Home ಸುದ್ಧಿಗಳು ಪ್ರಾದೇಶಿಕ ಜಿಲ್ಲೆಯಾದ್ಯಂತ ವೃಕ್ಷಾರೋಪಣ: ಕುಯಿಲಾಡಿ ಸುರೇಶ್ ನಾಯಕ್

ಜಿಲ್ಲೆಯಾದ್ಯಂತ ವೃಕ್ಷಾರೋಪಣ: ಕುಯಿಲಾಡಿ ಸುರೇಶ್ ನಾಯಕ್

398
0

ದೇಶದ ಅಖಂಡತೆ ಮತ್ತು ಸಾರ್ವಭೌಮತೆ ಕಾಪಾಡಲು ಬಲಿದಾನಗೈದ ಅಪ್ರತಿಮ ದೇಶಭಕ್ತ, ಜನಸಂಘದ ಸಂಸ್ಥಾಪಕ ಡಾ. ಶ್ಯಾಮಪ್ರಸಾದ್ ಮುಖರ್ಜಿ ಯವರ ಬಲಿದಾನದ ದಿನ ಜೂನ್ 23ರಿಂದ ಅವರ ಜನ್ಮ ದಿನ ಜುಲೈ 6ರ ವರೆಗೆ 14 ದಿನಗಳ ಪರ್ಯಂತ ಉಡುಪಿ ಜಿಲ್ಲೆಯಾದ್ಯಂತ ಪಕ್ಷದ ವತಿಯಿಂದ ಸಸಿ ನೆಡುವ ಕಾರ್ಯಕ್ರಮದ ಮೂಲಕ ಡಾ. ಶ್ಯಾಮಪ್ರಸಾದ್ ಮುಖರ್ಜಿಯವರ ತತ್ವಾದರ್ಶಗಳು ಮತ್ತು ಜೀವನ ಮೌಲ್ಯಗಳನ್ನು ಗೌರವಿಸಲಾಗುವುದು. ಈ ಬ್ರಹತ್ ಅಭಿಯಾನದಲ್ಲಿ ಪಕ್ಷದ ಎಲ್ಲ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಸಕ್ರಿಯವಾಗಿ ಪಾಲ್ಗೊಂಡು ವೃಕ್ಷಾರೋಪಣ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.

ಅವರು ಡಾ. ಶ್ಯಾಮಪ್ರಸಾದ್ ಮುಖರ್ಜಿ ಬಲಿದಾನ ದಿನದ ಅಂಗವಾಗಿ ಬುಧವಾರ ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ನೇತೃತ್ವದಲ್ಲಿ ಉಡುಪಿಯ ಇಂದ್ರಾಳಿ ರೈಲ್ವೆ ನಿಲ್ದಾಣದ ಪರಿಸರದಲ್ಲಿ ಸಸಿ ನೆಡುವ ಮೂಲಕ ವೃಕ್ಷಾರೋಪಣ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಶ್ಮಿತಾ ಬಾಲಕೃಷ್ಣ ಶೆಟ್ಟಿ, ರೈಲ್ವೆ ಇಂಜಿನಿಯರ್ ವೆಂಕಟೇಶ್, ಬಿಜೆಪಿ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಆಲ್ವಿನ್ ಡಿಸೋಜ, ಬಿಜೆಪಿ ಉಡುಪಿ ನಗರ ಪ್ರಶಿಕ್ಷಣ ವರ್ಗ ಸಂಚಾಲಕ ಲೋಕಯ್ಯ, ಬಿಜೆಪಿ ಉಡುಪಿ ನಗರ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಸುಜಲಾ ಸತೀಶ್, ಸುಧಾ ಪೈ, ಮಹಿಳಾ ಮೋರ್ಚಾ ಪದಾಧಿಕಾರಿಗಳಾದ ಪೂರ್ಣಿಮಾ ರತ್ನಾಕರ್, ಮಾಯಾ ಕಾಮತ್, ದಯಾಶಿನಿ, ಲೈಲಾ ಪ್ರಭಾವತಿ, ರಶ್ಮಿ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.