Monday, January 20, 2025
Monday, January 20, 2025

ಸಂಶೋಧನಾ ವಿನ್ಯಾಸ ಗುಣಮಟ್ಟದ ಸಂಶೋಧನೆಗೆ ಮಾರ್ಗದರ್ಶಿ: ಡಾ. ಲೋಕೇಶ

ಸಂಶೋಧನಾ ವಿನ್ಯಾಸ ಗುಣಮಟ್ಟದ ಸಂಶೋಧನೆಗೆ ಮಾರ್ಗದರ್ಶಿ: ಡಾ. ಲೋಕೇಶ

Date:

ಉಡುಪಿ: ಸಂಶೋಧನಾ ವಿನ್ಯಾಸ ಗುಣಮಟ್ಟದ ಸಂಶೋಧನೆಗೆ ಮಾರ್ಗದರ್ಶಿಯಾಗಿದೆ. ಶೈಕ್ಷಣಿಕ ಸಂಶೋಧನೆಯಲ್ಲಿ ಸಂಶೋಧಕನಿಗೆ ಸಂಶೋಧನಾ ವಿನ್ಯಾಸವನ್ನು ಸೂಕ್ತ ರೀತಿಯಲ್ಲಿ ರಚಿಸುವ ನೈಪುಣ್ಯತೆ ಇದ್ದಲ್ಲಿ ಗುಣಮಟ್ಟದ ಶೈಕ್ಷಣಿಕ ಸಂಶೋಧನೆ ಹೊರಬರಲು ಸಾಧ್ಯವಾಗುತ್ತದೆ. ಸಂಶೋಧಕನಲ್ಲಿ ಉದ್ದೇಶದ ಸ್ಪಷ್ಟತೆ ಇದ್ದಲ್ಲಿ ಹಾಗೂ ಸಂಶೋಧನಾ ಪ್ರಕ್ರಿಯೆಯ ಸ್ಪಷ್ಟತೆಯಿಂದ ಕ್ಷೇತ್ರಕಾರ್ಯದ ಮೂಲಕ ವಿವಿಧ ಅಂಶಗಳನ್ನು ಬೆಳಕಿಗೆ ತರಬಹುದಾಗಿದೆ. ಆ ಮೂಲಕ ಸಂಶೋಧನೆಯ ಆಶಯಗಳನ್ನು ಈಡೇರಿಸಲು ಹಾಗೂ ಸಂಶೋಧನೆಯಿಂದ ಹೊರಬಂದ ವಿಚಾರವನ್ನು ನಿರ್ಭೀತಿಯಿಂದ ಪ್ರಸ್ತುತಪಡಿಸಲು ಸಾಧ್ಯವಾಗುತ್ತದೆ ಎಂದು ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆಯ ವಾಣಿಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕ ಡಾ. ಲೋಕೇಶ ಹೇಳಿದರು.

ಅವರು ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಉಡುಪಿ ಇಲ್ಲಿನ ವಾಣಿಜ್ಯಶಾಸ್ತ್ರ ವಿಭಾಗ ಮತ್ತು ಐ.ಕ್ಯೂ.ಎ.ಸಿ. ವತಿಯಿಂದ ನಡೆದ ‘ಸಂಶೋಧನೆಯಲ್ಲಿ ಉದ್ದೇಶಗಳ ಗುರುತಿಸುವಿಕೆ ಹಾಗೂ ಸಂಶೋಧನಾ ವಿನ್ಯಾಸದ ಅಭಿವೃದ್ಧಿ’ ಎಂಬ ಅಂತರ್ಜಾಲ ರಾಷ್ಟ್ರ‍ೀಯ ವಿಚಾರ ಸಂಕಿರಣದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡುತ್ತಿದ್ದರು.

ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ.ಗಣನಾಥ ಶೆಟ್ಟಿ ಎಕ್ಕಾರು ಅವರು, ಸಂಶೋಧಕನಿಗೆ ಬದ್ಧತೆ ಮುಖ್ಯ. ಯೋಜಿತ ಕ್ರಮದಲ್ಲಿ ಸಂಶೋಧನೆ ಕೈಗೆತ್ತಿಕೊಂಡಾಗ ಉತ್ತಮ ಫಲಿತಾಂಶ ಸಿಗಲು ಸಾಧ್ಯ ಎಂದರು.

ಐ.ಕ್ಯೂ.ಎ.ಸಿ. ಸಂಚಾಲಕರಾದ ಡಾ. ಸುರೇಶ್ ರೈ ಕೆ. ಉಪಸ್ಥಿತರಿದ್ದರು. ವಾಣಿಜ್ಯಶಾಸ್ತ್ರ ವಿಭಾಗ ಮುಖ್ಯಸ್ಥ ಪ್ರೊ. ತಿಮ್ಮಣ್ಣ ಜಿ. ಭಟ್ ಸ್ವಾಗತಿಸಿ, ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಪ್ರೊ. ಮೇವಿ ಮಿರಾಂದ ವಂದಿಸಿದರು. ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಉದಯ ಶೆಟ್ಟಿ ಕೆ ವಿಚಾರ ಸಂಕಿರಣವನ್ನು ಸಂಯೋಜಿಸಿ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!