ಮಣಿಪಾಲ: ಪ್ರಸ್ತುತ ಪರಿಸ್ಥಿತಿಯಲ್ಲಿ ಕೋವಿಡ್-19ರ ಪಿಡುಗಿನಿಂದ ಉಡುಪಿ ಜಿಲ್ಲೆಯಲ್ಲಿ ಹೊಸ ಸವಾಲುಗಳನ್ನು ಎದುರಿಸುತ್ತಿದ್ದು ಈ ಸಂದರ್ಭದಲ್ಲಿ ಪೋಷಕರು ಮತ್ತು ಖಾಸಗಿ ಶಾಲಾ ಕಾಲೇಜುಗಳ ಮಧ್ಯೆ ಹಗ್ಗಜಗ್ಗಾಟಕ್ಕೆ ಕಾರಣವಾಗಿದೆ. ಈ ಕುರಿತು ಪೋಷಕರು ಮತ್ತು ಖಾಸಗಿ ಶಾಲೆಗಳ ನಡುವೆ ಶಾಲಾ ಶುಲ್ಕದ ಕುರಿತು ಇನ್ನೂ ಗೊಂದಲವಿರುವುದು ಮತ್ತು ಈ ಬಗ್ಗೆ ಚರ್ಚೆಗಳು ಆಗುತ್ತಲೇ ಇದೆ. ಇದರಿಂದ ಮಕ್ಕಳ ಶಿಕ್ಷಣದ ಮೇಲೆ ಅಗಾಧವಾದ ಪರಿಣಾಮ ಬೀರುತ್ತಿದೆ.
ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಯಾವ ಶಾಲೆಯಲ್ಲಿ, ಯಾವಾಗ ಮತ್ತು ಎಷ್ಟು ಶಾಲಾ ಶುಲ್ಕವನ್ನು ಕಟ್ಟಬೇಕು ಎಂಬ ಸೂಕ್ತ ಮಾಹಿತಿಯನ್ನು ಸಂಗ್ರಹಿಸಿ ಪತ್ರಿಕಾ ಮಾದ್ಯಮದ ಮೂಲಕ ಪ್ರಕಟಿಸಬೇಕು. ಹಾಗೂ ಶಾಲಾ ಮಟ್ಟದಲ್ಲಿ ಆಯಾಯ ಶಾಲಾ ಶುಲ್ಕದ ವಿವರಗಳನ್ನು ಶಾಲಾ ಸೂಚನಾ ಫಲಕದಲ್ಲಿ ಪ್ರಕಟಿಸುವಂತೆ ಕ್ರಮ ತೆಗೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಅವರಿಗೆ ಜಿಲ್ಲಾ ಶಿಕ್ಷಣ ಸಂಪನ್ಮೂಲ ಕೇಂದ್ರದ ವತಿಯಿಂದ ಮನವಿ ನೀಡಲಾಯಿತು.