Sunday, January 19, 2025
Sunday, January 19, 2025

ವಿಕಲಚೇತನ ಹಕ್ಕುಗಳ ಕಾಯಿದೆ ಅವರ ಹಕ್ಕುಗಳ ರಕ್ಷಣೆಗೆ ಸಹಕಾರಿ- ಎಸ್.ಕೆ ಪದ್ಮನಾಭ

ವಿಕಲಚೇತನ ಹಕ್ಕುಗಳ ಕಾಯಿದೆ ಅವರ ಹಕ್ಕುಗಳ ರಕ್ಷಣೆಗೆ ಸಹಕಾರಿ- ಎಸ್.ಕೆ ಪದ್ಮನಾಭ

Date:

ಕುಂದಾಪುರ: ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಮತ್ತು ಲಯನ್ಸ್ ಕ್ಲಬ್ ವಡೆರಹೋಬಳಿ ಕುಂದಾಪುರ ಹಾಗೂ ನಾರಾಯಣ ವಿಶೇಷ ಮಕ್ಕಳ ಶಾಲೆ ತಲ್ಲೂರು ಇವರುಗಳ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ವಿಶೇಷ ಶಾಲೆಗಳ ಶಿಕ್ಷಕರಿಗಾಗಿ ಒಂದು ದಿನದ ಪುನಶ್ಚೇತನ ತರಬೇತಿ ಕಾರ್ಯಾಗಾರ ನಡೆಯಿತು.

ಡಿಸ್ಯಾಬಿಲಿಟಿ ಎನ್ ಜಿ ಒ ಅಲಯನ್ಸ್ ನ ಮ್ಯಾನೇಜರ್ ರೂಪಲಕ್ಷ್ಮೀ ಕಾರ್ಯಾಗಾರದ ಉದ್ಘಾಟನೆಯನ್ನು ನೆರವೇರಿಸಿದರು. ಮುಖ್ಯ ಅತಿಥಿ ಮತ್ತು ಸಂಪನ್ಮೂಲ ವ್ಯಕ್ತಿಗಳಾಗಿ ಕುಂದಾಪುರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎಸ್.ಕೆ ಪದ್ಮನಾಭರವರು, ವಿಶೇಷ ಶಾಲಾ ಶಿಕ್ಷಕರಿಗೆ ಅಂಗವಿಕಲರ ಹಕ್ಕುಗಳ ಅಧಿನಿಯಮ -2016ರ ಕುರಿತು ಮಾಹಿತಿಯನ್ನು ನೀಡಿದರು. ಈ ಕಾಯಿದೆಯು ಅಂಗವಿಕಲರ ಹಕ್ಕುಗಳ ರಕ್ಷಣೆಯೊಂದಿಗೆ ವಿವಿಧ ಸವಲತ್ತುಗಳನ್ನು ನೀಡಿದೆ. ವಿಶೇಷವಾಗಿ ಈ ಕಾಯಿದೆಯು ವಿಕಲಚೇತನರ ಬದುಕನ್ನು ಉತ್ತಮಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದರು ಮತ್ತು ಕಾಯಿದೆಯಲ್ಲಿರುವ ಪ್ರಮುಖ ಅಂಶಗಳ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಾಗಾರದಲ್ಲಿ ಲಯನ್ಸ್ ಕ್ಲಬ್ ವಡೆರಹೋಬಳಿ ಕುಂದಾಪುರ ಇದರ ಅಧ್ಯಕ್ಷರಾದ ಜಗದೀಶ್ ಶೇರೆಗಾರ್, ಸದಸ್ಯರಾದ ಪ್ರವೀಣ್ ಶೆಟ್ಟಿ ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದಲ್ಲಿ ಸಂಸ್ಥೆಯು ಆಯೋಜಿಸಿದ ಯಶೋಗಾನ ಲೇಖನ ಸ್ಪರ್ಧೆಯಲ್ಲಿ ವಿಜೇತರಾದ ಲೇಖಕರಿಗೆ ನಗದು ಪುರಸ್ಕಾರ ಮತ್ತು ತಲ್ಲೂರು ಪ್ರೌಢ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು.

ತಲ್ಲೂರು ಫ್ಯಾಮಿಲಿ ಟ್ರಸ್ಟಿನ ಮ್ಯಾನೇಜಿಂಗ್ ಟ್ರಸ್ಟಿ ಸುರೇಶ್ ತಲ್ಲೂರು ಸ್ವಾಗತಸಿ, ಟ್ರಸ್ಟಿ ವಸಂತ ಶ್ಯಾನುಬೋಗ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಅಡಳಿತಾಧಿಕಾರಿ ಚಂದ್ರಶೇಖರ ವಂದಿಸಿದರು. ಸಹ ಶಿಕ್ಷಕಿ ದೀಪಾ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಾಗಾರದಲ್ಲಿ ವಿವಿಧ ವಿಷಯಗಳ ಬಗ್ಗೆ ಸಂಪನ್ಮೂಲ ವ್ಯಕ್ತಿಗಳು ಮಾಹಿತಿ ನೀಡಿದರ, ಗುಂಪು ಚರ್ಚೆ ನಡೆಯಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!