Thursday, November 19, 2026
Thursday, November 19, 2026

‘ಋತು ತಾರೆ’ ವಿನೂತನ ಕಾರ್ಯಕ್ರಮ

‘ಋತು ತಾರೆ’ ವಿನೂತನ ಕಾರ್ಯಕ್ರಮ

Date:

ಬೆಂಗಳೂರು, ನ.೧೯: ಮಹಿಳೆಯರ ಮಧ್ಯವಯಸ್ಸಿನಲ್ಲಿ ಎದುರಾಗುವ ಆರೋಗ್ಯ ಸಮಸ್ಯೆಗಳನ್ನು ಗುರುತಿಸಿ, ಸೂಕ್ತ ಆರೈಕೆ ಮತ್ತು ವೈದ್ಯಕೀಯ ಮಾರ್ಗದರ್ಶನ ಒದಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ‘ಋತು ತಾರೆ’ ಎಂಬ ವಿನೂತನ ಕಾರ್ಯಕ್ರಮವನ್ನು ಜಾರಿಗೆ ತಂದಿದೆ. 35 ವರ್ಷ ಮೇಲ್ಪಟ್ಟ ಮಹಿಳೆಯರಿಗೆ ಸಮಗ್ರ ಆರೋಗ್ಯ ತಪಾಸಣೆ, ಋತುಬಂಧಕ್ಕೆ ಸಂಬಂಧಿಸಿದಂತೆ ವೈಯಕ್ತಿಕ ವೈದ್ಯಕೀಯ ಸಲಹೆ ಹಾಗೂ ಮಾನಸಿಕ ಆರೋಗ್ಯದ ಆರೈಕೆಗೆ ಈ ಕಾರ್ಯಕ್ರಮದಲ್ಲಿ ಆದ್ಯತೆ ನೀಡಲಾಗಿದೆ.

ಮೊದಲ ಹಂತದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಾಯೋಗಿಕವಾಗಿ ಅನುಷ್ಠಾನಗೊಳ್ಳಲಿರುವ ‘ಋತು ತಾರೆ’ ಕಾರ್ಯಕ್ರಮವು ಮಹಿಳೆಯರು ಆರೋಗ್ಯ ಸಮಸ್ಯೆಗಳನ್ನು ಆರಂಭದಲ್ಲೇ ಗುರುತಿಸಿ, ಸೂಕ್ತ ಚಿಕಿತ್ಸೆ ಮತ್ತು ಆರೈಕೆ ಪಡೆಯಲು ನೆರವಾಗಲಿದೆ. ಮಹಿಳೆಯರ ಆರೋಗ್ಯ ಮತ್ತು ಜೀವನದ ಗುಣಮಟ್ಟ ಸುಧಾರಿಸುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾವೇರಿ 2.0: ಆಸ್ತಿ ನೋಂದಣಿಗೆ ಡಿಜಿಟಲ್ ಸ್ಪರ್ಶ

ಬೆಂಗಳೂರು, ನ.19: ಆಸ್ತಿ ನೋಂದಣಿಗಾಗಿ ಕಚೇರಿಗಳಿಗೆ ತೆರಳಿ ಭೌತಿಕ ದಾಖಲೆಗಳನ್ನು ಸಲ್ಲಿಸುವ...

ಬಂಟ್ವಾಳ: ಹೊಂಡ-ಗುಂಡಿಗಳ ವರದಿ ಬಗ್ಗೆ ಸಿಎಂ ಕಛೇರಿ ಸ್ಪಂದನೆ

ಬಂಟ್ವಾಳ, ನ.19: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮೂಲಕ ಹಾದುಹೋಗುವ...

ಮುರಳಿ ಕಡೆಕಾರ್ ಇವರಿಗೆ ಶಾರದಾಕೃಷ್ಣ ಪ್ರಶಸ್ತಿ-2027

ಉಡುಪಿ, ನ.18: ಹೆಬ್ರಿಯ ರಾಘವೇಂದ್ರ ಚಾರಿಟೇಬಲ್ ಟ್ರಸ್ಟ್ ಪ್ರಾಯೋಜಕತ್ವದಲ್ಲಿ ಸಂಸ್ಕೃತಿ ವಿಶ್ವ...

ಸನ್ಮತಿ ಮಾಸಿಕ ಸಂಚಿಕೆ ಬಿಡುಗಡೆ, ತಿಂಗಳ ಅಂಗಳ ಸಂವಾದ

ಉಡುಪಿ, ನ.18: ಎಲ್‌ನಿನೋ ಹಿನ್ನೆಲೆಯಲ್ಲಿ ಬೇಸಿಗೆಯಲ್ಲಿ ಕಾಡುವ ಕುಡಿಯುವ ನೀರಿನ ಸಮಸ್ಯೆ...
error: Content is protected !!