Home ಸುದ್ಧಿಗಳು ಪ್ರಾದೇಶಿಕ ಹೊಸ ಶಿಕ್ಷಣ ನೀತಿಯಲ್ಲಿ ದೈಹಿಕ ಶಿಕ್ಷಣಕ್ಕೆ ಮಹತ್ವವಿದೆ: ಶ್ರೀಕಾಂತ್

ಹೊಸ ಶಿಕ್ಷಣ ನೀತಿಯಲ್ಲಿ ದೈಹಿಕ ಶಿಕ್ಷಣಕ್ಕೆ ಮಹತ್ವವಿದೆ: ಶ್ರೀಕಾಂತ್

537
0

ಉಡುಪಿ: ರಾಷ್ಟ್ರ‍ೀಯ ಹೊಸ ಶಿಕ್ಷಣ ನೀತಿ ಅನುಷ್ಠಾನ ಮಾಡುತ್ತಿರುವ ಮೊದಲ ರಾಜ್ಯ ಕರ್ನಾಟಕವಾಗಿದೆ. ಹೊಸ ಶಿಕ್ಷಣ ನೀತಿಗೆ ಕೌಶಲ್ಯ ಕಲಿಕೆ ಪ್ರಧಾನ ಸ್ಥಾನ ನೀಡಲಾಗಿದೆ. ಇದರಿಂದ ದೈಹಿಕ ಶಿಕ್ಷಣಕ್ಕೆ ಮಹತ್ವವಿದೆ ಎಂದು ಕಾಲೇಜು ಶಿಕ್ಷಣ
ಇಲಾಖೆಯ ವಿಶೇಷಾಧಿಕಾರಿ ಶ್ರೀಕಾಂತ್ ಹೇಳಿದರು.

ಅವರು ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು ತೆಂಕನಿಡಿಯೂರು, ಉಡುಪಿ ಇದರ ದೈಹಿಕ ಶಿಕ್ಷಣ ವಿಭಾಗಗಳ ಆಶ್ರಯದಲ್ಲಿ ನಡೆದ ’ಹೊಸ ಶಿಕ್ಷಣ ನೀತಿಯಲ್ಲಿ ದೈಹಿಕ ಶಿಕ್ಷಣ’ ಎಂಬ ರಾಷ್ಟ್ರಮಟ್ಟದ ವಿಚಾರ ಸಂಕಿರಣದಲ್ಲಿ ಮಾತನಾಡುತ್ತಿದ್ದರು.

ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವರಾದ ಡಾ. ಕಿಶೋರ್ ಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಹೊಸ ಶಿಕ್ಷಣ ನೀತಿಯಲ್ಲಿ ದೈಹಿಕ ಶಿಕ್ಷಣದ ಪಾತ್ರವನ್ನು ವಿವರಿಸಿದರು. ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಭಾಸ್ಕರ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಸರಕಾರಿ ಪ್ರಥಮ ದರ್ಜೆ ಕಾಲೇಜು ತೆಂಕನಿಡಿಯೂರು ಪ್ರಾಂಶುಪಾಲ ಡಾ. ಗಣನಾಥ ಎಕ್ಕಾರು ಪ್ರಸ್ತಾವನೆಗೈದರು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ರಾಮಚಂದ್ರ ಪಾಟ್ಕರ್ ಸ್ವಾಗತಿಸಿ, ಡಾ. ರೋಶನ್ ಕುಮಾರ್ ಶೆಟ್ಟಿ ಅತಿಥಿಗಳನ್ನು ಪರಿಚಯಿಸಿದರು. ಡಾ. ಹೆಚ್.ಕೆ. ವೆಂಕಟೇಶ್ ವಂದಿಸಿದರು. ಶರ್ಮಿಳಾ ಹಾರಾಡಿ ಕಾರ್ಯಕ್ರಮ ನಿರ್ವಹಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.