ಮಲ್ಪೆ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಉಡುಪಿ ಇಲ್ಲಿ ಜಿಲ್ಲಾ ಅರೋಗ್ಯ ಇಲಾಖೆಯ ಮೂಲಕ ಶುಕ್ರವಾರ ಎರಡನೇ ಡೋಸ್ ನ 200 ಕೋವಾಕ್ಸಿನ್ ಲಸಿಕೆಯನ್ನು ತೆಂಕನಿಡಿಯೂರು ಕಾಲೇಜಿನ ವಿದ್ಯಾರ್ಥಿಗಳು, ಬೋಧಕ ಬೋಧಕೇತರ ಸಿಬ್ಬಂದಿಗಳಿಗೆ ನೀಡಲಾಯಿತು.
ಪ್ರಾಂಶುಪಾಲ ಡಾ. ಗಣನಾಥ ಎಕ್ಕಾರು, ಬೋಧಕ ಬೋಧಕೇತರರು, ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು. ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ರಾಮಚಂದ್ರ ಪಾಟ್ಕರ್ ಈ ಕಾರ್ಯಕ್ರಮ ಸಂಘಟಿಸಿದರು.