಿದ ಅವರು, ಶಾಲೆಗಳಲ್ಲಿ ಹೆಣ್ಣು ಮಕ್ಕಳು ಬಳಸಿದ ಸ್ಯಾನಿಟರಿ ಪ್ಯಾಡ್‌ಗಳನ್ನು ಇನ್ಸಿನರೇಟರ್ ಬಳಸಿ ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡುವಂತೆ ತಿಳಿಸಿದರು.

ಉಡುಪಿಯ ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ್ ಕಾಮತ್ ಮಾತನಾಡಿ, ತ್ಯಾಜ್ಯ ವಿಲೇವಾರಿ ಇಂದಿನ ದಿನಗಳಲ್ಲಿ ದೊಡ್ಡ ಸಮಸ್ಯೆಯಾಗಿದ್ದು, ಸೂಕ್ತ ರೀತಿಯಲ್ಲಿ ಇದನ್ನು ವಿಲೇವಾರಿ ಮಾಡಬೇಕು. ಹೆಣ್ಣು ಮಕ್ಕಳ ಋತು ಚಕ್ರದ ಬಗ್ಗೆ ಇರುವ ಮೂಡನಂಬಿಕೆಗಳನ್ನು ಹೋಗಲಾಡಿಸಬೇಕು ಎಂದರು.

ಮಣಿಪಾಲ ಕೆಎಂಸಿಯ ಸ್ತ್ರೀರೋಗ ತಜ್ಞೆ ಡಾ. ರಜನಿ ಉಪಾಧ್ಯಾಯ ಹೆಣ್ಣು ಮಕ್ಕಳಲ್ಲಿ ಋತುಚಕ್ರ ಉಂಟಾಗುವ ಸಂದರ್ಭದಲ್ಲಿ ಕಂಡುಬರುವ ದೈಹಿಕ ಹಾಗೂ ಮಾನಸಿಕ ಬದಲಾವಣೆ, ನೈರ್ಮಲ್ಯ, ಸ್ಯಾನಿಟರಿ ಪ್ಯಾಡ್ ಮತ್ತು ಕಪ್‌ಗಳ ಬಳಕೆ, ಪ್ಯಾಡ್‌ಗಳ ಸೂಕ್ತ ವಿಲೇವಾರಿಗಳ ಕುರಿತು ಮಾಹಿತಿ ನೀಡಿದರು. ಕಾರ್ಯಾಗಾರದಲ್ಲಿ ಉಡುಪಿ ವಲಯದ ಶಿಕ್ಷಕರು ಭಾಗವಹಿಸಿದ್ದರು. ಶಾಲೆಯ ಮುಖ್ಯ ಶಿಕ್ಷಕಿ ನಿರ್ಮಲಾ ಬಿ ಸ್ವಾಗತಿಸಿದರು. ವಿಜ್ಞಾನ ಶಿಕ್ಷಕಿ ಉಷಾರಾವ್ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!