Monday, February 24, 2025
Monday, February 24, 2025

ಉಡುಪಿ ಜಿಲ್ಲೆಯಲ್ಲಿ ಕೋವಿಡ್-19 ಪರಿಷೃತ ಮಾರ್ಗಸೂಚಿ ಜಾರಿ

ಉಡುಪಿ ಜಿಲ್ಲೆಯಲ್ಲಿ ಕೋವಿಡ್-19 ಪರಿಷೃತ ಮಾರ್ಗಸೂಚಿ ಜಾರಿ

Date:

ಉಡುಪಿ: ಕೋವಿಡ್-19 ಸಾಂಕ್ರಾಮಿಕ ರೋಗದ ಹರಡುವಿಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸರ್ಕಾರದ ಮಾರ್ಗಸೂಚಿಗಳ ಕಟ್ಟುನಿಟ್ಟಿನ ಅನುಷ್ಠಾನದಿಂದ ರಾಜ್ಯಾದ್ಯಂತ ಪಾಸಿಟಿವ್ ಪ್ರಕರಣಗಳ ಪ್ರಮಾಣದ ಸಂಖ್ಯೆಯಲ್ಲಿ ಇಳಿಕೆಯಾಗುತ್ತಿರುವುದು ಕಂಡುಬಂದಿದ್ದರಿಂದ ಸರ್ಕಾರದ ಆದೇಶದಲ್ಲಿ ಕೆಲವೊಂದು ಮಾರ್ಪಾಡು ಮಾಡಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿರುತ್ತದೆ.

* ಅದರಂತೆ ಉಡುಪಿ ಜಿಲ್ಲೆಯಾದ್ಯಂತ ಕೋವಿಡ್-19 ಸಾಂಕ್ರಾಮಿಕ ರೋಗ ನಿಯಂತ್ರಣಕ್ಕಾಗಿ ಜನವರಿ 31 ರಿಂದ ಜಾರಿಗೆ ಬರುವಂತೆ ಪೆಬ್ರವರಿ 15 ರ ವರೆಗೆ ಈ ಕೆಳಗಿನಂತೆ ಮಾರ್ಗಸೂಚಿ/ನಿಬಂಧನೆಗಳನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿದ್ದಾರೆ.

* ಈಗಾಗಲೇ ಜಾರಿಯಲ್ಲಿರುವ ರಾತ್ರಿ ಕರ್ಫ್ಯೂ ಯನ್ನು ದಿನಾಂಕ:31.01.2022 ರಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ.

* ಪಬ್ ಗಳು/ ಕ್ಲಬ್ ಗಳು/ಹೋಟೆಲ್ ಗಳು/ರೆಸ್ಟೋರೆಂಟ್ ಗಳು/ ಬಾರ್ ಗಳು/ಹೋಟೆಲ್ ಗಳಲ್ಲಿನ ತಿನಿಸು ಕೇಂದ್ರಗಳು ಇತ್ಯಾದಿಗಳಲ್ಲಿ ಒಟ್ಟು ಆಸನ ಸಾಮರ್ಥ್ಯದ ಶೇ. 100% ಸಾಮರ್ಥ್ಯದೊಂದಿಗೆ ಕೋವಿಡ್-19 ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಅನುಸರಿಸಿಕೊಂಡು ಕಾರ್ಯ ನಿರ್ವಹಿಸತಕ್ಕದ್ದು. ಸದರಿ ಘಟಕಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳು 2 ಡೋಸ್ ಗಳ ಕೋವಿಡ್ ವ್ಯಾಕ್ಸಿನೇಷನ್ ಪಡೆದಿರತಕ್ಕದ್ದು. ಈ ಸ್ಥಳಗಳಲ್ಲಿ ವ್ಯಾಕ್ಸಿನೇಷನ್ ಪಡೆಯದೇ ಇರುವ ವ್ಯಕ್ತಿಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ.

* ಸಿನಿಮಾ ಹಾಲ್ ಗಳು/ಮಲ್ಟಿಫ್ಲೆಕ್ಸ್ ಗಳು/ಥಿಯೇಟರ್ ಗಳು/ ರಂಗಮಂದಿರಗಳು /ಸಭಾಂಗಣಗಳು ಮತ್ತು ಇಂತಹ ಇನ್ನಿತರೆ ಸ್ಥಳಗಳಲ್ಲಿ ಒಟ್ಟು ಆಸನ ಸಾಮರ್ಥ್ಯದ ಶೇ. 50 ಸಾಮರ್ಥ್ಯದೊಂದಿಗೆ ಕೋವಿಡ್-19 ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಅನುಸರಿಸಿಕೊಂಡು ಕಾರ್ಯನಿರ್ವಹಿಸತಕ್ಕದ್ದು. ಸದರಿ ಘಟಕಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳು 2 ಡೋಸ್ ಗಳ ಕೋವಿಡ್ ವ್ಯಾಕ್ಸಿನೇಷನ್ ಪಡೆದಿರತಕ್ಕದ್ದು. ಈ ಸ್ಥಳಗಳಲ್ಲಿ ವ್ಯಾಕ್ಸಿನೇಷನ್ ಪಡೆಯದೇ ಇರುವ ವ್ಯಕ್ತಿಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ.

* ಮದುವೆ ಸಮಾರಂಭಗಳಲ್ಲಿ ಕೋವಿಡ್-19 ಮತ್ತು ರಾಜ್ಯ ಸರ್ಕಾರವು ಹೊರಡಿಸಿರುವ ಚಾಲ್ತಿಯಲ್ಲಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಅನುಸರಿಸಿಕೊಂಡು ಹೊರಾಂಗಣ ಪ್ರದೇಶಗಳಲ್ಲಿ 300 ಜನರಿಗೆ ಹಾಗೂ ಒಳಾಂಗಣ ಪ್ರದೇಶಗಳಲ್ಲಿ 200 ಜನರು ಭಾಗವಹಿಸಲು ಸೀಮಿತಗೊಳಿಸಿ ಅನುಮತಿಸಲಾಗಿದೆ.

* ಧಾರ್ಮಿಕ ಸ್ಧಳಗಳಲ್ಲಿ ದರ್ಶನಕ್ಕೆ ಮತ್ತು ಸೇವೆಗೆ ಮಾತ್ರ ತೆರೆಯಲು ಅವಕಾಶ. ಏಕ ಕಾಲದಲ್ಲಿ 2 ಡೋಸ್ ಲಸಿಕೆಯನ್ನು ಪಡೆದಿರುವ 50 ಜನರಿಗೆ ಮಾತ್ರ ಪ್ರವೇಶ ಕಲ್ಪಿಸುವುದು.

* ಸಾಮಾಜಿಕ, ಧಾರ್ಮಿಕ, ರಾಜಕೀಯ ಪ್ರತಿಭಟನೆಗಳು, ಎಲ್ಲಾ ರ್ಯಾಲಿಗಳು, ಧರಣಿಗಳು, ಸಭೆಗಳು, ಎಲ್ಲಾ ತರಹದ ಮೆರವಣಿಗೆ ಹಾಗೂ ಇತ್ಯಾದಿಗಳನ್ನು ನಿರ್ಬಂಧಿಸಲಾಗಿದೆ.

* ಸ್ವಿಮ್ಮಿಂಗ್ ಪೂಲ್ ಮತ್ತು ಜಿಮ್ ಗಳು ಶೇ 50 ರ ಸಾಮರ್ಥ್ಯ ದೊಂದಿಗೆ ಕಾರ್ಯಾಚರಿಸುವುದು ಹಾಗೂ 2 ಡೋಸ್ ಲಸಿಕೆಯನ್ನು ಪಡೆದಿರುವ ಜನರಿಗೆ ಮಾತ್ರ ಪ್ರವೇಶ ಕಲ್ಪಿಸುವುದು.

* ಕ್ರೀಡಾ ಸಂಕೀರ್ಣಗಳು ಮತ್ತು ಸ್ಟೇಡಿಯಂಗಳ ಶೇ 50 % ಸಾಮರ್ಥ್ಯಕ್ಕೆ ಒಳಪಟ್ಟು ಕಾರ್ಯಾಚರಿಸುವುದು.

* ಕೋವಿಡ್-19 ಸಾಂಕ್ರಾಮಿಕ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರವು ಹೊರಡಿಸಿದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸತಕ್ಕದ್ದು. ಅಲ್ಲದೇ, ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಮಾಲಿನ್ಯ ನಿಯಂತ್ರಣ ಮಂಡಳಿ, ಅಗ್ನಿಶಾಮಕ ಇಲಾಖೆ, ಜಿಲ್ಲಾಡಳಿತ ಹಾಗೂ ಇತರೆ ಇಲಾಖೆಗಳಿಂದ ಹೊರಡಿಸಲಾದ ಸೂಚನೆಗಳು/ ಮಾರ್ಗಸೂಚಿಗಳು/ ಪ್ರಮಾಣಿತ ಕಾರ್ಯ ವಿಧಾನ(ಎಸ್.ಓ.ಪಿ) ಗಳನ್ನು ಸಹ ಕಡ್ಡಾಯವಾಗಿ ಪಾಲಿಸತಕ್ಕದ್ದು.

* ಮೇಲಿನ ಆದೇಶಗಳನ್ನು ಪಾಲಿಸದೇ ಇದ್ದವರ ಮೇಲೆ ಪೋಲಿಸ್ ಠಾಣೆಗಳಲ್ಲಿ ಕ್ರಿಮಿನಲ್ ಪ್ರಕರಣಗಳನ್ನು ವಿಪತ್ತು ನಿರ್ವಹಣಾ ಕಾಯ್ದೆ 2005, ಕರ್ನಾಟಕ ಎಪಿಡಮಿಕ್ ಡಿಸೀಸಸ್ ಆಕ್ಟ್ 2020 ಮತ್ತು ಐಪಿಸಿ ಸೆಕ್ಷನ್ 188 ಪ್ರಕಾರ ನಿಯಮಾನುಸಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿದ್ದಾರೆ.

 

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!