ಬೆಂಗಳೂರು, ಸೆ.14: ಬೆಂಗಳೂರಿನ ಅರಣ್ಯ ಭವನದಲ್ಲಿ ಕರ್ನಾಟಕ ಅರಣ್ಯ ಇಲಾಖೆಯ ವತಿಯಿಂದ ಆಯೋಜಿಸಿದ್ದ ‘ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ – 2026’ ಕಾರ್ಯಕ್ರಮ ನಡೆಯಿತು. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭಾಗವಹಿಸಿ ನಾಡಿನ ವನ್ಯಜೀವಿ ಹಾಗೂ ಪ್ರಕೃತಿ ಸಂಪತ್ತನ್ನು ಸಂರಕ್ಷಿಸುವ ಕರ್ತವ್ಯದಲ್ಲಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ ಅರಣ್ಯ ಇಲಾಖೆಯ ಹುತಾತ್ಮರ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿದರು.
ಬಳಿಕ ಮಾತನಾಡಿದ ಅವರು, ನಮ್ಮ ಕಾಡುಗಳು, ವನ್ಯಜೀವಿಗಳು ಮತ್ತು ನೈಸರ್ಗಿಕ ಸಂಪತ್ತು ಸುರಕ್ಷಿತವಾಗಿರುವುದರ ಹಿಂದೆ ಅರಣ್ಯ ರಕ್ಷಕರ ಅಪಾರ ತ್ಯಾಗ, ಧೈರ್ಯ ಮತ್ತು ಕರ್ತವ್ಯನಿಷ್ಠೆ ಅಡಗಿದೆ. ತಮ್ಮ ಜೀವದ ಹಂಗು ತೊರೆದು ಅರಣ್ಯವನ್ನು ಕಾಪಾಡಿದ ವೀರರ ತ್ಯಾಗ ಚಿರಸ್ಮರಣೀಯ.
ಅರಣ್ಯ ಸಚಿವರಾದ ರಾಮಲಿಂಗಾ ರೆಡ್ಡಿ, ಅರಣ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಝ್ ಹಾಗೂ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮೀನಾಕ್ಷಿ ನೇಗಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.




By
ForthFocus™