ಉಡುಪಿ: ಜಿಲ್ಲೆಯಲ್ಲಿ ಸಂಭ್ರಮದಿಂದ ಗಣರಾಜ್ಯೋತ್ಸವ ಆಚರಿಸಲಾಯಿತು.
ಅಜ್ಜರಕಾಡು ಹುತಾತ್ಮ ಸ್ಮಾರಕ: ಅಜ್ಜರಕಾಡು ಹುತಾತ್ಮ ಸೈನಿಕರ ಸ್ಮಾರಕದ ಬಳಿ ಮೀನುಗಾರಿಕೆ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದರು. ಶಾಸಕ ಕೆ. ರಘುಪತಿ ಭಟ್, ಕರಾವಳಿ ಅಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗಡೆ, ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ., ಜಿ.ಪಂ. ಸಿಇಓ ಡಾ. ನವೀನ್ ಭಟ್, ಎಸ್ಪಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಉಡುಪಿ ತಹಸೀಲ್ದಾರ್ ಪ್ರದೀಪ್ ಕುರ್ಡೆಕರ್, ಪೌರಾಯುಕ್ತ ಉದಯ ಶೆಟ್ಟಿ, ಜಿಲ್ಲೆಯ ಮಾಜಿ ಸೈನಿಕರು ಮತ್ತಿತರರು ಉಪಸ್ಥಿತರಿದ್ದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ: ವಾರ್ತಾ ಸಹಾಯಕರಾದ ಬಿ. ಶಿವಕುಮಾರ್ ಧ್ವಜಾರೋಹಣ ನೆರವೇರಿಸಿದರು. ಸಿಬ್ಬಂದಿಗಳಾದ ಸತೀಶ್ ಶೇಟ್ ಹಾಗೂ ಅಪ್ರೆಂಟಿಸ್ ಸಂದೀಪ್ ಭಾಗವಹಿಸಿದ್ದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ (ಪ್ರಭಾರ) ಡಾ. ರಾಮ ರಾವ್ ಧ್ವಜಾರೋಹಣ ನೆರವೇರಿಸಿದರು. ಅರೋಗ್ಯ ಇಲಖೆಯ ವಿವಿಧ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.
ಸರಕಾರಿ ನೌಕರರ ವಸತಿ ಗೃಹ ಅಜ್ಜರಕಾಡು: ಲೊಕೋಪಯೋಗಿ ಇಲಾಖೆಯ ಕಾರ್ಯನಿವಾಹಕ ಇಂಜನಿಯರ್ ರವಿಕುಮಾರ್ ಧ್ವಜಾರೋಹಣ ನೆರವೇರಿಸಿದರು. ವಸತಿಗೃಹದ ನಿವಾಸಿಗಳು ಭಾಗವಹಿಸಿದ್ದರು.
ಜಿಲ್ಲಾ ಸರಕಾರಿ ನೌಕರರ ಸಂಘ: ಉಡುಪಿ ಜಿಲ್ಲಾ ಸರಕಾರಿ ನೌಕರರ ಸಂಘದ ಕಚೇರಿಯಲ್ಲಿ ಕಾರ್ಯದರ್ಶಿ ಉದಯ ಕುಮಾರ್ ಶೆಟ್ಟಿ ಧ್ವಜಾರೋಹಣ ನೆರವೇರಿಸಿದರು. ಖಜಾಂಜಿ ಶರೀಫ್ ರೋಣ, ಪ್ರವೀಣ್ ಕಾಮತ್ ಭಾಗವಹಿಸಿದ್ದರು.
ಸಂತ ಮೇರಿ ಕಾಲೇಜು ಶಿರ್ವ: ಗಣರಾಜ್ಯೋತ್ಸವ ದಿನಾಚರಣೆಯನ್ನು ಕಾಲೇಜಿನ ಎನ್.ಸಿ.ಸಿಯ ಭೂಯುವ ಸೇನಾದಳ ನೇತೃತ್ವದಲ್ಲಿ ಆಚರಿಸಲಾಯಿತು. ಮುಖ್ಯ ಅಥಿತಿಯಾಗಿ ಪ್ರೌಢಶಾಲೆಯ ಮುಖೋಪಾಧ್ಯಾಯರಾದ ಗಿಲ್ಬರ್ಟ್ ಪಿಂಟೋರವರು ಧ್ವಜಾರೋಹಣವನ್ನು ನೆರವೇರಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಹೆರಾಲ್ಡ್ ಐವನ್ ಮೋನಿಸ್, ಡಾನ್ ಬಾಸ್ಕೋ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಪೌಲಿನ್ ಲೋಬೋ, ಕಾಲೇಜಿನ ಎನ್.ಸಿ.ಸಿ ಅಧಿಕಾರಿ ಲೆಫ್ಟಿನೆಂಟ್ ಕೆ. ಪ್ರವೀಣ್‌ಕುಮಾರ್, ಸಂತ ಮೇರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಅಮಂಡಾ ಮ್ಯೂರಲ್ ಸಿಕ್ವೇರಾ, ಸೆಕೆಂಡ್ ಆಫೀಸರ್ ಜಾನ್ ವಿಲಿಯಂ, ಸೀನಿಯರ್ ಅಂಡರ್ ಆಫೀಸರ್ ವಿಶಾಲ್ ಎಸ್ ಮೂಲ್ಯ, ವಿವಿಧ ಘಟಕಗಳಾದ ಎನ್.ಸಿ.ಸಿ, ಎನ್.ಎಸ್.ಎಸ್, ರೊವರ್ಸ್-ರೇಂಜರ್ಸ್, ಪದವಿಕಾಲೇಜು, ಪದವಿ ಪೂರ್ವ ಕಾಲೇಜು, ಶಾಲಾ-ಕಾಲೇಜಿನ ವಿದ್ಯಾರ್ಥಿಗಳು, ಬೋಧಕ ಭೋಧಕೆತರ ಸಿಬಂದಿಗಳು ಉಪಸ್ಥಿತರಿದ್ದರು.
ಉಡುಪಿ ಜಿಲ್ಲಾ ಕಾಂಗ್ರೆಸ್ ಹಾಗೂ ಕಾಂಗ್ರೆಸ್ ಸೇವಾದಳ: ಉಡುಪಿ ಜಿಲ್ಲಾ ಕಾಂಗ್ರೆಸ್ ಹಾಗೂ ಕಾಂಗ್ರೆಸ್ ಸೇವಾದಳದಿಂದ 73ನೇ ಗಣರಾಜೋತ್ಸವ ದಿನಾಚರಣೆಯನ್ನು ಉಡುಪಿ ಸರ್ವಿಸ್ ಬಸ್ ನಿಲ್ದಾಣದ ಬಳಿ ಇರುವ ಗಾಂಧಿ ಪ್ರತಿಮೆಯ ಮುಂಭಾಗದಲ್ಲಿ ಆಚರಿಸಲಾಯಿತು. ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ ಧ್ವಜಾರೋಹಣವನ್ನು ನೆರವೇರಿಸಿದರು. ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾ ಕಾಂಗ್ರೆಸ್ ಮುಖಂಡರುಗಳಾದ ದಿನೇಶ್ ಪುತ್ರನ್, ಶಬ್ಬೀರ್ ಅಹ್ಮದ್, ಕೆ. ಅಣ್ಣಯ್ಯ ಸೇರಿಗಾರ್, ಬಾಲಕೃಷ್ಣ ಪೂಜಾರಿ, ಉದ್ಯಾವರ ನಾಗೇಶ್ ಕುಮಾರ್, ಜಿಲ್ಲಾ ಸೇವಾದಳದ ಅಧ್ಯಕ್ಷರಾದ ಕಿಶೋರ್ ಕುಮಾರ್ ಎರ್ಮಾಳ್, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಇಸ್ಮಾಯಿಲ್ ಆತ್ರಾಡಿ, ಜಿಲ್ಲಾ ಸೇವಾದಳದ ಮುಖಂಡರಾದ ಶರತ್ ನಾಯ್ಕ್, ಉಮೇಶ್ ಪೂಜಾರಿ, ರಾಜೇಶ್ ನಾಯ್ಕ್, ಲಕ್ಷ್ಮೀ ನಾಯ್ಕ್, ಉಡುಪಿ ಬ್ಲಾಕ್ ಅಧ್ಯಕ್ಷರಾದ ರಮೇಶ್ ಕಾಂಚನ್, ಮೀನಾಕ್ಷಿ ಮಾಧವ ಬನ್ನಂಜೆ, ಲಕ್ಷ್ಮೀಶ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.