Sunday, November 24, 2024
Sunday, November 24, 2024

ಪಿ.ಎಂ ವಿಶ್ವಕರ್ಮ ಯೋಜನೆ: ನೋಂದಣಿಗೆ ಸೂಚನೆ

ಪಿ.ಎಂ ವಿಶ್ವಕರ್ಮ ಯೋಜನೆ: ನೋಂದಣಿಗೆ ಸೂಚನೆ

Date:

ಉಡುಪಿ, ಜೂ.21: ಕೇಂದ್ರ ಸರ್ಕಾರವು ಪಿ.ಎಂ ವಿಶ್ವಕರ್ಮ ಯೋಜನೆಯಡಿ ಬಡಗಿತನ / ಮರಗೆಲಸ, ದೋಣಿ ತಯಾರಿಕೆ, ಶಸ್ತ್ರಾಸ್ತ್ರ ತಯಾರಿಕೆ, ಕಮ್ಮಾರಿಕೆ, ಸುತ್ತಿಗೆ ಮತ್ತು ಉಪಕರಣಗಳನ್ನು ತಯಾರಿಸುವವರು, ಬೀಗ ತಯಾರಕರು, ಆಭರಣ ತಯಾರಿಕೆ,
ಕುಂಬಾರಿಕೆ, ಶಿಲ್ಪಿ, ಪಾದರಕ್ಷೆ ತಯಾರಿಕೆ /ಚರ್ಮಗಾರಿಕೆ, ಗಾರೆ ಕೆಲಸದವರು / ಕಲ್ಲು ಕುಟ್ಟಿಗ, ಬುಟ್ಟಿ / ಚಾಪೆ / ಕಸಪೊರಕೆ ತಯಾರಿಕರು / ತೆಂಗಿನನಾರಿನ ಕೆಲಸಗಾರರು, ಗೊಂಬೆ / ಆಟಿಕೆ ತಯಾರಕರು, ಕ್ಷೌರಿಕ, ಹೂ-ಮಾಲೆ ತಯಾರಕರು, ಅಗಸರು, ಟೈಲರ್, ಮೀನಿನ ಬಲೆಗಳನ್ನು ನೇಯ್ಗೆ ಮಾಡುವವರು ಮುಂತಾದ ವೃತ್ತಿಯಲ್ಲಿ ತೊಡಗಿರುವ ಕುಶಲಕರ್ಮಿಗಳಿಗೆ ವಿವಿಧ ಸೌಲಭ್ಯಗಳನ್ನು ಕಲ್ಪಿಸಿದ್ದು, ಜಿಲ್ಲೆಯಲ್ಲಿ ಸುಮಾರು 13,500 ವಿವಿಧ ಕುಶಲಕರ್ಮಿಗಳು ಈ ಯೋಜನೆಯ ಸೌಲಭ್ಯ ಪಡೆಯಲು ನೋಂದಣಿ ಮಾಡಿಕೊಂಡಿದ್ದು, ಈವರೆಗೂ ನೋಂದಣಿ ಮಾಡದೇ ಇರುವ ಕುಶಲಕರ್ಮಿಗಳೂ ಸಹಾ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಮೇಲ್ಕಂಡ ವೃತ್ತಿಗಳಲ್ಲಿ ಯಾವುದಾದರೂ ಒಂದರಲ್ಲಿ ಸ್ವಯಂ ಉದ್ಯೋಗಿಯಾಗಿರುವ, 18 ವರ್ಷ ಅಥವಾ ಅದಕ್ಕಿಂತ ಮೇಲ್ಪಟ್ಟವರಾಗಿರುವವರು ಕಳೆದ 5 ವರ್ಷಗಳಲ್ಲಿ ಸ್ವಯಂ ಉದ್ಯೋಗ / ವ್ಯಾಪಾರ ಅಭಿವೃದ್ಧಿಗಾಗಿ ಕ್ರೆಡಿಟ್ ಆಧಾರಿತ ಯೋಜನೆಗಳ ಅಡಿಯಲ್ಲಿ ಸಾಲವನ್ನು ಪಡೆದಿರಬಾರದು. ಆದಾಗ್ಯೂ ತಮ್ಮ ಸಾಲವನ್ನು ಮರುಪಾವತಿ ಮಾಡಿದ ಮುದ್ರಾ ಮತ್ತು ಪಿ.ಎಂ ಸ್ವನಿಧಿಯ ಫಲಾನುಭವಿಗಳು ಪಿ.ಎಂ ವಿಶ್ವಕರ್ಮ ಯೋಜನೆಯಡಿಯಲ್ಲಿ ನೋಂದಣಿಗೆ ಅರ್ಹರಾಗಿರುತ್ತಾರೆ. ಒಂದು ಕುಟುಂಬದಲ್ಲಿ ಒಬ್ಬ ಸದಸ್ಯರು ಮಾತ್ರ ನೋಂದಣಿಗೆ ಅರ್ಹರಾಗಿದ್ದು, ಕುಟುಂಬದಲ್ಲಿ ಯಾವುದೇ ಸದಸ್ಯರು ಸರ್ಕಾರಿ ಕೆಲಸದಲ್ಲಿರಬಾರದು.

ಕುಶಲಕರ್ಮಿಗಳು ಸಂಬಂಧಿಸಿದ ಗ್ರಾಮ ಪಂಚಾಯತ್ / ನಗರಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ಸ್ಥಾಪಿತವಾಗಿರುವ ಸಾಮಾನ್ಯ ಸೌಲಭ್ಯ ಕೇಂದ್ರದಲ್ಲಿ ಮತ್ತು ಆಧಾರ ಆಧಾರಿತ ಬಯೋಮೆಟ್ರಿಕ್ ದೃಢೀಕೃತ ಪಿ.ಎಂ ವಿಶ್ವಕರ್ಮ ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಆಧಾರ್ ಕಾರ್ಡ್, ಮೊಬೈಲ್ ಸಂಖ್ಯೆ (ಆಧಾರ್ ಲಿಂಕ್ಡ್), ಬ್ಯಾಂಕ್ ಖಾತೆ ವಿವರಗಳು, ರೇಷನ್ ಕಾರ್ಡ್ಗಳನ್ನು ಹಾಜರುಪಡಿಸುವುದು ಕಡ್ಡಾಯವಾಗಿರುತ್ತದೆ. ನೊಂದಣಿಗೆ ಯಾವುದೇ ಶುಲ್ಕಗಳು ಇರುವುದಿಲ್ಲ. ನೋಂದಣಿಗೆ ಸಂಬಂಧಿಸಿದಂತೆ ಸಾಮಾನ್ಯ ಸೇವಾ ಕೇಂದ್ರಗಳ ಜಿಲ್ಲಾ ವ್ಯವಸ್ಥಾಪಕ ಗೋವರ್ಧನ ಎಚ್. ಮೊ.ಸಂಖ್ಯೆ: 7217623877, 8217840512 ಹಾಗೂ ಜಿಲ್ಲಾ ನೋಡಲ್ ಅಧಿಕಾರಿ ಪ್ರಸನ್ನಕುಮಾರ ಮೊಬೈಲ್ ಸಂಖ್ಯೆ: 7019032011 ಅನ್ನು ಸಂಪರ್ಕಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೈಗಾರಿಕಾ ಕೇಂದ್ರ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಶಿವಳ್ಳಿ ಕೈಗಾರಿಕಾ ಕೇಂದ್ರ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 0820-2575650 ಅಥವಾ ಉಡುಪಿ, ಕುಂದಾಪುರ, ಬ್ರಹ್ಮಾವರ ಹಾಗೂ ಬೈಂದೂರು ತಾಲೂಕುಗಳಿಗೆ ಸಂಬಂಧಿಸಿದಂತೆ ಉಪ ನಿರ್ದೇಶಕ ಸೀತಾರಾಮ ಶೆಟ್ಟಿ ಮೊ.ಸಂಖ್ಯೆ: 9448623952 ಹಾಗೂ ಕಾರ್ಕಳ, ಹೆಬ್ರಿ ಹಾಗೂ ಕಾಪು ತಾಲೂಕುಗಳಿಗೆ ಸಂಬಂಧಿಸಿದಂತೆ ಸಹಾಯಕ ನಿರ್ದೇಶಕ ಜಿ. ವಾಮನ ನಾಯ್ಕ ಮೊ.ಸಂಖ್ಯೆ: 9448409488 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನ.28: ನರೇಂದ್ರ ಎಸ್ ಗಂಗೊಳ್ಳಿ ಅವರ ‘ನಿಭೃತ’ ಪತ್ತೇದಾರಿ ಕಾದಂಬರಿ ಬಿಡುಗಡೆ

ಉಡುಪಿ, ನ.23: ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಮತ್ತು...

ವಯನಾಡ್: ಪ್ರಿಯಾಂಕಾ ಗಾಂಧಿಗೆ ಐತಿಹಾಸಿಕ ಗೆಲುವು

ವಯನಾಡ್, ನ.23: ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ನಾಯಕಿ...

ಉಪಚುನಾವಣೆಯಲ್ಲಿ ಕಾಂಗ್ರೆಸ್ ಕ್ಲೀನ್ ಸ್ವೀಪ್- ನಮ್ಮ ಕಾರ್ಯಕರ್ತರ ಅವಿರತ ಶ್ರಮದ ಗೆಲುವು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ನ.23: ಕರ್ನಾಟಕದಲ್ಲಿ ನಡೆದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್...

ಮಹಾರಾಷ್ಟ್ರದ ಗೆಲುವು ಅಭಿವೃದ್ಧಿ ಮತ್ತು ಉತ್ತಮ ಆಡಳಿತದ ಗೆಲುವು: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ನ.23: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಗೆಲುವು ಉತ್ತಮ...
error: Content is protected !!