Sunday, August 30, 2026
Sunday, August 30, 2026

ಸಂದಿಗ್ಧ ಪರಿಸ್ಥಿತಿಯಲ್ಲಿ ಆಶಾ ಕಾರ್ಯಕರ್ತರ ಶ್ಲಾಘನೀಯ ಕಾರ್ಯ: ರಮೇಶ್ ಕಾಂಚನ್

ಸಂದಿಗ್ಧ ಪರಿಸ್ಥಿತಿಯಲ್ಲಿ ಆಶಾ ಕಾರ್ಯಕರ್ತರ ಶ್ಲಾಘನೀಯ ಕಾರ್ಯ: ರಮೇಶ್ ಕಾಂಚನ್

Date:

ಬನ್ನಂಜೆಯ ಉಡುಪಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಇಲ್ಲಿನ ಸಿಬ್ಬಂದಿಗಳಿಗೆ ಹಾಗೂ ಆಶಾ ಕಾರ್ಯಕರ್ತರಿಗೆ ನಗರಸಭಾ ಸದಸ್ಯ ಮತ್ತು ಪ್ರತಿಪಕ್ಷ ನಾಯಕರಾದ ರಮೇಶ್ ಕಾಂಚನ್ ಹಾಗೂ ಉದ್ಯಮಿಗಳಾದ ಮುರಳಿ ಶೆಟ್ಟಿ, ಗಣೇಶ್ ದೇವಾಡಿಗ, ಗಣೇಶ್ ನೆರ್ಗಿ, ರಮೇಶ್ ಪಾಲ್, ರಿಕಿತ್‌ ಇವರ ಸಹಕಾರದೊಂದಿಗೆ ಫೇಸ್ ಶೀಲ್ಡ್, ಮಾಸ್ಕ್‌ ಮತ್ತು ದಿನಸಿ ಕಿಟ್‌ಗಳನ್ನು ವಿತರಿಸಲಾಯಿತು.

ರಮೇಶ್ ಕಾಂಚನ್ ಅವರು ಮಾತನಾಡಿ, ಇಂಥಹ ಸಂಕಷ್ಟದ ಕಾಲದಲ್ಲಿ ಕೊರೋನಾ ವಾರಿಯರ್ಸ್ ಆಗಿ ಕೆಲಸ ಮಾಡುವ ಆಶಾ ಕಾರ್ಯಕರ್ತರ ಸೇವೆ ಶ್ಲಾಘನೀಯ. ತಮ್ಮ ಜೀವದ ಹಂಗು ತೊರೆದು ಕೊರೋನಾ ಮಹಾಮಾರಿಯ ಬಗ್ಗೆ ಜನಜಾಗೃತಿ ಮೂಡಿಸುವ ಜತೆಗೆ ಸೋಂಕಿತರಲ್ಲಿ ಧೈರ್ಯ ತುಂಬುತ್ತಿರುವ ತಮ್ಮ ಸೇವೆ ಅಭಿನಂದನೀಯ. ಇಂಥಹ ಕಷ್ಟದ ಸಮಯದಲ್ಲಿ ಕೆಲಸ ಮಾಡುವ ಆಶಾ ಕಾರ್ಯಕರ್ತರಿಗೆ ಕ್ಲಪ್ತ ಸಮಯದಲ್ಲಿ ವೇತನವನ್ನು ನೀಡಬೇಕೆಂದು ಸರ್ಕಾರವನ್ನು ಆಗ್ರಹಿಸಿದರು.

ಕೇಂದ್ರದ ವೈದ್ಯಾಧಿಕಾರಿ ಡಾ ಹೇಮಂತ್, ಲ್ಯಾಬ್ ಟೆಕ್ನಿಷಿಯನ್ ರಮೇಶ್ ನಾಯ್ಕ್, ಕಛೇರಿ ಸಹಾಯಕಿ ಪ್ರಮೀಳಾ, ರಘುರಾಮ್ ಭಟ್, ಸಂಜಯ್ ಆಚಾರ್ಯ, ಆಶಾ ಸುಗಮಕಾರರಾದ ಹಿಮಾ ವರ್ಗಿಸ್, ಆಶಾ ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವರ್ತಮಾನದ ಸಂಕಟಗಳನ್ನು ಮೀರುವ ಶಕ್ತಿ ಸಾಹಿತ್ಯಕ್ಕಿದೆ: ಡಾ. ಸಂತೋಷ್ ಆಳ್ವ

ವಾಮದಪದವು. ಆ.28: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ...

ಗಂಗೊಳ್ಳಿ: ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಗಂಗೊಳ್ಳಿ, ಆ.28: ಶ್ರೀ ನಾರಾಯಣ ಗುರು ಜನ ಸೇವಾ ಬಳಗ ಗಂಗೊಳ್ಳಿ...

ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ

ಉಡುಪಿ, ಆ.28: ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ ಶುಕ್ರವಾರ ಟ್ರಸ್ಟಿನ ಗೌರವಾಧ್ಯಕ್ಷರು,...

ಕಾರ್ಕಳ: ಮಾಳ ಕೋಟೆ ಬಸದಿಯಲ್ಲಿ 5 ಅಪರೂಪದ ಜಿನ ಶಾಸನಗಳ ಪತ್ತೆ; ಸಂಶೋಧಕ ಶ್ರುತೇಶ್ ಆಚಾರ್ಯರಿಂದ ಅಧ್ಯಯನ

ಕಾರ್ಕಳ, ಆ.27: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಸ್ವಸ್ತಿ ಶ್ರೀ ಲಲಿತಕೀರ್ತಿ...
error: Content is protected !!