Thursday, September 19, 2024
Thursday, September 19, 2024

ಜಮಾಅತೆ ಇಸ್ಲಾಮಿ ಹಿಂದ್ ಹೂಡೆ: ಎರಡು ಕುಟುಂಬಗಳಿಗೆ ಮನೆ ಹಸ್ತಾಂತರ

ಜಮಾಅತೆ ಇಸ್ಲಾಮಿ ಹಿಂದ್ ಹೂಡೆ: ಎರಡು ಕುಟುಂಬಗಳಿಗೆ ಮನೆ ಹಸ್ತಾಂತರ

Date:

ಜಮಾಅತೆ ಇಸ್ಲಾಮಿ ಹಿಂದ್ ಹೂಡೆ ವತಿಯಿಂದ ಸೂರಿಲ್ಲದವರಿಗೆ ಸೂರು ಒದಗಿಸುವ ಕಾರ್ಯಕ್ರಮದಡಿಯಲ್ಲಿ ದಾನಿಗಳ ಸಹಾಯದಿಂದ ಅರ್ಥಿಕವಾಗಿ ಹಿಂದುಳಿದ ಎರಡು ಕುಟುಂಬಗಳಿಗೆ ಮನೆ ಹಸ್ತಾಂತರ ಮಾಡಲಾಯಿತು. ಮನೆ ಮಾಲಿಕರಾದ ಅನ್ವರ್ ಸಾದೀಕ್ ಮತ್ತು ದೇವದಾಸ ಖಾರ್ವಿಯವರಿಗೆ ಮನೆಯ ಕೀಲಿಕೈ ನೀಡುವ ಮುಖಾಂತರ ಮನೆ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಜಮಾಅತೆ ಇಸ್ಲಾಮಿ ಹಿಂದ್ ಉಡುಪಿ ಘಟಕದ ಅಧ್ಯಕ್ಷರಾದ ನಿಸಾರ್ ಉಪ್ಪಿನಕೋಟೆ, ಅನ್ವರ್ ಸಾದೀಕ್ ಅವರಿಗೆ ಕೀಲಿಕೈ ಕೊಟ್ಟು ಶುಭ ಹಾರೈಸಿದರು. ದೇವದಾಸ ಖಾರ್ವಿಯವರಿಗೆ ಪ್ರೊ‌. ಅಬ್ದುಲ್ ಅಝೀಜ್ ಕೀಲಿಗೈ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಜಮಾಅತೆ ಇಸ್ಲಾಮಿ ಹಿಂದ್ ಹೂಡೆ ಘಟಕದ ಅಧ್ಯಕ್ಷರಾದ ಅಬ್ದುಲ್ ಕಾದೀರ್ ಮೊಯ್ದಿನ್, ತೋನ್ಸೆ ಪಂಚಾಯತ್ ಅಧ್ಯಕ್ಷರಾದ ಲತಾ, ಗ್ರಾ.ಪಂ ಸದಸ್ಯರಾದ ಇದ್ರಿಸ್ ಹೂಡೆ, ಅರುಣಾ ಫರ್ನಾಂಡೀಸ್, ಯಶೋದಾ, ಡಾ.ಫಹೀಮ್, ಜಮೀಲಾ, ಮಮ್ತಾಝ್, ಕುಸುಮ, ವಿಜಯ್, ಮಾಜಿ ಪಂಚಾಯತ್ ಅಧ್ಯಕ್ಷೆ ಫೌಝಿಯಾ ಸಾದೀಕ್, ಮಾಜಿ ಪಂಚಾಯತ್ ಸದಸ್ಯರಾದ ಉಸ್ತಾದ್ ಸಾದೀಕ್ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬಾಂಗ್ಲಾ ಟೆಸ್ಟ್ ಸರಣಿ: ಅಶ್ವಿನ್ ಅಜೇಯ ಶತಕ

ಚೆನ್ನೈ, ಸೆ.19: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಭಾರತ...

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಸೆ.19: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ...

ತಾತ್ಕಾಲಿಕ ಸುಡುಮದ್ದು ಮಾರಾಟ ಪರವಾನಿಗೆ ಪಡೆಯಲು ಅರ್ಜಿ ಆಹ್ವಾನ

ಉಡುಪಿ, ಸೆ.19: ದೀಪಾವಳಿ ಹಬ್ಬದ ಸಂದರ್ಭದಲ್ಲಿ (ಅಕ್ಟೋಬರ್ 30 ರಿಂದ ನವೆಂಬರ್...

ಪವರ್ ಲಿಫ್ಟಿಂಗ್: ವೈಷ್ಣವಿ ಖಾರ್ವಿಗೆ ಬೆಳ್ಳಿ ಪದಕ

ಉಡುಪಿ, ಸೆ.19: ರಾ ಫಿಟ್ನೆಸ್ ಸಾಲಿಗ್ರಾಮ ಇವರ ವತಿಯಿಂದ ಸಾಲಿಗ್ರಾಮದ ಮೊಗವೀರ...
error: Content is protected !!