Home ಸುದ್ಧಿಗಳು ಪ್ರಾದೇಶಿಕ ಶಿರ್ವ ಸಂತ ಮೇರಿ ಕಾಲೇಜು- ಬಹುಮಾನ ವಿತರಣೆ; ಸಾಧಕರಿಗೆ ಸನ್ಮಾನ

ಶಿರ್ವ ಸಂತ ಮೇರಿ ಕಾಲೇಜು- ಬಹುಮಾನ ವಿತರಣೆ; ಸಾಧಕರಿಗೆ ಸನ್ಮಾನ

489
0

ಶಿರ್ವ: ಸ್ಪರ್ಧಾತ್ಮಕ ಜಗತ್ತಿನಲ್ಲಿ ಯುವಪೀಳಿಗೆ ಬದಲಾಗುತ್ತಿರುವ ಜೀವನಶೈಲಿಯನ್ನು ಅಳವಡಿಸಿಕೊಳ್ಳುತ್ತಾ ಗತಕಾಲದ ವೈಭವಗಳ ಮೌಲ್ಯಗಳನ್ನು, ಜೀವನದ ಪಾಠಗಳನ್ನು ತಿಳಿದು ಉಜ್ವಲ ಭವಿಷ್ಯ ರೂಪಿಸಿಕೊಳ್ಳುವ ಮೂಲಕ ಸಮಾಜಕ್ಕೆ ಮಾದರಿಯಾಗಬೇಕು. ಅದೇ ರೀತಿ ವಿದ್ಯೆ ಕಲಿಸಿದ ಗುರುಗಳಿಗೆ ಮತ್ತು ಸಂಸ್ಥೆಗೆ ತಮ್ಮ ಅಮೂಲ್ಯವಾದ ಕೊಡುಗೆಗಳನ್ನು ನೀಡಬೇಕೆಂದು ಸಂತ ಮೇರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಹಾಗೂ ಸಂತ ಮೇರಿ ಪದವಿ ಕಾಲೇಜಿನ ಪ್ರಥಮ ಬ್ಯಾಚಿನ ಹಳೆ ವಿದ್ಯಾರ್ಥಿನಿ ಐರಿನ್ ಮೆಂಡೋನ್ಸಾ ಹೇಳಿದರು.

ಅವರು ಸಂತ ಮೇರಿ ಮಹಾವಿದ್ಯಾಲಯದಲ್ಲಿ ಬಹುಮಾನ ವಿತರಣೆ ಹಾಗೂ ಸುಸಜ್ಜಿತ ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿದರು. ಕಳೆದ ವರ್ಷ ಮಂಗಳೂರು ವಿಶ್ವವಿದ್ಯಾನಿಲಯದ ರ‍್ಯಾಂಕ್ ಪಡೆದ ಸತ್ಯ ಸುಬ್ರಹ್ಮಣ್ಯ ವಿ.ಎಸ್ (ಬಿ.ಸಿ.ಎ) 4ನೇ ರ‍್ಯಾಂಕ್, ಸ್ನಾತಕೋತ್ತರ ವಾಣಿಜ್ಯ ವಿಭಾಗದಲ್ಲಿ 9ನೇ ರ‍್ಯಾಂಕ್ ಪಡೆದ ಲವಿಟಾ ಮೊರಾಸ್ ಹಾಗೂ ಸಾಧನೆ ಮಾಡಿದ ಅಧ್ಯಾಪಕ ವೃಂದದವರನ್ನು ಕಾಲೇಜಿನ ವತಿಯಿಂದ ಗೌರವಿಸಲಾಯಿತು.

ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ವಿಶ್ವನಾಥ್ ರವರು ಕಾಲೇಜಿನ ಸರ್ವತೋಮುಖ ಬೆಳವಣಿಗಾಗಿ ಸಂಘದ ವತಿಯಿಂದ ಕಾಲೇಜಿನ ಸಂಚಾಲಕರು ಹಾಗೂ ಪ್ರಾಂಶುಪಾಲರಿಗೆ ನಗದನ್ನು ಹಸ್ತಾಂತರಿಸಿ ವಿದ್ಯೆ ಕಳಿಸಿದ ಸಂಸ್ಥೆಗಳಿಗೆ ತಾವು ಸದಾ ಋಣಿ, ಕಾಲೇಜಿನ ಕೀರ್ತಿ ಬೆಳೆಸಿದ ರ‍್ಯಾಂಕ್ ವಿದ್ಯಾರ್ಥಿಗಳನ್ನು ಅಭಿನಂದಿಸಿ ಇನ್ನು ತಮ್ಮಿಂದ ಆಗುವಂತಹ ಒಳ್ಳೆಯ ಕಾರ್ಯಕ್ರಮಗಳನ್ನು ಆಯೋಜಿಸಲು ಕಾಲೇಜಿನ ವತಿಯಿಂದ ಅನುವು ಮಾಡಿಕೊಡಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಸಂತ ಮೇರಿ ಸಮೂಹ ಸಂಸ್ಥೆಗಳ ಸಂಚಾಲಕರಾದ ಅತಿ ವಂದನೀಯ ಧರ್ಮಗುರುಗಳಾದ ಡೆನ್ನಿಸ್ ಅಲೆಕ್ಸಾಂಡರ್ ಡೇಸ ರವರು ನವೀಕೃತಗೊಂಡ ಸುಸಜ್ಜಿತ ಕಂಪ್ಯೂಟರುಗಳನ್ನು ಉದ್ಘಾಟಿಸಿ ಆಶೀರ್ವದಿಸಿದರು. ಕಾಲೇಜಿನ ದೊಡ್ಡ ಆಸ್ತಿ ಎಂದರೆ ಅದು ವಿದ್ಯಾರ್ಥಿಗಳು. ಎಲ್ಲಾ ವಿದ್ಯಾರ್ಥಿಗಳು ಅವರವರ ಚಟುವಟಿಕೆಗಳಲ್ಲಿ ಪ್ರತಿಭಾವಂತರಾಗಿರುತ್ತಾರೆ. ಪ್ರತಿಯೊಬ್ಬ ವಿದ್ಯಾರ್ಥಿಯ ಬೆಳವಣಿಗೆಯಲ್ಲಿ ಶಿಕ್ಷಕರು, ಹೆತ್ತವರು ಹಾಗೂ ಪೋಷಕರ ಪಾತ್ರ ಮಹತ್ವದಾಗಿದೆ. ಹಳೆ ವಿದ್ಯಾರ್ಥಿ ಸಂಘ ವತಿಯಿಂದ ಕಲ್ಪಿಸುವ ಪ್ರತಿಯೊಂದು ಕೊಡುಗೆಯು ಶಿಕ್ಷಣ ಸಂಸ್ಥೆಯ ಬೆಳವಣಿಗೆಗೆ ಪೂರಕವಾಗಿದೆ ಎಂದರು.

ಕಾಲೇಜಿನ ವಾರ್ಷಿಕ ಚಟುವಟಿಕೆಗಳ ವರದಿಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ಹೆರಾಲ್ಡ್ ಐವನ್ ಮೋನಿಸ್ ರವರು ವಾಚಿಸಿದರು. ರ‍್ಯಾಂಕ್ ಪಡೆದ ವಿದ್ಯಾರ್ಥಿಗಳ ಬಗ್ಗೆಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಲೆಫ್ಟಿನೆಂಟ್ ಕೆ ಪ್ರವೀಣ್ ಕುಮಾರ್ ಹಾಗೂ ಸ್ನಾತಕೋತ್ತರ ವಾಣಿಜ್ಯ ವಿಭಾಗದ ಸಂಯೋಜಕರಾದ ಜಗದೀಶ್ ಆಚಾರ್ಯ ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು.

ಸನ್ಮಾನ ಪಡೆದ ವಿದ್ಯಾರ್ಥಿಗಳು ಮಾತನಾಡಿದರು. ಶೈಕ್ಷಣಿಕ ಬಹುಮಾನಗಳ ಪಟ್ಟಿಯನ್ನು ವಿಠಲ್ ನಾಯಕ್ ರವರು ವಾಚಿಸಿದರು. ದತ್ತಿ ಬಹುಮಾನಗಳ ಪಟ್ಟಿಯನ್ನು ದಿವ್ಯಶ್ರೀ ರವರು ವಾಚಿಸಿದರು. ಕ್ರೀಡೆ ಮತ್ತು ಆಟಗಳ ಬಹುಮಾನಗಳ ಪಟ್ಟಿಯನ್ನು ಶ್ರೀ ಜೆಫ್ ಡಿಸೋಜ ವಾಚಿಸಿದರು. ವಿದ್ಯಾರ್ಥಿಗಳಿಗೆ ಮುಖ್ಯ ಅತಿಥಿಗಳು ಹಾಗೂ ಅಧ್ಯಕ್ಷರು ಬಹುಮಾನ ವಿತರಿಸಿದರು.

ಕಾಲೇಜಿನ ಕಚೇರಿ ಅಧೀಕ್ಷಕಿ ಡೊರಿನ್ ಡಿ’ಸಿಲ್ವ, ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಜೆಸಿಂತಾ ಡಿಸೋಜ, ಆಡಳಿತ ಮಂಡಳಿಯ ಸದಸ್ಯರಾದ ಲೀನಾ ಮಚಾದೊ, ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಶೈಲ ವಿಯೋಲ ಕ್ಯಾಸ್ಟಲಿನೋ, ಪೋಷಕರು, ಬೋಧಕ, ಬೋಧಕೇತರರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿರ್ದೇಶಕಿ ಯಶೋದಾ ಸ್ವಾಗತಿಸಿ, ವಿದ್ಯಾರ್ಥಿ ಸಂಘದ ನಾಯಕಿ ದಾಕ್ಷಾಯಿನಿ ವಂದಿಸಿದರು. ಸುಷ್ಮಾ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.