Saturday, August 29, 2026
Saturday, August 29, 2026

ಜಿಲ್ಲಾ ಗ್ರಂಥಾಲಯಕ್ಕೆ ಬನ್ನಂಜೆ ಗೋವಿಂದಾಚಾರ್ಯರ ಹೆಸರು: ಸರ್ಕಾರಕ್ಕೆ ಶಾಸಕ ರಘುಪತಿ ಭಟ್ ಮನವಿ

ಜಿಲ್ಲಾ ಗ್ರಂಥಾಲಯಕ್ಕೆ ಬನ್ನಂಜೆ ಗೋವಿಂದಾಚಾರ್ಯರ ಹೆಸರು: ಸರ್ಕಾರಕ್ಕೆ ಶಾಸಕ ರಘುಪತಿ ಭಟ್ ಮನವಿ

Date:

ಉಡುಪಿ: ದೇಶದ ಪ್ರಮುಖ ವಿದ್ವಾಂಸರಲ್ಲಿ ಒಬ್ಬರಾದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಉಡುಪಿಯ ವಿದ್ಯಾವಾಚಸ್ಪತಿ ಗೋವಿಂದಾಚಾರ್ಯರು ತಮ್ಮ ಪ್ರವಚನಗಳಿಂದಲೇ ಮನೆ ಮಾತಾಗಿ ಬನ್ನಂಜೆ ಗೋವಿಂದಾಚಾರ್ಯ ಎಂದೇ ಗುರುತಿಸಿಕೊಂಡಿದ್ದು, ಮಾಧ್ವ ತತ್ವದಲ್ಲಿ ಅಮೋಘ ಪಾಂಡಿತ್ಯ ಹೊಂದಿದ್ದರು.

ಕನ್ನಡ ಹಾಗೂ ಸಂಸ್ಕೃತದಲ್ಲೂ ಪಾಂಡಿತ್ಯ ಹೊಂದಿದ್ದ ಇವರು ಹಲವು ಕೃತಿಗಳನ್ನೂ ರಚಿಸಿದ್ದಾರೆ. ದೇಶ ವಿದೇಶಗಳಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿರುವ ಬನ್ನಂಜೆ ಗೋವಿಂದಾಚಾರ್ಯರು ಸಾಹಿತಿ, ವಿದ್ವಾಂಸಕ, ಪತ್ರಕರ್ತ, ಸಂಶೋಧಕ, ಅನುವಾದಕ, ಭಾಷಾಂತರಕಾರ, ಭಾಷ್ಯಾಕಾರ, ಕವಿ, ಪ್ರವಚನಕಾರ, ಉಪನ್ಯಾಸಕ ಹೀಗೆ ಬಹುವಿಧವಾಗಿ ಅಮೂಲ್ಯ ವಾಙ್ಮಯ ಕೊಡುಗೆ ಧಾರೆಯೆರೆದು ಉಡುಪಿಗೆ ಕೀರ್ತಿ ತಂದ ಇವರ ಹೆಸರು ಉಡುಪಿ ಜಿಲ್ಲಾ ಗ್ರಂಥಾಲಯಕ್ಕೆ ಇಡುವುದು ಸೂಕ್ತ ಎಂದು ಶಾಸಕ ರಘುಪತಿ ಭಟ್ ಅವರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಅಧಿಕಾರಿಗಳೊಂದಿಗೆ ಶುಕ್ರವಾರ ಜಿಲ್ಲಾ ಗ್ರಂಥಾಲಯಕ್ಕೆ ಭೇಟಿ ನೀಡಿ ಚರ್ಚಿಸಿದ ಶಾಸಕರು ಗ್ರಂಥಾಲಯದ ಒಂದು ಮಹಡಿಯಲ್ಲಿ ಬನ್ನಂಜೆ ಗೋವಿಂದಾಚಾರ್ಯರ ಗ್ರಂಥಗಳನ್ನು, ಕೃತಿಗಳನ್ನು ಸಂಗ್ರಹಿಸಿ ಇಡುವುದು ಹಾಗೂ ಅವರ ಪ್ರವಚನಗಳ ಆಡಿಯೋ ವಿಷನ್ ಸಂಗ್ರಹಿಸಿ ಇಡುವ ಬಗ್ಗೆ ಸೂಚಿಸಿದರು.

ಸ್ಥಳೀಯ ನಗರಸಭಾ ಸದಸ್ಯರಾದ ರಶ್ಮಿ ಚಿತ್ತರಂಜನ್ ಭಟ್, ಉಡುಪಿ ನಗರಸಭೆಯ ಪೌರಾಯುಕ್ತ ಉದಯ್ ಶೆಟ್ಟಿ, ನಿರ್ಮಿತಿ ಕೇಂದ್ರದ ಅರುಣ್, ಜಿಲ್ಲಾ ಮುಖ್ಯ ಗ್ರಂಥಾಲಯಾಧಿಕಾರಿ ನಳಿನಿ ಹಾಗೂ ಸಾಮಾಜಿಕ ಕಾರ್ಯಕರ್ತ ವಾಸುದೇವ್ ಭಟ್ ಪೆರಂಪಳ್ಳಿ, ಬನ್ನಂಜೆ ಗೋವಿಂದಾಚಾರ್ಯರ ಪುತ್ರ ವಿನಯ ಭೂಷಣ ಆಚಾರ್ಯ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವರ್ತಮಾನದ ಸಂಕಟಗಳನ್ನು ಮೀರುವ ಶಕ್ತಿ ಸಾಹಿತ್ಯಕ್ಕಿದೆ: ಡಾ. ಸಂತೋಷ್ ಆಳ್ವ

ವಾಮದಪದವು. ಆ.28: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ...

ಗಂಗೊಳ್ಳಿ: ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಗಂಗೊಳ್ಳಿ, ಆ.28: ಶ್ರೀ ನಾರಾಯಣ ಗುರು ಜನ ಸೇವಾ ಬಳಗ ಗಂಗೊಳ್ಳಿ...

ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ

ಉಡುಪಿ, ಆ.28: ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ ಶುಕ್ರವಾರ ಟ್ರಸ್ಟಿನ ಗೌರವಾಧ್ಯಕ್ಷರು,...

ಕಾರ್ಕಳ: ಮಾಳ ಕೋಟೆ ಬಸದಿಯಲ್ಲಿ 5 ಅಪರೂಪದ ಜಿನ ಶಾಸನಗಳ ಪತ್ತೆ; ಸಂಶೋಧಕ ಶ್ರುತೇಶ್ ಆಚಾರ್ಯರಿಂದ ಅಧ್ಯಯನ

ಕಾರ್ಕಳ, ಆ.27: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಸ್ವಸ್ತಿ ಶ್ರೀ ಲಲಿತಕೀರ್ತಿ...
error: Content is protected !!