Sunday, September 6, 2026
Sunday, September 6, 2026

ಉಡುಪಿ: ಸಹಕಾರ ಭಾರತಿ ಸ್ಥಾಪನಾ ದಿನಾಚರಣೆ

ಉಡುಪಿ: ಸಹಕಾರ ಭಾರತಿ ಸ್ಥಾಪನಾ ದಿನಾಚರಣೆ

Date:

ಉಡುಪಿ: ಉಡುಪಿ ತಾಲೂಕು ಸಹಕಾರ ಭಾರತಿಯ ಆಶ್ರಯದಲ್ಲಿ ಸಹಕಾರ ಭಾರತಿ ಸ್ಥಾಪನಾ ದಿನಾಚರಣೆಯು ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿ ಸಭಾಂಗಣದಲ್ಲಿ ನಡೆಯಿತು. ಜಿಲ್ಲಾಧ್ಯಕ್ಷರಾದ ಬೋಳ ಸದಾಶಿವ ಶೆಟ್ಟಿಯವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕು ಅಧ್ಯಕ್ಷರಾದ ದಿನೇಶ್ ಹೆಗ್ಡೆ ಆತ್ರಾಡಿ ವಹಿಸಿದ್ದರು. ಸಹಕಾರ ಭಾರತಿ ಸ್ಥಾಪನಾ ದಿನದ ವಿಶೇಷತೆಯ ಬಗ್ಗೆ ಮಂಗಳೂರು ವಿಭಾಗ ಪ್ರಮುಖ್ ಮೋಹನ್ ಕುಂಬ್ಳೆಕರ್ ಮಾತನಾಡಿದರು.

ಕಾರ್ಯಕ್ರಮದಲ್ಲಿ ಮಹಿಳಾ ಪ್ರಕೋಷ್ಠದ ಸಂಚಾಲಕರಾದ ವಿಜೇತ ವಿದ್ಯಾ ಪೈ, ಇಂಡಸ್ಟ್ರಿಯಲ್ ಕೋ – ಅರೇಟಿವ್ ಸೊಸೈಟಿ ಉಡುಪಿ ಕಾರ್ಯನಿರ್ವಹಣಾಧಿಕಾರಿ ರಾಜೇಶ್ ಹೆಗ್ದೆ, ಜಿಲ್ಲಾ ಉಪಾಧ್ಯಕ್ಷ ಜಯಪ್ರಕಾಶ್ ಕೆದ್ಲಾಯ ಪ್ರಾಸ್ತಾವಿಕವಾಗಿ ಮಾತನಾಡಿದರು.

ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ ಇವರನ್ನು ಸನ್ಮಾನಿಸಲಾಯಿತು. ಸನ್ಮಾನ ಪತ್ರವನ್ನು ಮಂಜುನಾಥ್ ಮಣಿಪಾಲ್ ವಾಚಿಸಿದರು. ಪ್ರದೀಪ್ ನಾಯಕ್ ವಂದನಾರ್ಪಣೆಗೈದರು. ಸಂಘಟನಾ ಕಾರ್ಯದರ್ಶಿ ಡಾ. ಬಾಲಕೃಷ್ಣ ಮದ್ದೊಡಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶ್ರೀ ಕೃಷ್ಣ ಮಠ: ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಅರ್ಘ್ಯ ಪ್ರದಾನ

ಉಡುಪಿ, ಸೆ.5: ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಶುಕ್ರವಾರ ಮಧ್ಯರಾತ್ರಿ ಚಂದ್ರೋದಯ...

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿಗೆ ಅವಳಿ ಪ್ರಶಸ್ತಿ

ಉಡುಪಿ, ಸೆ.4: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಸರಕಾರಿ...

ರಥಬೀದಿ ಕಾಲೇಜು: ಸಂಸ್ಕೃತ ದಿನಾಚರಣೆ

ಮಂಗಳೂರು, ಸೆ.3: ರಥಬೀದಿ ಕಾಲೇಜಿನಲ್ಲಿ ಸಂಸ್ಕೃತ ದಿನಾಚರಣೆ ಕಾರ್ಯಕ್ರಮ ಮಂಗಳೂರು ರಥಬೀದಿಯ...

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕಾಗಿ ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಸೆ.4: ಉಡುಪಿ, ಕಾಪು ಹಾಗೂ ಬ್ರಹ್ಮಾವರ ತಾಲೂಕುಗಳಿಗೆ ಸಂಬಂಧಿಸಿದಂತೆ ಅಡಿಕೆ...
error: Content is protected !!