ಉಡುಪಿ ಜಿಲ್ಲೆಯಲ್ಲಿ 120 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-54, ಕುಂದಾಪುರ-18, ಕಾರ್ಕಳ-46 ಮತ್ತು ಹೊರ ಜಿಲ್ಲೆಯ ಇಬ್ಬರು ಸೋಂಕಿಗೆ ಒಳಗಾಗಿದ್ದಾರೆ. 54 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 66555 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 932 ಸಕ್ರಿಯ ಪ್ರಕರಣಗಳಿವೆ.
ಜಿಲ್ಲೆಯಲ್ಲಿ ಯಾವುದೇ ಸಾವು ಸಂಭವಿಸಿಲ್ಲ. ಇಲ್ಲಿಯವರೆಗೆ 402 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಜುಲೈ 13 ರಂದು 3482 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 722241 ಮಂದಿಯನ್ನು ಪರೀಕ್ಷಿಸಲಾಗಿದೆ.