Monday, February 24, 2025
Monday, February 24, 2025

ಯೋಜನೆಗಳನ್ನು ಅರ್ಹ ಮಹಿಳಾ ಫಲಾನುಭವಿಗಳಿಗೆ ತಲುಪಿಸಿ: ಶಶಿಕಲಾ ಟೆಂಗಳೆ

ಯೋಜನೆಗಳನ್ನು ಅರ್ಹ ಮಹಿಳಾ ಫಲಾನುಭವಿಗಳಿಗೆ ತಲುಪಿಸಿ: ಶಶಿಕಲಾ ಟೆಂಗಳೆ

Date:

ಮಹಿಳೆಯರ ಕಲ್ಯಾಣಾಭಿವೃದ್ಧಿಗೆ ಸರಕಾರ ಅನೇಕ ಯೋಜನೆಗಳನ್ನು ಹಾಗೂ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಇವುಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕೆಲಸವನ್ನು ಅಧಿಕಾರಿಗಳು ಮಾಡಬೇಕು ಎಂದು ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಶಿಕಲಾ ವಿ ಟೆಂಗಳೆ ಹೇಳಿದರು. ಅವರು ಮಂಗಳವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಮಾಜದಲ್ಲಿನ ದುರ್ಬಲ ವರ್ಗದ ಮಹಿಳೆಯರ ಅನುಕೂಲಕ್ಕೆ ಜಾರಿಗೆ ತಂದಿರುವ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಮಹಿಳೆಯರು ಸದುಪಯೋಗಪಡಿಸಿಕೊಂಡು ಸ್ವ-ಉದ್ಯೋಗ, ವಾಣಿಜ್ಯ, ಹೈನುಗಾರಿಕೆ ಸೇರಿದಂತೆ ಇನ್ನಿತರ ಚಟುವಟಿಕೆಗಳನ್ನು ಕೈಗೊಳ್ಳುವುದರೊಂದಿಗೆ ಆರ್ಥಿಕವಾಗಿ ಸಬಲರಾಗುವುದರೊಂದಿಗೆ ಸ್ವಾವಲಂಬಿಗಳಾಗಬೇಕು ಎಂದರು.

ಜಿಲ್ಲೆಯಲ್ಲಿ ಉದ್ಯೋಗಿನಿ, ಸಮೃದ್ಧಿ, ಕಿರುಸಾಲ, ಧನಶ್ರೀ, ಚೇತನ, ಲಿಂಗತ್ವ ಅಲ್ಪಸಂಖ್ಯಾತ, ಮಹಿಳೆಯರಿಗೆ ಕೌಶಲ್ಯ ತರಬೇತಿ, ಮಹಿಳಾ ಸ್ವ-ಉದ್ಯೋಗ ಮಾರ್ಗದರ್ಶನ ಕೇಂದ್ರ ಯೋಜನೆ, ಪರಿಶಿಷ್ಟ ಜಾತಿ/ಪಂಗಡ ಉಪಯೋಜನೆಗಳನ್ನು ಪ್ರತಿಶತ ನೂರರಷ್ಟು ಅನುಷ್ಠಾನಗೊಳಿಸಬೇಕು ಎಂದರು. ಕೇಂದ್ರ ಹಣಕಾಸು ಸಚಿವಾಲಯ ಪ್ರಧಾನ ಮಂತ್ರಿ ಮಹಿಳಾ ಸಶಕ್ತೀಕರಣ ಯೋಜನೆಯಡಿ ಕೌಶಲ್ಯಾಭಿವೃದ್ಧಿ ಉದ್ಯೋಗ, ಆರೋಗ್ಯ ಮತ್ತು ಪೌಷ್ಠಿಕತೆಗಳ ಮೂಲಕ ಗ್ರಾಮೀಣ ಮಹಿಳೆಯರನ್ನು ಸಬಲೀಕರಣಗೊಳಿಸಲು ಒಂದೇ ಕಡೆ ಎಲ್ಲಾ ಸಹಾಯ ಸೇವೆಗಳನ್ನು ನೀಡುವ ಸಲುವಾಗಿ ಮಹಿಳಾ ಶಕ್ತಿ ಕೇಂದ್ರ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ ಎಂದರು.

ಲಿಂಗತ್ವ ಅಲ್ಪಸಂಖ್ಯಾತರಿಗೆ ಸ್ವ-ಉದ್ಯೋಗ, ಹೈನುಗಾರಿಕೆ ಕೈಗೊಳ್ಳಲು ಹಾಗೂ ಅವರಿಗೆ ನಿವೇಶನ ಒದಗಿಸುವ ಕುರಿತಂತೆ ಇಂದು ಜಿಲ್ಲಾಧಿಕಾರಿಯವರೊಂದಿಗೆ ಚರ್ಚಿಸಿ ಸರಕಾರದ ಜಮೀನು ನೀಡಲು ಮನವಿ ಮಾಡಲಾಗಿದೆ ಎಂದರು. ಸ್ವ-ಉದ್ಯೋಗ ಕೈಗೊಳ್ಳಲು ವಾಣಿಜ್ಯ ಬ್ಯಾಂಕುಗಳ ಮೂಲಕ ಸಬ್ಸಿಡಿ ಸಾಲ ಪಡೆದವರು ಅದನ್ನು ಸದ್ಭಳಕೆ ಮಾಡಿಕೊಳ್ಳುವುದರ ಜೊತೆಗೆ ಅದನ್ನು ನಿಗದಿತ ಕಾಲಾವಧಿ ಒಳಗೆ ಮರುಪಾವತಿ ಮಾಡಲು ಮುಂದಾದಲ್ಲಿ ವಾಣಿಜ್ಯ ಬ್ಯಾಂಕುಗಳು ಹೆಚ್ಚಿನ ನೆರವನ್ನು ನೀಡಲು ಸಾಧ್ಯ ಎಂದರು.

ಎಲ್ಲಾ ಜಿಲ್ಲೆಗಳಲ್ಲೂ ಅನುಷ್ಟಾನಗೊಳಿಸಲಾದ ಯೋಜನೆಗಳಿಂದ ಉಳಿಕೆಯಾದ 12 ಕೋಟಿ ರೂ. ಹಣವನ್ನು ಮಹಿಳಾ ಅಭಿವೃದ್ಧಿ ನಿಗಮದ 24,802 ಫಲಾನುಭವಿಗಳಿಗೆ ಕೋವಿಡ್ ಸಂಕಷ್ಟದಲ್ಲಿ ತಲಾ 10,000 ರೂಗಳಂತೆ ಹಂಚಿಕೆ ಮಾಡಲಾಗಿದೆ ಎಂದರು. ಹೆಚ್.ಐ.ವಿ ಸೋಂಕಿತರ ಮಕ್ಕಳಿಗೆ ಗೌರವಯುತವಾದ ಬದುಕು ರೂಪಿಸಲು ಹೊಸ ಯೋಜನೆಗಳನ್ನು ಜಾರಿಗೆ ತರಲು ರೂಪುರೇಷೆಗಳನ್ನು ಸಿದ್ಧಪಡಿಸಲಾಗಿದ್ದು, ಅದನ್ನು ಶೀಘ್ರದಲ್ಲಿಯೇ ಜಾರಿಗೆ ತರಲಾಗುವುದು ಎಂದರು. ಈ ಸಂದರ್ಭದಲ್ಲಿ ನಿಗಮದಿಂದ ಸಾಲ ಪಡೆದು ಸ್ವ-ಉದ್ಯೋಗವನ್ನು ಸೃಷ್ಟಿಸಿಕೊಂಡು ಯಶಸ್ವಿಯಾದ ಫಲಾನುಭವಿಗಳಿಗೆ ಪ್ರಮಾಣ ಪತ್ರವನ್ನು ನೀಡಲಾಯಿತು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಕಿರಣ್ ಫಡ್ನೇಕರ್, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ. ಚಿದಾನಂದ ಸಂಜು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಆರ್ ಶೇಷಪ್ಪ, ಲೀಡ್‌ಬ್ಯಾಂಕ್ ಮ್ಯಾನೇಜರ್ ಸಿ ರುದ್ರೇಶ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಶಿಲ್ಪಾ ಸುವರ್ಣ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!