ವಂಡ್ಸೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ವಂಡ್ಸೆ ವಲಯ ಹಾಗೂ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಮತ್ತು ಭಜನಾ ಪರಿಷತ್ ವಂಡ್ಸೆ ವಲಯದ ಜಂಟಿ ಆಶ್ರಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಧಾರ್ಮಿಕ ಕಾರ್ಯಕ್ರಮ ಮತ್ತು ಮಹಿಳಾ ಭಜನಾ ಮಂಡಳಿ ಉದ್ಘಾಟನೆ ಕಾರ್ಯಕ್ರಮ ವಂಡ್ಸೆ ಸಭಾಭವನದಲ್ಲಿ ನಡೆಯಿತು.
ಮಹಾಲಿಂಗೇಶ್ವರ ದೇವಸ್ಥಾನ ಬಸ್ರೂರು ಆಡಳಿತ ಧರ್ಮದರ್ಶಿಗಳು ಹಾಗೂ ಜನಜಾಗೃತಿ ವೇದಿಕೆ ಬೈಂದೂರು ತಾಲೂಕು ಗೌರವಧ್ಯಕ್ಷರಾದ ಅಪ್ಪಣ್ಣ ಹೆಗ್ಡೆಯವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಉಡುಪಿ ಜಿಲ್ಲೆಯ ಹಿರಿಯ ನಿರ್ದೇಶಕರಾದ ಗಣೇಶ್ ಬಿ ಯೋಜನೆಯ ಕಾರ್ಯಕ್ರಮಗಳು ಉಡುಪಿ ಜಿಲ್ಲೆಯಲ್ಲಿ ಅತ್ಯುತ್ತಮವಾಗಿ ಪ್ರಗತಿಬಂಧು ಸ್ವಸಹಾಯ ಸಂಘದವರು ಅಚ್ಚುಕಟ್ಟಾಗಿ ನಿರ್ವಹಣೆ ಮಾಡುತ್ತಿದ್ದಾರೆ. ಪ್ರತಿಯೊಬ್ಬರ ಮನೆಮನೆಯಲ್ಲಿ ಮನಸ್ಸಿನಲ್ಲಿ ನೈತಿಕ ಶಕ್ತಿ ಬರಬೇಕು. ಭಜನೆಯಿಂದ ಮನೆಯಲ್ಲಿ ನೆಮ್ಮದಿಯ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದರು.
ತಿರುಮಲ ಲಕ್ಷ್ಮೀ ವೆಂಕಟರಮಣ ದೇವಸ್ಥಾನ ವಂಡ್ಸೆ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಶ್ರೀಧರ್ ಶೆಟ್ಟಿ, ಗ್ರಾಮ ಪಂಚಾಯತ್ ವಂಡ್ಸೆ ಅಧ್ಯಕ್ಷ ಉದಯಕುಮಾರ್ ಶೆಟ್ಟಿ, ತಿರುಮಲ ಲಕ್ಷ್ಮೀ ವೆಂಕಟರಮಣ ದೇವಸ್ಥಾನ ವಂಡ್ಸೆ ಆಡಳಿತ ಮೊಕ್ತೇಸರ ವಿ.ಕೆ ಶಿವರಾಮ್ ಶೆಟ್ಟಿ, ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ವಂಡ್ಸೆ ವಲಯ ಜನಜಾಗೃತಿ ವೇದಿಕೆಯ ಅಧ್ಯಕ್ಷ ಸತೀಶ ಎಂ ನಾಯಕ್, ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ವಂಡ್ಸೆ ವಲಯ ಅಧ್ಯಕ್ಷೆ ವೀಣಾ ಆಚಾರ್ಯ, ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವಂಡ್ಸೆ ವಲಯ ಸಂಯೋಜಕ ಸದಾನಂದ ಆಚಾರ್ಯ, ಒಕ್ಕೂಟದ ಅಧ್ಯಕ್ಷರಾದ ಗಿರೀಶ್ ನಾಯಕ್, ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು.
ತಾಲೂಕಿನ ಯೋಜನಾಧಿಕಾರಿಗಳಾದ ಶಶಿರೇಖಾ ಪಿ ಸ್ವಾಗತಿಸಿ, ವಲಯ ಮೇಲ್ವಿಚಾರಕಿ ಪಾರ್ವತಿ ವಂದಿಸಿದರು. ತಾಲೂಕಿನ ಜ್ಞಾನವಿಕಾಸ ಸಮನ್ವಯಾಧಿಕಾರಿ ಗೀತಾ ಕಾರ್ಯಕ್ರಮ ನಿರೂಪಿಸಿದರು.