Tuesday, January 21, 2025
Tuesday, January 21, 2025

ಗಂಗೊಳ್ಳಿ ಶಾರದೋತ್ಸವದಲ್ಲಿ ಸಂಜಿತ್ ಸ್ಯಾಕ್ಸೋಫೋನ್ ಸೇವೆ

ಗಂಗೊಳ್ಳಿ ಶಾರದೋತ್ಸವದಲ್ಲಿ ಸಂಜಿತ್ ಸ್ಯಾಕ್ಸೋಫೋನ್ ಸೇವೆ

Date:

ಗಂಗೊಳ್ಳಿ: ಸೇವಾ ಸಂಘ (ರಿ.) ಗಂಗೊಳ್ಳಿಯ 47 ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವದ ಎರಡನೇ ದಿನವಾದ ಮಂಗಳವಾರದಂದು ಗಂಗೊಳ್ಳಿಯ ಸ್ಯಾಕ್ಸೋಫೋನ್ ವಾದನದ ಬಹುಮುಖ ಬಾಲ ಪ್ರತಿಭೆ ಸಂಜಿತ್ ಎಮ್ ದೇವಾಡಿಗ ತಮ್ಮ ತಂಡದೊಂದಿಗೆ ಸ್ಯಾಕ್ಸೋಫೋನ್ ವಾದನ ಸೇವೆಯನ್ನು ಸಲ್ಲಿಸಿದರು.

ಗಣನಾಯಕಾಯ, ನಮ್ಮಮ್ಮ ಶಾರದೆ, ಎಂತ ಅಂದ ಎಂತ ಚೆಂದ, ಶಾರದೆ ದಯೆ ತೋರಿದೆ, ಬ್ರಹ್ಮ ಮುಕುಟೆ, ಭಾಗ್ಯದ ಲಕ್ಷ್ಮಿ ಬಾರಮ್ಮ, ತಂಬೂರಿ ಮೀಟಿದವ ಮೊದಲಾದ ಗೀತೆಗಳನ್ನು ಸ್ಯಾಕ್ಸೋಫೋನ್ ವಾದನದ ಮೂಲಕ ಸುಂದರವಾಗಿ ಪ್ರಸ್ತುತಪಡಿಸಿ ಜನಮನವನ್ನು ಸೆಳೆದರು.

ತವಿಲ್ ನಲ್ಲಿ ಹರ್ಷವರ್ಧನ ಖಾರ್ವಿ, ತಬಲಾದಲ್ಲಿ ಸುಧೀಂದ್ರ ಆಚಾರ್ಯ ವಂಡ್ಸೆ, ಗೆಜ್ಜೆಯಲ್ಲಿ ಅಭಿಷೇಕ್ ಪೂಜಾರಿ ಮತ್ತು ತಾಳದಲ್ಲಿ ಮಾಧವ ದೇವಾಡಿಗ ಸಹಕರಿಸಿದರು. ಪ್ರಧಾನ ಪುರೋಹಿತರಾದ ಜಿ. ರಾಘವೇಂದ್ರ ನಾರಾಯಣ ಆಚಾರ್ಯ ಶುಭ ಹಾರೈಸಿದರು.

ಸರಸ್ವತಿ ವಿದ್ಯಾಲಯದ ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ ಕಾರ್ಯಕ್ರಮವನ್ನು ನಿರೂಪಿಸಿದರು. ಶ್ರೀ ಶಾರದ ಮಹೋತ್ಸವ ಸಮಿತಿಯ ಅಧ್ಯಕ್ಷ ಸತೀಶ್ ಜಿ. ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!