Saturday, September 5, 2026
Saturday, September 5, 2026

ಇಲಾಖಾ ದರದಲ್ಲಿ ತೋಟಗಾರಿಕಾ ಸಸಿಗಳು ಲಭ್ಯ

ಇಲಾಖಾ ದರದಲ್ಲಿ ತೋಟಗಾರಿಕಾ ಸಸಿಗಳು ಲಭ್ಯ

Date:

ಉಡುಪಿ: ಜಿಲ್ಲೆಯ ತೋಟಗಾರಿಕಾ ಕ್ಷೇತ್ರಗಳಲ್ಲಿ ರೈತರ ಹಾಗೂ ಸಾರ್ವಜನಿಕರ ಬೇಡಿಕೆ ಆಧಾರದ ಮೇಲೆ ವಿವಿಧ ತೋಟಗಾರಿಕಾ ಕಸಿ ಅಥವಾ ಸಸಿ ಗಿಡಗಳನ್ನು ಉತ್ಪಾದಿಸಿ, ಇಲಾಖಾ ದರದಲ್ಲಿ ಮಾರಾಟ ಮಾಡಲಾಗುತ್ತಿದೆ.ಉಡುಪಿ ತಾಲೂಕಿನ ಶಿವಳ್ಳಿ, ಬ್ರಹ್ಮಾವರ ತಾಲೂಕಿನ ವಾರಂಬಳ್ಳಿ, ಕುಂದಾಪುರ ತಾಲೂಕಿನ ಕುಂಭಾಶಿ ಹಾಗೂ ಕೆದೂರು ಮತ್ತು ಕಾರ್ಕಳ ತಾಲೂಕಿನ ರಾಮಸಮುದ್ರ ಹಾಗೂ ಕುಕ್ಕಂದೂರು ತೋಟಗಾರಿಕಾ ಕ್ಷೇತ್ರಗಳಲ್ಲಿ ಉತ್ತಮ ಗುಣಮಟ್ಟದ ಅಡಿಕೆ, ಕಸಿಗೇರು, ಕಾಳುಮೆಣಸು, ಕಸಿ ಕಾಳು ಮೆಣಸು, ತೆಂಗು ಹಾಗೂ ಮಲ್ಲಿಗೆ ಗಿಡಗಳನ್ನು ಉತ್ಪಾದಿಸಲಾಗುತ್ತಿದ್ದು, ಆಸಕ್ತ ರೈತರು ಇದರ ಸದುಪಯೋಗಪಡೆದುಕೊಳ್ಳಬಹುದು.

ಜಿಲ್ಲೆಯ ರೈತರು ಅಡಿಕೆ (20 ರೂ.), ಕಸಿ ಗೇರು (32 ರೂ.), ಕಾಳುಮೆಣಸು (11 ರೂ.), ತೆಂಗು (70 ರೂ.), ಕಸಿ ಕಾಳುಮೆಣಸು (32 ರೂ.) ಹಾಗೂ ಮಲ್ಲಿಗೆ (10 ರೂ.) ಗಿಡಗಳನ್ನು ಖರೀದಿಸಲು ಸಂಬAಧಪಟ್ಟ ತೋಟಗಾರಿಕಾ ಕ್ಷೇತ್ರದ ಅಧಿಕಾರಿಗಳನ್ನು ಸಂಪರ್ಕಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಶಿವಳ್ಳಿ ತೋಟಗಾರಿಕಾ ಕ್ಷೇತ್ರದ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕ ನಿಧಿಶ ಕೆ.ಜೆ ಮೊ.ನಂ: 9742489714, ವಾರಂಬಳ್ಳಿ ತೋಟಗಾರಿಕಾ ಕ್ಷೇತ್ರದ ಸಹಾಯಕ ತೋಟಗಾರಿಕಾ ಅಧಿಕಾರಿ ರಾಮ ನರಸಿಂಹ ಹೆಗಡೆ ಮೊ.ನಂ. 9481864481, ಕೆದೂರು ತೋಟಗಾರಿಕಾ ಕ್ಷೇತ್ರದ ಸಹಾಯಕ ತೋಟಗಾರಿಕಾ ಅಧಿಕಾರಿ ಮಧುಕರ್ ಮೊ.ನಂ.9482166313, ಕುಂಭಾಶಿ ತೋಟಗಾರಿಕಾ ಕ್ಷೇತ್ರದ ಸಹಾಯಕ ತೋಟಗಾರಿಕಾ ಅಧಿಕಾರಿ ಅಜಿತ ಅಕ್ಕೊಳ್ಳಿ ಮೊ.ನಂ. 9481721482, ರಾಮಸಮುದ್ರ ತೋಟಗಾರಿಕಾ ಕ್ಷೇತ್ರದ ಸಹಾಯಕ ತೋಟಗಾರಿಕಾ ನಿರ್ದೇಶಕ ವರುಣ ಕೆ.ಜೆ ಮೊ. ನಂ. 7892326323 ಹಾಗೂ ಕುಕ್ಕಂದೂರು ತೋಟಗಾರಿಕಾ ಕ್ಷೇತ್ರದ ಸಹಾಯಕ ತೋಟಗಾರಿಕಾ ಅಧಿಕಾರಿ ಚಿದಾನಂದ ಕಳಕಾಪುರ ಮೊ.ನಂ.9108344017 ಅನ್ನು ಸಂಪರ್ಕಿಸುವಂತೆ ತೋಟಗಾರಿಕಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶ್ರೀ ಕೃಷ್ಣ ಮಠ: ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಅರ್ಘ್ಯ ಪ್ರದಾನ

ಉಡುಪಿ, ಸೆ.5: ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಶುಕ್ರವಾರ ಮಧ್ಯರಾತ್ರಿ ಚಂದ್ರೋದಯ...

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿಗೆ ಅವಳಿ ಪ್ರಶಸ್ತಿ

ಉಡುಪಿ, ಸೆ.4: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಸರಕಾರಿ...

ರಥಬೀದಿ ಕಾಲೇಜು: ಸಂಸ್ಕೃತ ದಿನಾಚರಣೆ

ಮಂಗಳೂರು, ಸೆ.3: ರಥಬೀದಿ ಕಾಲೇಜಿನಲ್ಲಿ ಸಂಸ್ಕೃತ ದಿನಾಚರಣೆ ಕಾರ್ಯಕ್ರಮ ಮಂಗಳೂರು ರಥಬೀದಿಯ...

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕಾಗಿ ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಸೆ.4: ಉಡುಪಿ, ಕಾಪು ಹಾಗೂ ಬ್ರಹ್ಮಾವರ ತಾಲೂಕುಗಳಿಗೆ ಸಂಬಂಧಿಸಿದಂತೆ ಅಡಿಕೆ...
error: Content is protected !!