Sunday, January 19, 2025
Sunday, January 19, 2025

ಬಿಜೆಪಿ ಕಾಪು ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆ

ಬಿಜೆಪಿ ಕಾಪು ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆ

Date:

ಹಿರಿಯಡ್ಕ: ಬಿಜೆಪಿ ಕಾರ್ಯಕರ್ತ ಆಧಾರಿತ ಅತಿ ದೊಡ್ಡ ರಾಜಕೀಯ ಪಕ್ಷ. ಕಾರ್ಯಕರ್ತರೇ ಪಕ್ಷದ ಜೀವಾಳ. ಪಕ್ಷದ ಕಾರ್ಯಕರ್ತರ ಅವಿರತ ಶ್ರಮದ ಫಲವಾಗಿ ಉಡುಪಿ ಜಿಲ್ಲೆಯಲ್ಲಿ ಬಿಜೆಪಿಯ ಬೇರುಗಳು ಸದೃಢವಾಗಿವೆ. ಪಕ್ಷವನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರು ನಿತ್ಯ ನಿರಂತರ ಪಕ್ಷದ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಕರೆ ನೀಡಿದರು. ಅವರು ಸೋಮವಾರ ಹಿರಿಯಡ್ಕದ ಓಂತಿಬೆಟ್ಟು ಆರ್.ಎಸ್.ಬಿ ಸಭಾಂಗಣದಲ್ಲಿ ನಡೆದ ಬಿಜೆಪಿ ಕಾಪು ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

ಇಂದು ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರಕಾರಗಳು ವಿವಿಧ ಜನಪರ ಯೋಜನೆಗಳ ಮೂಲಕ ಅತ್ಯುತ್ತಮ ಕೆಲಸ ಕಾರ್ಯಗಳನ್ನು ಮಾಡುತ್ತಿವೆ. ಕೊರೋನಾ ಮಹಾಮಾರಿಯ ವ್ಯವಸ್ಥಿತ ನಿರ್ವಹಣೆಯ ಜೊತೆಗೆ ಕೃಷಿಕರು, ಕಾರ್ಮಿಕರು, ಜನಸಾಮಾನ್ಯರ ಸಂಕಷ್ಟಕ್ಕೆ ಸ್ಪಂದಿಸಿರುವ ಸರಕಾರ ಎಲ್ಲಾ ಕಠಿಣ ಸವಾಲುಗಳನ್ನು ಸಮರ್ಥವಾಗಿ ನಿಭಾಯಿಸಿದೆ.

ಆದರೆ ವಿರೋಧ ಪಕ್ಷಗಳು ಮಾತ್ರ ಸರಕಾರದ ಯಾವುದೇ ಜನಪರ ಕಾರ್ಯಕ್ರಮಗಳಿಗೆ ಸಹಕಾರ ನೀಡದೇ ಕೇವಲ ಅಪಪ್ರಚಾರದಲ್ಲಿ ತೊಡಗಿಸಿಕೊಂಡಿವೆ. ಈ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರು ಬಿಜೆಪಿ ಸರಕಾರದ ಯೋಜನೆ ಹಾಗೂ ಸಾಧನೆಗಳನ್ನು ಮನೆ ಮನೆಗಳಿಗೆ ತಲುಪಿಸುವ ಮೂಲಕ ಪಕ್ಷ ಸಂಘಟನೆಗೆ ಒತ್ತು ನೀಡಬೇಕು ಎಂದು ಕುಯಿಲಾಡಿ ಹೇಳಿದರು. ಬಿಜೆಪಿ ಕಾಪು ಮಂಡಲಾಧ್ಯಕ್ಷ ಶ್ರೀಕಾಂತ್ ನಾಯಕ್ ವಿಶೇಷ ಕಾರ್ಯಕಾರಿಣಿ ಸಭೆಯ ಅಧ್ಯಕ್ಷತೆ ವಹಿಸಿ, ಪ್ರಾಸ್ತಾವಿಕ ನುಡಿಗಳನ್ನಾಡಿದರು.

ಸಭೆಯಲ್ಲಿ ನಿರ್ಣಯಗಳ ಮಂಡನೆ, ಕಳೆದ ಮೂರು ತಿಂಗಳಲ್ಲಿ ನಡೆದ ಪಕ್ಷದ ಚಟುವಟಿಕೆಗಳು ಹಾಗೂ ಮುಂದಿನ ಮೂರು ತಿಂಗಳಲ್ಲಿ ಅನುಷ್ಠಾನಗೊಳಿಸಬೇಕಾದ ವಿವಿಧ ಕಾರ್ಯಕ್ರಮಗಳ ಬಗ್ಗೆ ಚಿಂತನ ಮಂಥನ ನಡೆಯಿತು.

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಎ. ಸುವರ್ಣ, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಗುರ್ಮೆ ಸುರೇಶ್ ಶೆಟ್ಟಿ, ಗೀತಾಂಜಲಿ ಸುವರ್ಣ, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಕಾಪು ಮಂಡಲ ಪ್ರಭಾರಿ ರವೀಂದ್ರ ಮಡಿವಾಳ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ, ಜಿಲ್ಲಾ ಪಂಚಾಯತ್ ನಿಕಟಪೂರ್ವ ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಕಾಪು ಮಂಡಲ ನಿಕಟಪೂರ್ವ ಅಧ್ಯಕ್ಷ ಪ್ರಕಾಶ್ ಶೆಟ್ಟಿ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಅನಿಲ್ ಶೆಟ್ಟಿ, ಗೋಪಾಲಕೃಷ್ಣ ರಾವ್ ಮತ್ತು ಸಭೆಯ ಅಪೇಕ್ಷಿತರು ಉಪಸ್ಥಿತರಿದ್ದರು. ಮಂಡಲ ವಿಶೇಷ ಕಾರ್ಯಕಾರಿಣಿ ಸಭೆಯ ಸಮಾರೋಪದಲ್ಲಿ ಬಿಜೆಪಿ ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕುಮಾರ್ ಮಂಗಳೂರು ಸಮಾರೋಪ ಭಾಷಣ ಮಾಡಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!