Monday, January 20, 2025
Monday, January 20, 2025

ಉಡುಪಿ ಇ-ಸ್ಯಾಂಡ್ ಆಪ್ ಮೂಲಕ ಮರಳು ಲಭ್ಯ

ಉಡುಪಿ ಇ-ಸ್ಯಾಂಡ್ ಆಪ್ ಮೂಲಕ ಮರಳು ಲಭ್ಯ

Date:

ಉಡುಪಿ: ಜಿಲ್ಲೆಯ ಕುಂದಾಪುರ, ಬ್ರಹ್ಮಾವರ ಮತ್ತು ಉಡುಪಿ ತಾಲೂಕುಗಳ ವ್ಯಾಪ್ತಿಯಲ್ಲಿನ ವಾರಾಹಿ, ಸೌಪರ್ಣಿಕಾ, ಸ್ವರ್ಣಾ ಮತ್ತು ಸೀತಾ ನದಿ ಪಾತ್ರಗಳಲ್ಲಿ ಮರಳು ದಿಬ್ಬ ತೆರವುಗೊಳಿಸುವ ಕಾರ್ಯವು ಪ್ರಗತಿಯಲ್ಲಿದ್ದು, ಸದರಿ ಮರಳನ್ನು ಸಾರ್ವಜನಿಕರಿಗೆ ಅಭಿವೃದ್ಧಿ ಕಾಮಗಾರಿಗಳಿಗೆ ಉಡುಪಿ ಇ-ಸ್ಯಾಂಡ್ ಆಪ್ ಮೂಲಕ ಮರಳು ವಿತರಿಸಲಾಗುತ್ತಿದೆ.

ಮರಳು ಅವಶ್ಯಕತೆ ಇರುವವರು ಅಂತರ್ಜಾಲ http://udupiesand.com ನ್ನು ಸಂದರ್ಶಿಸಿ, ಹೆಸರು ಹಾಗೂ ವಿಳಾಸ ದಾಖಲಿಸಿ ಬೇಕಾಗಿರುವ ಮರಳಿನ ಪ್ರಮಾಣವನ್ನು ನಮೂದಿಸಿ, ಆನ್‌ಲೈನ್ ಮೂಲಕ ಹಣ ಪಾವತಿ ಮಾಡಬಹುದಾಗಿದೆ.

ಇದೊಂದು ಸರಳ ಹಾಗೂ ಪಾರದರ್ಶಕ ಪ್ರಕ್ರಿಯೆಯಾಗಿದ್ದು, ಜಿಲ್ಲೆಯ ಸಾರ್ವಜನಿಕರು ಇದರ ಉಪಯೋಗ ಪಡೆಯಬಹುದಾಗಿದ್ದು, ಹೊರ ಜಿಲ್ಲೆಗೆ ಮರಳು ಪೂರೈಸಲು ಅವಕಾಶವಿರುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಹಿರಿಯ ಭೂ ವಿಜ್ಞಾನಿಯವರ ಕಚೇರಿ, ಗಣಿ ಮತ್ತು ಭೂವಿಜ್ಞಾನ ಇಲಾಖೆ, ಉಡುಪಿ ದೂ.ಸಂಖ್ಯೆ: 0820-2572333 ಅಥವಾ ಸ್ಯಾಂಡ್ ಆಪ್ ಕಾಂಟ್ಯಾಕ್ಟ್ ನಂ: 6366745888, 6364024555, 6366871888 ಅನ್ನು ಸಂಪರ್ಕಿಸುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!